Homeಮುಖಪುಟಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

ಸಿಂಧನೂರಿನಲ್ಲಿ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಪ್ರತಿಭಟನೆ..

- Advertisement -
- Advertisement -

ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತ ಭೇಟಿ ವಿರೋಧಿಸಿ ಸಿಂಧನೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಫ್ಯಾಸಿಸ್ಟ್‌ ಟ್ರಂಪ್‌ ಗೋ ಬ್ಯಾಕ್‌ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಅಮೆರಿಕಾದ ಹಾಲು, ಚಿಕನ್‌ ನಮಗೆ ಬೇಕಾಗಿಲ್ಲ, ಭಾರತದಲ್ಲಿ ರೈತರು ದಿವಾಳಿಯಾಗಲು ಬಿಡುವುದಿಲ್ಲ, ಲೂಟಿಕೋರರಿಗೆ ಭಾರತ ಮಾರಟಕ್ಕಿಲ್ಲ, ರೈತವಿರೋಧಿ ಮೋದಿ ಸರ್ಕಾರಕ್ಕೆ ಎಂಬ ಘೋಷಣೆಗಳ ಮೂಲಕ ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಅಲ್ಲದೇ ಟ್ರಂಪ್‌ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದ ಹಲವಾರು ರೈತರು “ಜಗತ್ತಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಮಾಡುತ್ತಿರುವ ಅಮೆರಿಕಾ ಭಾರತದ ಮಾರುಕಟ್ಟೆಯನ್ನು ಲೂಟಿಹೊಡೆಯಲು ಬರುತ್ತಿದೆ. ಕುಕ್ಕಟೋಧ್ಯಮ ಮತ್ತು ಹೈನುಗಾರಿಕೆಯನ್ನು ವಶಕ್ಕೆ ಪಡೆಯಲು ಟ್ರಂಪ್‌ ಯೋಜಿಸಿದ್ದಾರೆ. ಹಾಗಾಗಿ ಅವರ ಭೇಟಿಯನ್ನು ವಿರೋಧಿಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್‌ ಗೋರೆಬಾಳ್‌ ಮಾತನಾಡಿ “ದೇಶದ ಜನರು ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದಲ್ಲಿ ತೊಡಗಿದ್ದರೆ, ಇದೇ ಸಂದರ್ಭದಲ್ಲಿ ಭಾರತವನ್ನು ಲೂಟಿ ಹೊಡೆಯಲು ಅಮೆರಿಕಾದ ಅಧ್ಯಕ್ಷರನ್ನು ಆಹ್ವಾನ ಮಾಡಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವ ಹುನ್ನಾರ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

2002ರಲ್ಲಿ ನರಮೇಧದ ಮೂಲಕ ಸಾವಿರಾರು ಜನರ ಸಾವಿಗೆ ಕಾರಣವಾಗಿದ್ದರು ಎಂದು ಅಮೇರಿಕ 10 ವರ್ಷಗಳ ಕಾಲ ನರೇಂದ್ರ ಮೋದಿಯವರಿಗೆ ವೀಸಾ ಕೊಡದೇ ಅಮೆರಿಕಾ ಭೇಟಿಗೆ ತಡೆಯೊಡ್ಡಿತ್ತು. ಆದರೆ ಪ್ರಧಾನಿಯಾದ ಕೂಡಲೇ ಅವರನ್ನು ಹೌಡಿ ಮೋದಿ ಎಂಬ ಕಾರ್ಯಕ್ರಮದ ಮೂಲಕ ಆಹ್ವಾನ ಮಾಡುತ್ತಾರೆ. ಏಕೆಂದರೆ ಅಮೆರಿಕಕ್ಕೆ ಲಾಭ ಮತ್ತು ಮಾರುಕಟ್ಟೆ ಮುಖ್ಯವೇ ಹೊರತು ಬೇರೇನಲ್ಲ ಎಂದಿದ್ದಾರೆ.

ಭಾರತದ ದೇಶದ ಬ್ಲಾಕ್‌ಬೆರ್‍ರಿ, ಚೆರ್‍ರಿ ಹಣ್ಣುಗಳಿಗೆ, ಹೈನುಗಾರಿಕೆಗೆ ಮಾರುಕಟ್ಟೆಯನ್ನು ಅಮೆರಿಕಾಕ್ಕೆ ಮುಕ್ತವಾಗಿ ತೆರಿಗೆ ರಹಿತವಾಗಿ ತೆರೆದಿಡಬೇಕೆಂದು ಆ ದೇಶ ಬಯಸುತ್ತಿದೆ. ನಮ್ಮ ದೇಶದಲ್ಲಿ 8 ಕೋಟಿ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಕಾದಷ್ಟು ಕುಕ್ಕೊಟೋಧ್ಯಮ ಇದೆ. ಹಾಗಿರುವಾಗಲೇ ಬಲವಂತದ ಆಮದು ಮಾಡಿಕೊಳ್ಳಲು ಒತ್ತಾಯಿಸಲಾಗುತ್ತಿದೆ ಎಂದು ದೂರಿದರು.

ಅಲ್ಲದೇ ನಮ್ಮ ದೇಶದಿಂದ ಅಲ್ಯುಮಿಲಿಯಂ ಮತ್ತು ಉಕ್ಕಿನ ವಸ್ತುಗಳನ್ನು ಅಮೆರಿಕಾಕಕ್ಕೆ ಕಡಿಮೆ ತೆರಿಗೆಯಲ್ಲಿ ರಫ್ತು ಮಾಡಲಾಗುತ್ತಿತ್ತು. ಅದನ್ನು ಅಮೆರಿಕಾ ನಿಲ್ಲಿಸದೆ. ಅಲ್ಲದೇ ಅಭಿವೃದ್ಧಿ ಶೀಲ ದೇಶಗಳ ಪಟ್ಟಿಯಿಂದ ಭಾರತವನ್ನು ಅಮೆರಿಕ ಕೈಬಿಟ್ಟಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸುತ್ತಿರುವುದು ಯಾವ ಉದ್ದೇಶಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಯುದ್ಧ ಸಾಮಾಗ್ರಿಗಳನ್ನು ಯಥೇಚ್ಚವಾಗಿ ಭಾರತ ಆಮದು ಮಾಡಿಕೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈಗಾಗಲೇ 6 ಅಪಾಚಿ ಹೆಲಿಕ್ಯಾಪ್ಟರ್‌ಗಳನ್ನು ಖರೀದಿಸಲಾಗಿದ್ದು, ಇನ್ನು 72ನ್ನು ಖರೀದಿಸಲು ಮುಂದಾಗಿದೆ. ಅದೂ ಕೂಡ ಡಬಲ್‌ ಬೆಲೆಗೆ ಕೊಂಡುಕೊಳ್ಳುವ ಮೂಲಕ ದೇಶದ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುವ ಹೋರಾಟಗಾರ ನಾಗರಾಜ್‌ ಪೂಜಾರ್‌ ಮಾತನಾಡಿ “ದೇಶವನ್ನು ಲೂಟಿ ಹೊಡೆಯಲು ಬರುತ್ತಿರುವ ಟ್ರಂಪ್‌ ಭೇಟಿಗೆ ನೂರಾರು ಕೋಟಿ ಖರ್ಚು ಮಾಡುತ್ತಿರುವ ಮೋದಿ ಸರ್ಕಾರದ ನಡೆಯನ್ನು ವಿರೋಧಿಸುತ್ತೇವೆ”‍ ರೈತ ವಿರೋಧಿ ಟ್ರಂಪ್‌ಗೆ ನಮ್ಮ ನೆಲವನ್ನು ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...