Homeಕರ್ನಾಟಕಕೆ.ಪಿ.ಎಸ್.ಸಿ ಭ್ರಷ್ಟಾಚಾರದಿಂದ ಸಾರ್ವಜನಿಕ ಆಡಳಿತಕ್ಕೆ ಹಿನ್ನಡೆ..

ಕೆ.ಪಿ.ಎಸ್.ಸಿ ಭ್ರಷ್ಟಾಚಾರದಿಂದ ಸಾರ್ವಜನಿಕ ಆಡಳಿತಕ್ಕೆ ಹಿನ್ನಡೆ..

ಭಾರತದ ಸರ್ವೋಚ್ಛ ನ್ಯಾಯಾಲಯ ಉತ್ತರ ಪ್ರದೇಶ ಲೋಕಸೇವಾ ಆಯೋಗಕ್ಕೆ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲನೆಗಾಗಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಹೊಣೆಗಾರಿಕೆಗಳ ಹಿನ್ನೆಲೆಯಲ್ಲಿ ಒದಗಿಸಬೇಕೆಂದು ದಿನಾಂಕ 16-07-2018ರಂದು ಸ್ಪಷ್ಟ ನಿರ್ದೇಶನ ನೀಡಿತ್ತು.

- Advertisement -
- Advertisement -

ಭಾರತದಂತಹ ಅಭಿವೃದ್ಧಿಶೀಲ ದೇಶದಲ್ಲಿ ಸುಗಮ ಆಡಳಿತ ಮತ್ತು ಒಳಗೊಳ್ಳುವ ಅಭಿವೃದ್ಧಿ ಪ್ರಕ್ರಿಯೆಗಳು ವಿಶೇಷ ಮಹತ್ವ ಹೊಂದಿವೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ವರಾಜ್ಯದ ಸಂಕೇತವಾದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸುರಾಜ್ಯದ ಸಂಕೇತವಾಗಿದ್ದಾರೆ. ಸ್ವಾತಂತ್ರ್ಯಾನಂತರದಲ್ಲಿ ರಾಜಕೀಯ ಇಚ್ಛಾಶಕ್ತಿ ಮತ್ತು ಸಾಮಾಜಿಕ ಹೋರಾಟಗಳ ಕೊರತೆಯಿಂದಾಗಿ ಸಾರ್ವಜನಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರವುಂಟಾಗಿ ಸಾರ್ವಜನಿಕ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸುಗಮ ನಿರ್ವಹಣೆಗಾಗಿ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗ ಇದುವರೆಗೂ ಭ್ರಷ್ಟಾಚಾರ ಮುಕ್ತ ನೇಮಕಾತಿಗೆ ದೇಶದಾದ್ಯಂತ ಹೆಸರಾಗಿದೆ. ಆದರೆ ಕರ್ನಾಟಕ ರಾಜ್ಯವನ್ನೂ ಒಳಗೊಂಡಂತೆ ವಿವಿಧ ರಾಜ್ಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಲೋಕಸೇವಾ ಆಯೋಗಗಳು ನೇಮಕಾತಿಗೆ ಸಂಬಂಧಿಸಿದಂತೆ ನಡೆಸಿರುವ ಅಕ್ರಮ, ಅವ್ಯವಹಾರ ಮತ್ತು ಭ್ರಷ್ಟಾಚಾರಗಳು ಮಾಧ್ಯಮಗಳು ಮತ್ತು ನಾಗರೀಕ ಸಮಾಜಗಳಲ್ಲಿ ಗಂಭೀರ ಟೀಕೆಗೆ ಗುರಿಯಾಗಿವೆ.

ಕರ್ನಾಟಕ ಲೋಕಸೇವಾ ಆಯೋಗ 2015ರಲ್ಲಿ ಸುಮಾರು 428 ಹುದ್ದೆಗಳ ಆಯ್ಕೆಯಲ್ಲಿ ನಡೆಸಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಅಕ್ರಮಗಳು ದೇಶದ ಗಮನ ಸೆಳೆದಿವೆ. ಈ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಮೇ 15, 2017ರಲ್ಲಿ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಡಿಸೆಂಬರ್ ತಿಂಗಳ ಒಳಗಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳನ್ನು ನಡೆಸಿದೆ. ಆದರೆ ಸುಮಾರು 2 ವರ್ಷಗಳ ನಂತರ ಡಿಸೆಂಬರ್ 23, 2019ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿರುವುದು ನೇಮಕಾತಿಯಲ್ಲಿ ಜರುಗಿರುವ ಅಕ್ರಮಗಳಿಗೆ ಸಾಕ್ಷಿಯಾಗಿದೆ. ಸುಮಾರು 7 ದಿನಗಳ ಕಾಲಾವಕಾಶ ನೀಡಿ ಆಯ್ಕೆ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಆಯೋಗ ಅಭ್ಯರ್ಥಿಗಳಿಗೆ ಸೂಚನೆ ನೀಡಿರುವುದರ ಹಿಂದೆ ವ್ಯಾಪಕ ಭ್ರಷ್ಟಾಚಾರ ನಡೆದಿರುವುದಕ್ಕೆ ಪುರಾವೆಯಾಗಿದೆ.

ವಾಸ್ತವವಾಗಿ ಇದೇ ಆಯೋಗ 2014ರ ನೇಮಕಾತಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಕೆಗೆ ಸುಮಾರು 30 ದಿನಗಳ ಕಾಲಾವಕಾಶ ನೀಡಿತ್ತು. ಕೆ.ಪಿ.ಎಸ್.ಸಿ ನಿಯಮಾವಳಿಗಳ ಪ್ರಕಾರ ಕನಿಷ್ಟ 15 ದಿನಗಳ ಸಮಯಾವಕಾಶ ನೀಡುವ ಶಿಷ್ಟಾಚಾರವನ್ನು ಗಾಳಿಗೆ ತೂರಿ ಸುಮಾರು 7 ದಿನಗಳ ಕಡಿಮೆ ಅವಧಿಯನ್ನು ಆಕ್ಷೇಪಣೆ ಸಲ್ಲಿಕೆಗೆ ನೀಡಿರುವುದರ ಹಿಂದೆ ಭ್ರಷ್ಟಾಚಾರದ ಪ್ರಭಾವ ಎದ್ದು ಕಾಣುತ್ತದೆ. ವಿಶೇಷವಾಗಿ ಈ 7 ದಿನಗಳ ಅವಧಿಯಲ್ಲಿ ಕ್ರಿಸ್‍ಮಸ್ ರಜೆ, 4ನೇ ಶನಿವಾರ ಹಾಗೂ ಭಾನುವಾರ ಸೇರಿದಂತೆ 3 ದಿನಗಳ ಸರ್ಕಾರಿ ರಜೆ ಇದ್ದುದನ್ನು ಸಂಬಂಧಪಟ್ಟವರು ಗಂಭೀರವಾಗಿ ಪರಿಗಣಿಸಬೇಕು. ಹಿಂದೆ ಆಯ್ಕೆಯಾಗಿರುವ ಮತ್ತು ಆಯ್ಕೆಯಾಗದಿರುವ ಅಭ್ಯರ್ಥಿಗಳ ವಿಷಯವಾರು ಅಂಕಗಳನ್ನು ಆಯೋಗ ಪ್ರಕಟಿಸಿದೆ. ಆದರೆ 2015ರ ನೇಮಕಾತಿಗೆ ಸಂಬಂಧಿಸಿದಂತೆ ಕೇವಲ ಆಯ್ಕೆ ಹೊಂದಿರುವ ಅಭ್ಯರ್ಥಿಗಳ ಅಂಕಗಳನ್ನು ಮಾತ್ರ ಇ-ಮೇಲ್ ಮೂಲಕ ಪ್ರಕಟಿಸಿರುವುದರ ಹಿಂದೆ ಸ್ಥಾಪಿತ ಹಿತಾಸಕ್ತಿಗಳ ಹುನ್ನಾರ ಪ್ರಧಾನವಾಗಿ ಕಂಡುಬರುತ್ತದೆ. ಅಲ್ಲದೆ ಇ-ಮೇಲ್‍ಗಳ ಪ್ರಕಟಿಸಿರುವ ಅಂಕಪಟ್ಟಿಯಲ್ಲಿ ಯಾವುದೇ ವಿದ್ಯುನ್ಮಾನ ಭದ್ರತೆ, ಸಂಬಂಧಿಸಿದ ಅಧಿಕಾರಿಯ ಸಹಿ ಮತ್ತು ಆಯೋಗದ ಲಾಂಛನಗಳು ಕಂಡುಬಂದಿಲ್ಲ.

ನ್ಯಾಯವಂಚಿತ ಅರ್ಹ ಅಭ್ಯರ್ಥಿಗಳು ಮಾಹಿತಿ ಹಕ್ಕು ಅಧಿನಿಯಮ, 2005ರ ಅನ್ವಯ ಕಾನೂನು ಬದ್ಧವಾಗಿ ಮುಖ್ಯ ಪರೀಕ್ಷೆಯ ವಿಷಯವಾರು ಅಂಕ ಹಾಗೂ ಉತ್ತರ ಪತ್ರಿಕೆಗಳನ್ನು ಒದಗಿಸಲು ದಿನಾಂಕ 31-12-2019ರಲ್ಲಿ ಆಯೋಗವನ್ನು ಸಂಪರ್ಕಿಸಿದ್ದರು. ದಿನಾಂಕ 09-01-2020ರಂದು ಆಯೋಗ ‘ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿಲ್ಲವಾದ ಕಾರಣ ನೀವು ಕೋರಿರುವ ಮಾಹಿತಿ ಒದಗಿಸಲು ಸಾಧ್ಯವಿಲ್ಲ’ವೆಂಬ ನೆಪ ನೀಡಿ ಮರು ದಿನವೇ ಅಂದರೆ ದಿನಾಂಕ 10-01-2020ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿರುವುದು ಅಕ್ರಮ ನೇಮಕಾತಿಗೆ ಸ್ಪಷ್ಟ ಉದಾಹರಣೆಯಾಗಿದೆ. ವಾಸ್ತವವಾಗಿ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳಲ್ಲಿ ಮೌಲ್ಯಮಾಪಕರ ಹೆಸರು, ಸಹಿ ಮತ್ತು ಗುರುತುಗಳು ಇಲ್ಲದಿರುವುದು ಆಯೋಗ ನಡೆಸಿರುವ ಅಕ್ರಮಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆಯಾಗಿದೆ. ರಾಜ್ಯ ಲೋಕಸೇವಾ ಆಯೋಗವು ಉಚ್ಛನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ ಉತ್ತರ ಪತ್ರಿಕೆಗಳನ್ನು ಕೊಡಲು ನಿರಾಕರಿಸಿರುವುದು ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿದೆಯೆಂಬುದನ್ನು ಕರ್ನಾಟಕ ರಾಜ್ಯ ಸರ್ಕಾರ ಗಮನಿಸಬೇಕು.

ಭಾರತದ ಸರ್ವೋಚ್ಛ ನ್ಯಾಯಾಲಯ ಉತ್ತರ ಪ್ರದೇಶ ಲೋಕಸೇವಾ ಆಯೋಗಕ್ಕೆ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲನೆಗಾಗಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಹೊಣೆಗಾರಿಕೆಗಳ ಹಿನ್ನೆಲೆಯಲ್ಲಿ ಒದಗಿಸಬೇಕೆಂದು ದಿನಾಂಕ 16-07-2018ರಂದು ಸ್ಪಷ್ಟ ನಿರ್ದೇಶನ ನೀಡಿತ್ತು. ಸಾರ್ವಜನಿಕ ಹಿತದೃಷ್ಟಿಯಿಂದ ‘ಪರೀಕ್ಷಕನು ಅಭ್ಯರ್ಥಿಗಳ ಉತ್ತರ ಪತ್ರಿಕೆ ಹಾಗೂ ಲಿಪಿಯೊಂದಿಗೆ ವಿಶ್ವಾಸಾರ್ಹ ಸಂಬಂಧವನ್ನು ಹೊಂದಿಲ್ಲದ ಕಾರಣ’ ಲೋಕಸೇವಾ ಆಯೋಗ ಉತ್ತರ ಪತ್ರಿಕೆಗಳನ್ನು ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಒದಗಿಸಬೇಕು ಎಂಬ ನಿರ್ದೇಶನವಿದ್ದಾಗ್ಯೂ ಕರ್ನಾಟಕ ಲೋಕಸೇವಾ ಆಯೋಗ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳನ್ನು ಕೊಡಲು ನಿರಾಕರಿಸಿರುವುದು ನ್ಯಾಯಾಂಗ ನಿಂದನೆ ಅಪರಾಧ ಮತ್ತು ನೇಮಕಾತಿ ಅಕ್ರಮಗಳಿಗೆ ಸೂಕ್ತ ಪುರಾವೆಗಳನ್ನು ಒದಗಿಸುತ್ತದೆ.

‘ಕರ್ನಾಟಕ ಲೋಕಸೇವಾ ಆಯೋಗವು ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ಪ್ರತಿಗಳನ್ನು ಕೊಡಲು ನಿರಾಕರಿಸಿರುವುದು ಭ್ರಷ್ಟ ಪ್ರವೃತ್ತಿಗೆ ನೇರ ಸಾಕ್ಷಿಯಾಗಿದೆ’ ಎಂದು ಕೆಎಎಸ್ ನೊಂದ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆಯ ಪ್ರಧಾನ ಸಂಚಾಲಕಿ ಶ್ರೀಮತಿ ಆಯಿಷಾ ಫರ್ಝಾನ ಪ್ರತಿಪಾದಿಸಿರುವುದು ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ದೃಷ್ಟಿಯಿಂದ ಅತ್ಯಂತ ಔಚಿತ್ಯಪೂರ್ಣವಾಗಿದೆ ಮತ್ತು ಕಾನೂನುಬದ್ಧವಾಗಿದೆ. 2015ರ ಕೆಎಎಸ್ ಪರೀಕ್ಷೆಗಳ ಮೌಲ್ಯಮಾಪನ ಅತ್ಯಂತ ಅನುಮಾನಾಸ್ಪದವಾಗಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅವಧಿಯಲ್ಲಿ ಸಂಬಂಧಪಟ್ಟ ಮೌಲ್ಯಮಾಪಕರ ಚಲನವಲನಗಳನ್ನು ಅಧಿಕೃತವಾಗಿ ದಾಖಲಿಸಿರುವ ಸಂಬಂಧಪಟ್ಟ ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸುವಂತೆ ಲೋಕಸೇವಾ ಆಯೋಗಕ್ಕೆ ಅಭ್ಯರ್ಥಿಗಳು ಮಾಹಿತಿ ಹಕ್ಕಿನನ್ವಯ ಸಲ್ಲಿಸಿರುವ ಅರ್ಜಿಗೆ 30 ದಿನಗಳ ನಿಗಧಿತ ಅವಧಿಯ ನಂತರವೂ ಯಾವುದೇ ಸ್ಪಂದನೆ ಬಂದಿಲ್ಲದಿರುವುದು ಪಾರದರ್ಶಕತೆಗೆ ಕೊಡಲಿಪೆಟ್ಟು ಬಿದ್ದಂತಾಗಿದೆಯೆಂದು ಅರ್ಜಿದಾರ ಸುಧನ್ವ ಅಭಿಪ್ರಾಯಪಟ್ಟಿದ್ದಾರೆ.

ಅಭ್ಯರ್ಥಿಗಳು ಪಡೆದ ಅಂಕಗಳನ್ನು ವ್ಯವಸ್ಥಿತವಾಗಿ ವಿಷಯವಾರು ವಿಘಟನೆ ಮಾಡದಿರುವುದರಿಂದ ನೊಂದ ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸುಮಾರು 7 ವಿಷಯಗಳಲ್ಲಿ (ತಲಾ 250 ಅಂಕಗಳು) ಮತ್ತು ಸಂದರ್ಶನ (200 ಅಂಕಗಳು) ಒಟ್ಟು 1950 ಅಂಕಗಳಲ್ಲಿ ಅಭ್ಯರ್ಥಿಗಳು ಪಡೆದಿರುವ ವಿಷಯವಾರು ಅಂಕಗಳನ್ನು ಸ್ಪಷ್ಟವಾಗಿ ಬೇರ್ಪಡಿಸಿ ನಮೂದಿಸಬೇಕೆಂದು ಅಭ್ಯರ್ಥಿಗಳು ಮಾಡಿರುವ ಮನವಿ ಅರ್ಥಪೂರ್ಣವಾಗಿದೆ. ಪ್ರಸ್ತುತ 2015ರ ಪರೀಕ್ಷೆ ಬರೆದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳ ನಕಲು ಪ್ರತಿಗಳನ್ನು ಒದಗಿಸುವಂತೆ ಮಾಹಿತಿ ಹಕ್ಕಿಗೆ ಅನುಗುಣವಾಗಿ ಮಾಡಿರುವ ಮನವಿಯನ್ನು ತಿರಸ್ಕರಿಸುವ ಅಧಿಕಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಖಂಡಿತವಾಗಿಯೂ ಇಲ್ಲ.

ಕೇಂದ್ರ ಲೋಕಸೇವಾ ಆಯೋಗವು ಡಿಜಿಟಲ್ ಮೌಲ್ಯಮಾಪನದಲ್ಲಿ ಲೋಪದೋಷಗಳು ಇರುವ ಕಾರಣ ಈ ಪದ್ಧತಿಯನ್ನು ಇದುವರೆಗೂ ಅಳವಡಿಸಿಕೊಂಡಿಲ್ಲ. ಪರೀಕ್ಷಕರು ಖುದ್ದಾಗಿ ಮೌಲ್ಯಮಾಪನ ನಡೆಸುವ ಕ್ರಮವು ಇದುವರೆಗೂ ಮುಂದುವರೆದಿದೆ. 2011ರವರೆಗೂ ಹಸ್ತಚಾಲಿತ ಮೌಲ್ಯಮಾಪನ ಕ್ರಮವನ್ನು ಕರ್ನಾಟಕ ಲೋಕಸೇವಾ ಆಯೋಗ ತಪ್ಪದೇ ಮುಂದುವರೆಸಿದೆ. ಆದರೆ 2014 ಮತ್ತು 2015ನೇ ಸಾಲಿನ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಮೌಲ್ಯಮಾಪನ ನಡೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆ ಆರೋಗ್ಯಕರ ಶಿಷ್ಟಾಚಾರಗಳಿಗೆ ವಿರುದ್ಧವಾಗಿದೆ. ಹಿಂದೆ ತೆಲಂಗಾಣ ರಾಜ್ಯದಲ್ಲಿ ಡಿಜಿಟಲ್ ಮೌಲ್ಯಮಾಪನದಿಂದಾಗಿ ಅವಕಾಶ ವಂಚಿತ ಅಭ್ಯರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಜರುಗಿದ ಲೋಕಸೇವಾ ಪರೀಕ್ಷೆಯಲ್ಲಿ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮ ನಡೆಸಿದ ವಿಷಯ ಅಲ್ಲಿನ ಉಚ್ಛನ್ಯಾಯಾಲಯದ ಗಮನಕ್ಕೆ ಬಂದು ಫಲಿತಾಂಶವನ್ನು ತಡೆಹಿಡಿಯಬೇಕೆಂದು ಆದೇಶಿಸಿದೆ. ಇದರ ವಿರುದ್ಧ ಕೆಲವು ಅಭ್ಯರ್ಥಿಗಳು ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದಾಗ ಸರ್ವೋಚ್ಛ ನ್ಯಾಯಾಲಯವು ಉಚ್ಛ ನ್ಯಾಯಾಲಯದ ತೀರ್ಪನ್ನು ಪುರಸ್ಕರಿಸಿರುವುದು ನೇಮಕಾತಿ ಪಾರದರ್ಶಕತೆಗೆ ಸಂದ ಬಹುದೊಡ್ಡ ಗೌರವವಾಗಿದೆ.

ಮುಖ್ಯ ಪರೀಕ್ಷೆಯು ಡಿಸೆಂಬರ್ 2017ರಂದು ಮುಗಿದಿದ್ದರೂ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಜುಲೈ 2018ರ ತನಕವೂ ನಿರ್ವಹಿಸದಿರುವ ಹಿಂದೆ ನೇಮಕಾತಿ ಅಕ್ರಮ ಸ್ಪಷ್ಟವಾಗಿ ಗೋಚರಿಸುತ್ತದೆ. ಇದುವರೆಗೂ ಕರ್ನಾಟಕ ಲೋಕಸೇವಾ ಆಯೋಗ ಡಿಜಿಟಲ್ ಮೌಲ್ಯಮಾಪನ ಕುರಿತಂತೆ ಯಾವುದೇ ಪಾರದರ್ಶಕ ಹಾಗೂ ಜವಾಬ್ದಾರಿಯುತ ಶಿಷ್ಟಾಚಾರಗಳನ್ನು ಅಳವಡಿಸಿಕೊಂಡಿಲ್ಲದಿರುವುದು ಖಂಡನೀಯ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅವಧಿಯಲ್ಲಿ ಲೋಕಸೇವಾ ಆಯೋಗದ ಸದಸ್ಯರು ಕೊಠಡಿಗೆ ಪ್ರವೇಶಿಸಿ ಅಕ್ರಮ ನಡೆಸಿದ ಬಗೆ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಡಿಜಿಟಲ್ ಮೌಲ್ಯಮಾಪನದ ನಂತರ ಸಂಬಂಧಪಟ್ಟ ಪರೀಕ್ಷಕರು ಡಿಜಿಟಲ್ ಸಹಿಯನ್ನು ಮಾಡಿಲ್ಲದಿರುವುದು ಅಧಿಕೃತವಾಗಿ ತಿಳಿದುಬಂದಿದೆ. ಡಿಜಿಟಲ್ ಮೌಲ್ಯಮಾಪನದ ನಂತರ ಆಯೋಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಸ್‍ವರ್ಡ್‍ನ್ನು ಬಳಸಿಕೊಂಡು ಅಂಕಗಳನ್ನು ತಿದ್ದಿರುವ ಸಾಧ್ಯತೆಯನ್ನು ತಳ್ಳಿ ಹಾಕಲಾಗುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಆಧುನಿಕ ವೈಜ್ಞಾನಿಕ ಮಂಪರು ಪರೀಕ್ಷೆಗೆ ಗುರಿಪಡಿಸಿದರೆ ಸತ್ಯ ಹೊರಬರುತ್ತದೆ.

ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಸಂಬಂಧಪಟ್ಟ ವಿಷಯತಜ್ಞರಿಂದ ಮೌಲ್ಯಮಾಪನ ನಡೆಸದೇ ಇತರರಿಂದ ಮೌಲ್ಯಮಾಪನ ನಡೆಸಿರುವುದು ಅಕ್ರಮಕ್ಕೆ ಸಾಕ್ಷಿಯಾಗಿದೆ. ಉದಾಹರಣೆಗೆ ತತ್ವಶಾಸ್ತ್ರದ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಸಹಕಾರ ವಿಷಯದ ಉತ್ತರ ಪತ್ರಿಕೆ ಮೊದಲಾದವುಗಳನ್ನು ಇತರ ಪರೀಕ್ಷಕರು ಮೌಲ್ಯಮಾಪನ ನಡೆಸಿರುವುದು ಮೌಲ್ಯಮಾಪಕರ ಹಾಜರಾತಿ ಪುಸ್ತಕದಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಈ ಬಾರಿ ಮುಖ್ಯ ಪರೀಕ್ಷೆಯಲ್ಲಿ ಮನಸೋ ಇಚ್ಛೆ ಅಂಕಗಳನ್ನು ತಮಗೆ ಬೇಕಾದ ಅಭ್ಯರ್ಥಿಗಳಿಗೆ ಕೊಡಿಸುವ ಕೆಲಸದಲ್ಲಿ ಲೋಕಸೇವಾ ಆಯೋಗದ ಸದಸ್ಯರ ಪಾತ್ರ ಇರುವುದನ್ನು ತಳ್ಳಿ ಹಾಕಲಾಗುವುದಿಲ್ಲ. ಆಯ್ಕೆಗೊಂಡ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆಯಲ್ಲಿಯೂ ಲೋಕಸೇವಾ ಆಯೋಗ ಸ್ಪಷ್ಟವಾಗಿ ಅಕ್ರಮ ನಡೆಸಿದೆ. ಅಂತಿಮ ಆಯ್ಕೆ ಪಟ್ಟಿ ದಿನಾಂಕ 10-01-2020ರ ಸಂಜೆ ಆಯೋಗದ ವೆಬ್‍ಸೈಟ್‍ನಲ್ಲಿ ಪ್ರಕಟಣೆಯಾಗಿದೆ. ಆದರೆ ಇದಕ್ಕೂ ಮೊದಲೇ ಕರ್ನಾಟಕ ಸರ್ಕಾರದ ಮುದ್ರಣಾಲಯದ ವಿಶೇಷ ರಾಜ್ಯಪತ್ರದಲ್ಲಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಯೋಗದ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ರಾಜ್ಯಪತ್ರದಲ್ಲಿ ಪ್ರಕಟಿಸಲು ಸರ್ಕಾರದ ಮುದ್ರಣಾಲಯಕ್ಕೆ ಕಳುಹಿಸಿರುವ ಆಯೋಗದ ಕ್ರಮ ಬಹಳಷ್ಟು ಗೂಡಾರ್ಥ ಹೊಂದಿದೆ. ಉತ್ತರ ಪತ್ರಿಕೆಗಳ ಡಿಜಿಟಲ್ ಮೌಲ್ಯಮಾಪನದ ನಂತರ ಅಂಕಗಳನ್ನು ದುರುದ್ದೇಶಪೂರ್ವಕವಾಗಿ ತಿದ್ದಿ ಭಾರಿ ಪ್ರಮಾಣದಲ್ಲಿ ಲೋಕಸೇವಾ ಆಯೋಗದ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವ ಹಿನ್ನೆಲೆಯಲ್ಲಿ 2015ರ ನೇಮಕಾತಿಯನ್ನು ರದ್ಧುಗೊಳಿಸುವ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಹೊಂದಿದೆ. ಅಲ್ಲದೆ ಉತ್ತರ ಪತ್ರಿಕೆಗಳನ್ನು ಸಂಬಂಧಪಟ್ಟ ವಿಷಯಗಳ ತಜ್ಞರನ್ನು ಒಳಗೊಂಡ ವಸ್ತುನಿಷ್ಟ ಹಸ್ತಚಾಲಿತ ಮೌಲ್ಯಮಾಪನಕ್ಕೆ ಒಳಪಡಿಸಿ ಅರ್ಹ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸತ್ಯಶೋಧನಾ ಸಮಿತಿ ರಚಿಸಲು ಮುಂದಾಗಬೇಕು.

(ಲೇಖಕರು ಪ್ರಗತಿಪರ ಚಿಂತಕರು, ಹೋರಾಟಗಾರರು. ಪತ್ರಿಕೋಧ್ಯಮ ವಿಭಾಗದ ಪ್ರಾಧ್ಯಾಪಕರು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...