Homeಮುಖಪುಟಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ಮಧ್ಯಪ್ರದೇಶದಲ್ಲಿಯೂ ಕರ್ನಾಟಕ ಮಾದರಿಯ ಆಪರೇಷನ್‌ ಕಮಲ: ಕಾಂಗ್ರೆಸ್‌ನ ಹಲವು ಶಾಸಕರು ಹೋಟೆಲ್‌ನಲ್ಲಿ!

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಸರಳ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವು ಬಿಕ್ಕಟ್ಟಿನಲ್ಲಿದ್ದು ಆಪರೇಷನ್‌ ಕಮಲಕ್ಕೊಳಗಾಗುವ ಭೀತಿ ಎದುರಿಸುತ್ತಿದೆ.

ತಡರಾತ್ರಿ ದೆಹಲಿ ಬಳಿಯ ಗುರ್ಗಾವ್‌ ಹೋಟೆಲ್‌ನಿಂದ ಕಾಂಗ್ರೆಸ್‌ ಶಾಸಕನೊಬ್ಬನನ್ನು ಹೊರತರಲಾಗಿದ್ದು ಇನ್ನು ನಾಲ್ಕು ಜನ ಹೊಟೇಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಿಎಸ್‌ಪಿ ಶಾಸಕಿ ರಾಮ್‌ ಬಾಯಿಯವರ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್‌ನ ಹಲವಾರು ಶಾಸಕರನ್ನು ಹೋಟೆಲ್‌ನಲ್ಲಿಟ್ಟಿದೆ ಎಂಬ ಆರೋಪಿ ದಟ್ಟವಾಗಿ ಕೇಳಿಬಂದಿದೆ. ಒಟ್ಟು 230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರು ಬೇಕಾಗಿದ್ದು, ಇದುವರೆಗೂ ಕಾಂಗ್ರೆಸ್‌ 120 ಸದಸ್ಯರ ಬೆಂಬಲವನ್ನು ಪಡೆದಿತ್ತು. ಈಗಿನ ಬೆಳವಳಣಿಗೆಗಳನ್ನು ಗಮನಿಸಿದರೆ ಕರ್ನಾಟಕದ ಮಾದರಿಯಲ್ಲಿ ಮಧ್ಯಪ್ರದೇಶದಲ್ಲಿಯೂ ಆಪರೇಷನ್‌ ಕಮಲ ನಡೆಯಬಹುದು ಎಂಬ ಭೀತಿ ಉಂಟಾಗಿದೆ.

ರಾಜ್ಯ ಸರ್ಕಾರವನ್ನು ಉರುಳಿಸುವ ಪಿತೂರಿಯ ಭಾಗವಾಗಿ ಮಧ್ಯಪ್ರದೇಶದ ಬಿಜೆಪಿ ಮುಖಂಡರು ಕಾಂಗ್ರೆಸ್‌ನ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಕರೆದೊಯ್ದಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಆರೋಪಿಸಿದ್ದಾರೆ.

“ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಮಾಜಿ ಮಂತ್ರಿಗಳಾದ ನರೋತ್ತಮ್ ಮಿಶ್ರಾ, ಭೂಪೇಂದ್ರ ಸಿಂಗ್ ಮತ್ತು ರಾಂಪಾಲ್ ಸಿಂಗ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಪಿತೂರಿಯ ಭಾಗವಾಗಿ ಎಂಟು ಶಾಸಕರನ್ನು ಹರಿಯಾಣದ ಹೋಟೆಲ್‌ಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ಕಾಂಗ್ರೆಸ್‌ನ ಪಟ್ವಾರಿ ಎಂಬುವವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕಾಂಗ್ರೆಸ್, ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷದ ಶಾಸಕರನ್ನು ದೆಹಲಿಗೆ ಕರೆದೊಯ್ಯುವ ಪ್ರಕ್ರಿಯೆಯನ್ನು ಬಿಜೆಪಿ ಪ್ರಾರಂಭಿಸಿದೆ. ಬಿಜೆಪಿ ಮಾಜಿ ಸಚಿವ ಭೂಪೇಂದ್ರ ಸಿಂಗ್ ಅವರು ಚಾರ್ಟರ್ಡ್ ಫ್ಲೈಟ್ ಮೂಲಕ ಬಿಎಸ್ಪಿ ಶಾಸಕಿ ರಾಮ್‌ ಬಾಯಿ ಅವರನ್ನು ದೆಹಲಿಗೆ ಕರೆದೊಯ್ಯಲಿಲ್ಲವೇ? ಶಿವರಾಜ್ ಸಿಂಗ್ ಚೌಹಾನ್ ಏನಾದರೂ ಹೇಳಲು ಇಷ್ಟಪಡುತ್ತಾರೆಯೇ? ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, “ನಾವು ರಾಮ್ ಬಾಯಿಯನ್ನು ಸಂಪೂರ್ಣವಾಗಿ ನಂಬುತ್ತೇವೆ. ಅವರು ಮುಖ್ಯಮಂತ್ರಿ ಕಮಲ್ ನಾಥ್‌ರವರ ಅಭಿಮಾನಿಯಾಗಿದ್ದು, ಅವರನ್ನು ಬೆಂಬಲಿಸುತ್ತಲೇ ಇರುತ್ತಾರೆ.” ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಮಲ್ ನಾಥ್, “ದಿಗ್ವಿಜಯ ಸಿಂಗ್ ಅವರ ಆರೋಪವನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಬಿಜೆಪಿಯ 15 ವರ್ಷಗಳ ಆಡಳಿತದಲ್ಲಿ ನಡೆದ ಹಗರಣಗಳು ಶೀಘ್ರದಲ್ಲೇ ಬಹಿರಂಗಗೊಳ್ಳುತ್ತವೆ ಎಂದು ತಿಳಿದಿರುವ ಕಾರಣ ಬಿಜೆಪಿ ಭಯಭೀತವಾಗಿ ಈ ಕೃತ್ಯದಲ್ಲಿ ತೊಡಗಿದೆ” ಎಂದಿದ್ದಾರೆ.

“ಅವರು ಹಣದ ಬಲದ ಮೇಲೆ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರು ಇಷ್ಟು ಹಣವನ್ನು ಎಲ್ಲಿಂದ ಪಡೆದಿದ್ದಾರೆಂದು ನನಗೆ ತಿಳಿಯಬಹುದೇ? ಎಂದು ಪ್ರಶ್ನಿಸಿರುವ ಅವರು ಶಾಸಕರು ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂಬ ವದಂತಿಗಳ ಮಧ್ಯೆ, “ಸರ್ಕಾರದ ಸ್ಥಿರತೆಗೆ ಯಾವುದೇ ಬೆದರಿಕೆ ಇಲ್ಲ” ಎಂದು ಸಿಎಂ ಒತ್ತಿಹೇಳಿದ್ದಾರೆ.

ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಮಗಳ ಚಿಕಿತ್ಸೆಗಾಗಿ ತಾನು ದೆಹಲಿಯಲ್ಲಿದ್ದೇನೆ ಎಂದು ಬಿಎಸ್ಪಿ ಶಾಸಕಿ ರಾಮ್ ಬಾಯಿ ಪತಿ ಗೋವಿಂದ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಬಿಜೆಪಿ ನಾಯಕ ಭೂಪೇಂದ್ರ ಸಿಂಗ್ ಕೂಡ ರಾಮ್ ಬಾಯಿ ದೆಹಲಿಗೆ ಹೋದ ಅದೇ ವಿಮಾನದಲ್ಲಿ ಪ್ರಯಾಣಿಸಿದರೆ ಅವನು, ಅವಳನ್ನು ದೆಹಲಿಗೆ ಕರೆದೊಯ್ದನೆಂದು ಅರ್ಥವಲ್ಲ. ಇವೆಲ್ಲ ವದಂತಿಗಳು ಮತ್ತು ಇದನ್ನು ನಂಬಬಾರದು ಎಂದು ಅವರು ತಿಳಿಸಿದ್ದಾರೆ.

ಆದರೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜೇಶ್ ಲುನಾವಾತ್, “ದಿಗ್ವಿಜಯ ಸಿಂಗ್ ಅವರ ರಾಜ್ಯಸಭಾ ಅವಧಿ ಮುಂದಿನ ತಿಂಗಳು ಅವಧಿ ರಾಜ್ಯಸಭೆಗೆ ಮರು ನಾಮನಿರ್ದೇಶನಗೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದರೆ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ಇಲ್ಲದ ಸಂದರ್ಭವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

230 ಸ್ಥಾನಗಳ ರಾಜ್ಯ ವಿಧಾನಸಭೆಯಲ್ಲಿ, ಕಾಂಗ್ರೆಸ್ 113 ಶಾಸಕರನ್ನು ಹೊಂದಿದೆ. ಬಿಜೆಪಿಯು 107 ಶಾಸಕರನ್ನು ಹೊಂದಿದೆ. 4 ಸ್ವತಂತ್ರ, 2 ಬಿಎಸ್ಪಿ ಮತ್ತು ಒಬ್ಬ ಎಸ್ಪಿ ಶಾಸಕರು ಕಾಂಗ್ರೆಸ್‌ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ. ಪ್ರಸ್ತುತ ಎರಡು ಸ್ಥಾನಗಳು ಖಾಲಿ ಉಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...