Homeಮುಖಪುಟಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ಲಲಿತಾ ಕುಮಾರಿ ಪ್ರಕರಣ ದಿಲ್ಲಿ ಪೊಲೀಸರಿಗೆ ಮಾದರಿಯಾಗಲಿ: ನ್ಯಾ. ಮುರಳೀಧರ್

ದಿಲ್ಲಿ ಪೊಲೀಸರು ಲಲಿತಾ ಕುಮಾರಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಕಲಿಯಬೇಕು ಮತ್ತು ಕಾನೂನು ಹೇಗೆ ಹೇಳುತ್ತದೆಯೋ ತಪ್ಪದೇ ಅದಕ್ಕನುಗುಣವಾಗಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಮುರಳೀಧರ್ ಹೇಳಿದ್ದಾರೆ.

- Advertisement -
- Advertisement -

-ಅಪರ್ಣಾ ಮಂಧಾನಿ

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ನ್ಯಾ. ಮುರಳೀಧರ್ ಅವರ ನಡುವಿನ ಆಕರ್ಣೀಯ ಸಂಭಾಷಣೆಗೆ ಸಾಕ್ಷಿಯಾಯಿತು.

ದಿಲ್ಲಿ ಹೈಕೋರ್ಟ್ ಈಶಾನ್ಯ ದಿಲ್ಲಿಯಲ್ಲಿ ಫೆಬ್ರವರಿ 23,24,25ರಂದು ನಡೆದ ಯೋಜಿತ ಗಲಭೆಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ತನಿಖೆ ನಡೆಯಬೇಕು ಮತ್ತು ಬಿಜೆಪಿ ನಾಯಕರಾದ ಪರ್ವೇಶ್ ವರ್ಮಾ, ಅನುರಾಗ್ ಠಾಕೂರ್, ಕಪಿಲ್ ಮಿಶ್ರಾ ಮುಂತಾದವರ ಮೇಲೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಹರೀಶ್ ಮಂದರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆಯ ವೇಳೆ ಅಧಿಕಾರಿಗಳ ಮೇಲೆ ಕಟುವಾಗಿ ದಾಳಿ ನಡೆಸಿದ ನ್ಯಾ. ಮುರಳೀಧರ್, “ತನಿಖೆಯು ಲಲಿತಾ ಕುಮಾರಿ ವಿರುದ್ಧ  ಉತ್ತರ ಪ್ರದೇಶ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿರುವ ತೀರ್ಪಿನಿಂದ ನಿರ್ದೇಶಿತವಾಗಬೇಕು ಮತ್ತು ಪೊಲೀಸರು ಕಾನೂನಿನಲ್ಲಿ ಹೇಳಿರುವಂತೆಯೇ ಕೆಲಸ ಮಾಡಬೇಕು” ಎಂದು ಹೇಳಿದರು.

ಪ್ರಕರಣವು ಹೈಕೋರ್ಟಿನ ಇನ್ನೊಂದು ಪೀಠದಲ್ಲಿ ವಿಚಾರಣೆಗೆ ಬಂದಾಗಲೂ ಹರೀಶ್ ಮಂದರ್ ಪರ ವಾದಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ತನ್ನ ವಾದದಲ್ಲಿ 2013ರ ಲಲಿತಾ ಕುಮಾರಿ ಪ್ರಕರಣವನ್ನು ಬಹುವಾಗಿ ಅವಲಂಬಿಸಿದರು. ಈ ಪ್ರಕರಣವು ಎಪ್ರಿಲ್‌ನಲ್ಲಿ ಮತ್ತೆ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ‘ದಿ ಪ್ರಿಂಟ್’ ಲಲಿತಾ ಕುಮಾರಿ ಪ್ರಕರಣದ ತೀರ್ಪನ್ನು ವಿವರಿಸಿದೆ.

ಲಲಿತಾ ಕುಮಾರಿ ಯಾರು?

ಲಲಿತಾ ಕುಮಾರಿ ಅಪ್ರಾಪ್ತ ವಯಸ್ಸಿನ ಒಬ್ಬಳು ಬಾಲಕಿಯಾಗಿದ್ದು, ಆಕೆಯನ್ನು ಅಪಹರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಭೋಲಾ ಕಮತ್ ಸುಪ್ರೀಂಕೋರ್ಟಿನಲ್ಲಿ ಹೇಬಿಯಸ್ ಕೋರ್ಪಸ್ ಅರ್ಜಿ ಸಲ್ಲಿಸಿದ್ದರು. ತಾನು ಸಂಬಂಧಪಟ್ಟ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ವಿವರವಾದ ವರದಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದರು. ವಿಷಯ ಪೊಲೀಸ್ ಸುಪರಿಂಟೆಂಟ್‌ಗೆ ತಲುಪಿದ ಬಳಿಕವಷ್ಟೇ ಎಫ್ಐಆರ್ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೇಶದ ಉದ್ದಗಲಕ್ಕೂ ಪ್ರಕರಣದಿಂದ ಪ್ರಕರಣಕ್ಕೆ ಎಫ್ಐಆರ್ ನೋಂದಣಿಯಲ್ಲಿ ವ್ಯತ್ಯಯವಿರುವುದನ್ನು ಗಮನಿಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನೋಟೀಸು ಜಾರಿ ಮಾಡಿತು. ಕ್ರಿಮಿನಲ್ ಪ್ರೊಸಿಜರ್ ಕೋಡ್ (ಸಿಆರ್‌ಪಿಸಿ)ನ ವಿಧಿ 154ರ ಅನ್ವಯ ಗಂಭೀರ (ಗುರುತರ) ದಂಡನಾರ್ಹ ಅಪರಾಧವೊಂದು (cognisable offence) ಘಟಿಸಿರುವ ಕುರಿತು ಮಾಹಿತಿ ಸಿಕ್ಕಿದ ತಕ್ಷಣ ಪೊಲೀಸ್ ಅಧಿಕಾರಿಗಳು ಎಫ್ಐಆರ್ ದಾಖಲಿಸುವುದಕ್ಕೆ ಬದ್ಧರೇ ಎಂಬ ಕುರಿತು ವಿವಿಧ ನ್ಯಾಯಾಲಯಗಳು ತದ್ವಿರುದ್ಧವಾದ ತೀರ್ಪುಗಳನ್ನು ನೀಡಿವುದನ್ನೂ ಮೂವರು ಸದಸ್ಯರ ಸಂವಿಧಾನ ಪೀಠ ಪರಿಶೀಲಿಸಿತು.

ಗಂಭೀರ ದಂಡನಾರ್ಹ ಅಪರಾಧವೆಂದರೆ, ಪೊಲೀಸರು ಯಾವುದೇ ವಾರಂಟ್ ಇಲ್ಲದೆಯೇ ವ್ಯಕ್ತಿಯನ್ನು ಬಂಧಿಸಬಹುದಾದ ಅಪರಾಧ. ಇವುಗಳಲ್ಲಿ ಕೊಲೆ, ಅತ್ಯಾಚಾರ, ವರದಕ್ಷಿಣೆ ಸಾವು, ಅಪಹರಣ ಇತ್ಯಾದಿಗಳು ಬರುತ್ತವೆ. ಗುರುತರವಾದ ಅಪರಾಧದ ಕುರಿತಾಗಿ ಪಡೆದ ಮಾಹಿತಿಯನ್ನು ಯಾವ ರೀತಿಯಲ್ಲಿ ಪರಿಗಣಿಸಬೇಕು ಎಂಬ ಕುರಿತು ಸಿಆರ್‌ಪಿಸಿಯ ವಿಧಿ 154ರಲ್ಲಿ ವಿವರಿಸಲಾಗಿದೆ. ಎಫ್ಐಆರ್‌ನ ಕಡ್ಡಾಯ ನೋಂದಣಿಯ ಪ್ರಶ್ನೆಯನ್ನು ನಂತರ ಐವರು ನ್ಯಾಯಾಧೀಶರ ಪೀಠಕ್ಕೆ ಸಲ್ಲಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ

ಲಲಿತಾ ಕುಮಾರಿ ಪ್ರಕರಣದಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸುಪ್ರೀಂಕೋರ್ಟ್ ಎಂಟು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿತ್ತು.

ಪಡೆದ ಮಾಹಿತಿಯು ಗುರುತರವಾದ ಅಪರಾಧ ಘಟಿಸಿರುವುದನ್ನು ಸೂಚಿಸುತ್ತಿದ್ದರೆ, ಸಿಆರ್‌ಪಿಸಿ ವಿಧಿ 154ರ ಅನ್ವಯ ಎಫ್ಐಆರ್ ದಾಖಲಿಸುವುದು ಕಡ್ಡಾಯ ಎಂದು ಪೀಠವು ತೀರ್ಪು ನೀಡಿತು. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ತನಿಖೆಗೆ ಅವಕಾಶವಿಲ್ಲ ಎಂದು ಅದು ಹೇಳಿತು.  “ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಬಹಿರಂಗಗೊಳಿಸಲಾದಾಗ ಪೊಲೀಸ್ ಅಧಿಕಾರಿಯು ತನ್ನ ಕರ್ತವ್ಯದಿಂದ ನುಣುಚಿಕೊಳ್ಳುವಂತಿಲ್ಲ. ಗುರುತರ ಅಪರಾಧ ಘಟಿಸಿರುವ ಮಾಹಿತಿಯನ್ನು ಪಡೆದ ತಕ್ಷಣ ಎಫ್‌ಐಆರ್ ದಾಖಲಿಸದೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಯ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಪೂರ್ವಭಾವಿ ತನಿಖೆ ನಡೆಸಬಹುದಾದಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಅದು ವಾಸ್ತವಾಂಶಗಳು ಮತ್ತು ಸಂದರ್ಭಗಳ ಮೇಲೆ ಅವಲಂಬಿಸಿದೆ ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಇಂತಹಾ ಪ್ರಕರಣಗಳ ಒಂದು ವಿವರವಾದ ಯಾದಿಯನ್ನೇ ನೀಡಿದೆ. ಅವುಗಳಲ್ಲಿ ದಾಂಪತ್ಯ/ ಕೌಟುಂಬಿಕ ಕಲಹಗಳು, ವಾಣಿಜ್ಯ ಅಪರಾಧಗಳು, ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳು, ಭ್ರಷ್ಟಾಚಾರದ ಪ್ರಕರಣಗಳು ಇತ್ಯಾದಿಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೊದಲು ಪೂರ್ವಭಾವಿ ತನಿಖೆಯ ಅಗತ್ಯವಿದ್ದು, ಎಫ್‌ಐಆರ್ ದಾಖಲೆಯಲ್ಲಿ ವಿಳಂಬವಾಗಬಹುದು.

ಯಾವುದೇ ಪ್ರಕರಣದಲ್ಲಿ ಏಳು ದಿನಗಳ ಒಳಗಾಗಿ ತನಿಖೆಯನ್ನು ಆರಂಭಿಸಬೇಕು ಎಂದು ಕೂಡಾ ಸುಪ್ರೀಂಕೋರ್ಟ್ ಆದೇಶಿಸಿತ್ತು. 2014ರ ಮಾರ್ಚ್ ತಿಂಗಳಲ್ಲಿ ಇದನ್ನು ಬದಲಿಸಿ ಸಾಮಾನ್ಯ ಪ್ರಕರಣಗಳಲ್ಲಿ ಸಮಯದ ಮಿತಿಯನ್ನು 15 ದಿನಗಳಿಗೆ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಆರು ವಾರಗಳಿಗೆ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...