Homeಮುಖಪುಟಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು: ಕವನ ವಾಚಿಸಿದ್ದಕ್ಕಾಗಿ ಪತ್ರಕರ್ತರನ್ನು ಕಸ್ಟಡಿಗೆ ಪಡೆದ ಗಂಗಾವತಿ ಪೊಲೀಸರು!

ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

- Advertisement -
- Advertisement -

ಕೊಪ್ಪಳದ ಆನೆಗೊಂದಿ ಉತ್ಸವದಲ್ಲಿ ಜರುಗಿದ ಕವಿಗೋಷ್ಠಿಯಲ್ಲಿ ಕವಿತೆ ಓದಿದ್ದಕ್ಕಾಗಿ ಕವಿ ಹಾಗೂ ಪತ್ರಕರ್ತ ಸಿರಾಜ್ ಬಿಸರಳ್ಳಿ ಹಾಗೂ ಕನ್ನಡ ನೆಟ್ ಸಂಪಾದಕರಾದ ರಾಜಭಕ್ಷಿಯವರನ್ನು ಗಂಗಾವತಿ ಪೊಲೀಸರು ಇಂದು ಕಸ್ಟಡಿಗೆ ಪಡೆದಿದ್ದಾರೆ. ಆ ಮೂಲಕ ಕವಿತೆಗೆ ಜೈಲುವಾಸವಾಗಿದೆ.

ಇಂದು ಗಂಗಾವತಿ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ಹಿನ್ನೆಲೆಯಲ್ಲಿ ಪೊಲೀಸರು ಕವಿತೆ ಓದಿದ ಮತ್ತು ಪ್ರಸಾರ ಮಾಡಿದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಕೋರ್ಟ್‌ ಆರೋಪಿಗಳ ಜಾಮೀನು ವಿಚಾರಣೆಯನ್ನು ನಾಳೆ ಸಂಜೆಗೆ ಮೂಂದೂಡಿದ್ದಾರೆ.

ಕವಿತೆಯ ಆರೋಪಿಗಳ ಪರ ವಕೀಲರಾದ ಆರ್‌ ಜಗನ್ನಾಥ್‌ ಮಾತನಾಡಿ, ಕವಿತೆ, ಕಾದಂಬರಿ ಥರದ ಸೃಜನಶೀಲ ಸಾಹಿತ್ಯವನ್ನು ಅಭಿವ್ಯಕ್ತಪಡಿಸುವುದು ಸಾಂವಿಧಾನಿಕವಾಗಿ ದಕ್ಕಿರುವ ಹಕ್ಕಾಗಿದೆ. ಅದು ಪ್ರತಿಯೊಬ್ಬ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹಾಗಾಗಿ ಕವಿತೆ ಓದಿದ್ದಕ್ಕೆ ಕ್ರಿಮಿನಲ್ ಕೇಸು ಹಾಕಿದ್ದಲ್ಲದೇ ಪೊಲೀಸರು  ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ನಾಳೆ ಜಾಮೀನು ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಜನವರಿ 9 ರಂದು ಆನೆಗುಂದಿ ಉತ್ಸವದ ಕವಿಗೋಷ್ಠಿಯಲ್ಲಿ ಕೊಪ್ಪಳದ ಸಿರಾಜ್ ಬಿಸ್ರಳ್ಳಿಯವರು ’ನಿನ್ನ ದಾಖಲೆ ಯಾವಾಗ ನೀಡುತ್ತೀ? ಎನ್ನುವ ಪದ್ಯ ಓದಿದ್ದರು. ಇದನ್ನೇ ದೇಶದ್ರೋಹವೆಂದು ಕರೆದು ಬಿಜೆಪಿಯು ದೂರು ನೀಡಿದ್ದರು. ಅದರ ಆಧಾರದಲ್ಲಿ ಖೈ.ನಂ. 23/2020 ರಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 5045052 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಕವಿತೆ ನೋಡಿ

ಈ ಕವನಕ್ಕೆ BJP ದೂರು ನೀಡಿದೆ. ಪೊಲೀಸರು FIR ಹಾಕಿದ್ದಾರೆ.ಸಿರಾಜ್ ಬಿಸ್ರಳ್ಳಿಯವರು ಅನೆಗೊಂದಿ ಉತ್ಸವದಲ್ಲಿ ವಾಚಿಸಿದ ವೈರಲ್ ಆದ ಕವನ ಏಳೆಂಟು ಭಾಷೆಗಳಿಗೆ ಅನುವಾದಗೊಂಡಿದೆ. ನೀವೂ ಕೇಳಿ

Posted by Naanu Gauri on Monday, January 27, 2020

ತದನಂತರ ಪೊಲೀಸರು ವಿಚಾರಣೆ ನೆಪದಲ್ಲಿ ಸಿರಾಜ್‌ ಮತ್ತು ರಾಜಭಕ್ಷಿಯವರ ಮನೆಯವರಿಗೆ ಕಿರುಕುಳ ನೀಡಿದ್ದರು. ನಂತರ ಸಿರಾಜ್‌ ಮತ್ತು ರಾಜಭಕ್ಷಿಯವರನ್ನು ಬಂಧಿಸಲು ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇಂದು ವಿಚಾರಣೆಗೆ ಹಾಜರಾದಾಗ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಹಲವು ವಕೀಲರು ಗಂಗಾವತಿ ಪೊಲೀಸರ ಕ್ರಮವನ್ನು ಟೀಕಿಸಿದ್ದಾರೆ. ಕವಿತೆಗೆ ಜೈಲು ಸರಿಯಲ್ಲ, ನಮ್ಮ ಮೇಲೆಯೂ ಕೇಸು ಹಾಕಿ ಎಂದು ನೂರಾರು ಜನ ಆ ಕವಿತೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಆ ಕವಿತೆ ಸುಮಾರು 12 ಭಾಷೆಗಳಿಗೆ ಅನುವಾದಗೊಂಡಿತ್ತು.

ಅಖಿಲ ಭಾರತ ವಕೀಲ ಒಕ್ಕೂಟದ ಪ್ರಧಾನ‌ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌ ಮಾತನಾಡಿ, ಸಿರಾಜ್ ಬಿಸರಳ್ಳಿ ಹಾಗೂ ರಾಜಬಕ್ಷಿ ಅವರ ಪ್ರಕರಣದಲ್ಲಿ ಮೇಲ್ನೋಟಕ್ಕೆ ರಾಜಕೀಯ ಒತ್ತಡ ಹೇರಲಾಗುತ್ತಿದೆ. ಪೊಲೀಸರು ರಾಜಕೀಯ ಪಕ್ಷದ ಪ್ರತಿನಿಧಿಗಳಂತೆ ವರ್ತಿಸಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂವಿಧಾನ ಹಾಗೂ ಕಾನೂನು ವಿರುದ್ಧವಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...