Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...