Homeಮುಖಪುಟನಮ್ಮ ಮನೆಯನ್ನು ವಿಭಜಿಸುವ ಸಿಎಎ, ಎನ್‌ಆರ್‌ಸಿ ನಮಗೆ ಬೇಡ: ಪೂಜಾ ಭಟ್‌

ನಮ್ಮ ಮನೆಯನ್ನು ವಿಭಜಿಸುವ ಸಿಎಎ, ಎನ್‌ಆರ್‌ಸಿ ನಮಗೆ ಬೇಡ: ಪೂಜಾ ಭಟ್‌

- Advertisement -
- Advertisement -

ಸಿಎಎ ಮತ್ತು ಎನ್‌ಆರ್‌ಸಿ ನನ್ನ ಮನೆಯನ್ನು ವಿಭಜಿಸುವ ಕಾರಣ ನಾನು ಅದನ್ನು ಬೆಂಬಲಿಸುವುದಿಲ್ಲ ಎಂದು ಬಾಲಿವುಡ್ ನಟಿ ಮತ್ತು ನಿರ್ಮಾಪಕಿ ಪೂಜಾ ಭಟ್ ಹೇಳಿದ್ದಾರೆ.

ಅವರು ಸೋಮವಾರ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ತಮ್ಮ ಕಾಳಜಿಯನ್ನು ತೋರಿಸಿ, “ದೇಶದಲ್ಲಿ ಎದ್ದಿರುವ ಭಿನ್ನಧ್ವನಿಗಳನ್ನು ಕೇಳಲು ನಮ್ಮ ನಾಯಕರನ್ನು ಮುಂದಾಗಬೇಕು” ಎಂದು ಮನವಿ ಮಾಡಿದ್ದಾರೆ.

ಭಾರತದ ಮಹಿಳೆಯರು ಶಾಹೀನ್ ಬಾಗ್ ಮತ್ತು ಲಕ್ನೋದಲ್ಲಿ ಹೋರಾಟನಿರತರಾಗಿದ್ದಾರೆ. ನಾವು ಜೋರಾಗಿ ಮತ್ತು ಸ್ಪಷ್ಟವಾಗಿ ನಮ್ಮ ಮಾತನ್ನು ಸರ್ಕಾರ ಕೇಳುವವರೆಗೂ ನಾವು ನಿಲ್ಲುವುದಿಲ್ಲ. ನಾನು ಹೆಚ್ಚು ಮಾತನಾಡಲು ಜನರನ್ನು ಬೇಡಿಕೊಳ್ಳುತ್ತೇನೆ. ಸಿಎಎ ಮತ್ತು ಎನ್‌ಆರ್‌ಸಿ ನನ್ನ ಮನೆಯನ್ನು ವಿಭಜಿಸುವುದರಿಂದ ನಾನು ಅದನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಭಿನ್ನಾಭಿಪ್ರಾಯವು ದೇಶಪ್ರೇಮದ ಶ್ರೇಷ್ಠ ಸ್ವರೂಪವಾಗಿದೆ ಎಂದು ಪೂಜಾ ಭಟ್ ಹೇಳಿದ್ದಾರೆ. ಸಿಎಎ ಮತ್ತು  ಎನ್‌ಆರ್‌ಸಿ ವಿರುದ್ಧ ಪ್ರತಿಭಟಿಸುವ ವಿದ್ಯಾರ್ಥಿಗಳು ಆಡಳಿತ ಪಕ್ಷವು ನಮ್ಮನ್ನು ಒಂದುಗೂಡಿಸಿದೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಮಾತನಾಡಿದ ಖ್ಯಾತ ವ್ಯಕ್ತಿಗಳ ಪೈಕಿ ಪೂಜಾ ಭಟ್ ಕೂಡ ಒಬ್ಬರಾಗಿದ್ದಾರೆ. ದಕ್ಷಿಣ ಮುಂಬೈನ ಕೊಲಾಬಾದಲ್ಲಿ ಈ ಕಾರ್ಯಕ್ರಮವನ್ನು ಪಾರ್ಚಮ್ ಫೌಂಡೇಶನ್ ಮತ್ತು ವಿ ದಿ ಪೀಪಲ್ ಆಫ್ ಮಹಾರಾಷ್ಟ್ರ ಆಯೋಜಿಸಿದೆ.

ನಮ್ಮ ಮೌನವು ನಮ್ಮನ್ನು ಉಳಿಸುವುದಿಲ್ಲ ಮತ್ತು ಸರ್ಕಾರವನ್ನು ಉಳಿಸುವುದಿಲ್ಲ. ಆಡಳಿತ ಪಕ್ಷವು ನಮ್ಮನ್ನು ಒಂದುಗೂಡಿಸಿದೆ. ಸಿಎಎ-ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ನಮ್ಮ ಧ್ವನಿ ಎತ್ತುವ ಸಮಯ ಬಂದಿದೆ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಮತ್ತು ರಕ್ಷಿಸುವ ಅಗತ್ಯವನ್ನು ಚರ್ಚಿಸುವುದು ಮತ್ತು ಅವುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಸಮ್ಮೇಳನದ ಉದ್ದೇಶವಾಗಿತ್ತು ಎಂದು ಅದರ ಸಂಘಟಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...