Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...