Homeಮುಖಪುಟಸುಳ್ಳು ಸುದ್ದಿ ಪ್ರಕಟ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ವಿರುದ್ಧ 1 ಕೋಟಿ ರೂ ಮಾನನಷ್ಟ...

ಸುಳ್ಳು ಸುದ್ದಿ ಪ್ರಕಟ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ ಶಾಹೀನ್ ಬಾಗ್ ಪ್ರತಿಭಟನಾಕಾರರು 

- Advertisement -
- Advertisement -

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರೋಧಿಸಿ ದೆಹಲಿಯ ಶಾಹೀನ್ ಬಾಗ್‌ನಲ್ಲಿ ತಿಂಗಳುಗಟ್ಟಲೇ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿ ಕಾನೂನು ನೋಟಿಸ್ ಕಳುಹಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ನೀವು ಪೋಸ್ಟ್ ಮಾಡಿದ ಮತ್ತು ಅನುಮೋದಿಸಿದ ವೀಡಿಯೊವನ್ನು ಹಲವಾರು ಮಾಧ್ಯಮ ವೇದಿಕೆಗಳಲ್ಲಿ ಪ್ಲೇ ಮಾಡಲಾಗಿದೆ, ಪ್ರತಿಭಟನಾಕಾರರು ಪ್ರತಿಭಟನೆಯ ಭಾಗವಹಿಸಲು 500-700 ರೂಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದೀರಿ. ಇಂತಹ ಹೇಳಿಕೆಗಳು ಸುಳ್ಳು ಮಾತ್ರವಲ್ಲದೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನಾಕಾರರನ್ನು ಹೀಯಾಳಿಸುವ ಕೆಲಸ ಮಾಡಿದ್ದೀರಿ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ತಪ್ಪು ಮಾಹಿತಿಯನ್ನು ಮೂಲಕ ಸಾಮೂಹಿಕವಾಗಿ ಹರಡುವ ಮೂಲಕ ಸಾರ್ವಜನಿಕರನ್ನು ಮಾಳವಿಯ ದಾರಿತಪ್ಪಿಸಿದ್ದಾರೆ. ಹಾಗಾಗಿ ಪ್ರತಿಭಟನಾಕಾರರನ್ನು ಅವಮಾನಿಸಿದ್ದಕ್ಕಾಗಿ ನೀವು 1 ಕೋಟಿ ರೂ. ಪಾವತಿಸಲು ಹೊಣೆಗಾರರಾಗಿದ್ದೀರಿ” ಎಂದು ಪ್ರತಿಭಟನಾಕಾರರ ಪರ ವಕೀಲರು ಕಳುಹಿಸಿದ ನೋಟಿಸ್ ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ವಿರೋಧಿಸಲು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಜನರು ಈಗ ಶಾಹೀನ್ ಬಾಗ್ ಮತ್ತು ಹತ್ತಿರದ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದರೆ ಈ ಪ್ರತಿಭಟನೆಯ ಯಶಸ್ಸನ್ನು ಸಹಿಸಿಕೊಳ್ಳದ ಕಿಡಿಗೇಡಿಗಳು ಇದರ ವಿರುದ್ಧ ಸುಳ್ಳು ಸುದ್ದಿ ಹರಡಲು ಮುಂದಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

0
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ 'ಪತ್ನಿ' ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರು,...