Homeಮುಖಪುಟಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

ಭಜರಂಗದಳ ಒತ್ತಡಕ್ಕೆ ಮಣಿದ ತಹಶೀಲ್ದಾರ್ : ಏಕಾಏಕಿ ಏಸು ಪ್ರತಿಮೆ ಮತ್ತು ಶಿಲುಬೆಗಳ ಧ್ವಂಸ

- Advertisement -
- Advertisement -

ಕ್ರಿಶ್ಚಿಯನ್ ಸಮುದಾಯಕ್ಕೆ ನೀಡಲಾಗಿದ್ದ ಸ್ಮಶಾನ ಭೂಮಿಯ ಸಣ್ಣಗುಡ್ಡದ ಮೇಲೆ ನಿಲ್ಲಿಸಲಾಗಿದ್ದ ಏಸು ಪ್ರತಿಮೆ ಮತ್ತು 14 ಶಿಲುಬೆಗಳನ್ನು ತಹಶೀಲ್ದಾರ್ ನೇತೃತ್ವದಲ್ಲಿ ಜೆಸಿಬಿಯಿಂದ ಏಕಾಏಕಿ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಯಾವುದೇ ನೋಟಿಸ್ ನೀಡದೆ, ಸಮಯವನ್ನು ಕೊಡದೆ ಏಸು ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವ ತಾಲೂಕು ಆಡಳಿತದ ಬಗ್ಗೆ ಕ್ರಿಶ್ಚಿಯನ್ ಸಮುದಾಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಯೊಂದು ಸ್ಮಶಾನಗಳಲ್ಲೂ ಏಸು ಮತ್ತು ಶಿಲುಬೆಗಳು ಇರುವುದು ಸಾಮಾನ್ಯ. ಇಲ್ಲಿಯೂ ಹಾಗೆಯೇ ನಿಲ್ಲಿಸಲಾಗಿತ್ತು. ಯಾರೋ ದೂರಿದದರೆಂಬ ಕಾರಣಕ್ಕೆ ಏಕಾಏಕಿ ದಾಳಿ ನಡೆಸಿರುವುದು ಕ್ರಿಶ್ಚಿಯನ್‌ ಸಮುದಾಯದ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ ಎಂದು ಮುಖಂಡರು ಆರೋಪಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯ ಸೇಂಟ್ ಜೋಸೆಫ್ ಚರ್ಚ್ ಸಮೀಪವೇ ಇರುವ 120 ಎಕರೆ ಸರ್ಕಾರಿ ಭೂಮಿಯಲ್ಲಿ ಸಣ್ಣ ಭಾಗವನ್ನು ಸ್ಮಶಾನಕ್ಕೆ ಜಾಗ ನೀಡುವಂತೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು 2012ರಲ್ಲಿ ದೇವನಹಳ್ಳಿಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಹೊತ್ತುಹಾಕಿದರು. ಕೆಲಸ ಮಾತ್ರ ಆಗಿರಲಿಲ್ಲ. ಹೀಗಾಗಿ 2018ರಲ್ಲಿ ಮತ್ತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಆಗ ಮತ್ತೆ ತಹಶೀಲ್ದಾರ್ ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ಕಳುಹಿಸಿದರು.

ಕ್ರಿಶ್ಚಿಯನ್ ಸಮುದಾಯವರು ನೀಡಿದ ಪತ್ರವನ್ನು ಪರಿಶೀಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಮಶಾನಕ್ಕೆ ಭೂಮಿ ನೀಡಬಹುದೆಂದು ಸೂಚಿಸಿದರು. ತಹಶೀಲ್ದಾರ್ ಸ್ಥಳೀಯ ಗ್ರಾಮ ಪಂಚಾಯಿತಿಯ ಪಿಡಿಓಗೆ ಪತ್ರ ಬರೆದು ಸ್ಮಶಾನ ಜಾಗಕ್ಕೆ ಭೂಮಿ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.  ಈ ಹಿನ್ನೆಲೆಯಲ್ಲಿ 2019ರ ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಯು ಎಲ್ಲರಿಗೂ ಸ್ಮಶಾನ ಭೂಮಿ ಇದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಇಲ್ಲ. ಹಾಗಾಗಿ 120 ಎಕರೆಯಲ್ಲಿ 4.2 ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಿತ್ತು. ಇದಕ್ಕೆ ದೊಡ್ಡಸಾಗರಹಳ್ಳಿ ಗ್ರಾಮಸ್ಥರೂ ಸಂಪೂರ್ಣ ಒಪ್ಪಿಗೆ ನೀಡಿದ್ದರು.

ಕ್ರಿಶ್ಚಿಯನ್ನರ ಸ್ನಶಾನಕ್ಕೆ ನೀಡಿರುವ 4.2 ಎಕರೆ ಜಾಗದಲ್ಲಿ ಸಣ್ಣದೊಂದು ಗುಡ್ಡವಿದೆ. ಆ ಗುಡ್ಡದ ಮೇಲೆ ಏಸುಕ್ರಿಸ್ತನ ಪ್ರತಿಮೆ ಮತ್ತು ಶಿಲುಬೆಗಳನ್ನು ಇಟ್ಟಿದ್ದೆವು. ‘ಮೌಂಟ್ ಕಲ್ವರಿ’ ಕ್ರಿಶ್ಚಿಯನ್ ಸಮುದಾಯಕ್ಕೆ ಪವಿತ್ರ ವಾದುದು. ಈಸ್ಟರ್ ಸಂದರ್ಭದಲ್ಲಿ ನಾವು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸುತ್ತೇವೆ. ಅಂತಹ ಪವಿತ್ರ ಸ್ಥಳವನ್ನು ಧ್ವಂಸ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಸ್ಮಶಾನ ಜಾಗದಲ್ಲಿ ಶಿಲುಬೆ ಮತ್ತು ಏಸುಕ್ರಿಸ್ತನ ಪ್ರತಿಮೆ ಇರುವುದು ಸಾಮಾನ್ಯ. ಇಲ್ಲಿ ನಾವು ಯಾವುದೇ ವಾಣಿಜ್ಯ ಸಂಕೀರ್ಣ ನಿರ್ಮಿಸಿರಲಿಲ್ಲ. ಆದರೂ ತಹಶೀಲ್ದಾರ್ ಜೆಸಿಬಿಯೊಂದಿಗೆ ಬಂದು ಶಿಲುಬೆಗಳು ಮತ್ತು ಏಸು ಪ್ರತಿಮೆಯನ್ನು ಧ್ವಂಸಗೊಳಿಸಿದರು. ಇದರಿಂದ ನಮಗೆ ನೋವಾಗಿದೆ. ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನಮ್ಮ ಬಳಿ ಎಲ್ಲಾ ದಾಖಲೆಗಳು ಇವೆ. ಹೋರಾಟ ಮುಂದುವರಿಯಲಿದೆ ಎಂದು ಬೆಂಗಳೂರಿನ ಬಿಶಪ್‌ ಚರ್ಚ್ ಸಾರ್ವಜನಿಕ ಸಂಪರ್ಕಾಧಿಕಾರಿ ಕಾಂತರಾಜು ನಾನುಗೌರಿ.ಕಾಮ್ ಗೆ ದೂರವಾಣಿಯಲ್ಲಿ ತಿಳಿಸಿದರು.

ಮುಖ್ಯವಾದ ವಿಷಯವೆಂದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತ ಗ್ರಾಮ ಪಂಚಾಯಿತಿ ಸ್ಮಶಾನಕ್ಕೆ ಜಾಗ ನೀಡಿರುವುದು ಸ್ಪಷ್ಟ. ಎಲ್ಲಾ ದಾಖಲೆಗಳು ಕೂಡ ಇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ದಿಢೀರನೇ ಈ ರೀತಿ ಪ್ರತಿಮೆ ಮತ್ತು ಶಿಲುಬೆಗಳನ್ನು ಧ್ವಂಸಗೊಳಿಸಿರುವುದು ಸರಿಯಾದ ಕ್ರಮವಲ್ಲ. ಅಲ್ಲಿನ ಶ್ಮಶಾನದ ಪ್ರತಿಮೆಗೆ ಗ್ರಾಮಸ್ಥರ ಒಪ್ಪಿಗೆ ಮತ್ತು ಸಹಕಾರವೂ ಇದೆ. ಗ್ರಾಮಸ್ಥರ ಸಭೆ ಕರೆದಿದ್ದ ಸಂದರ್ಭದಲ್ಲೂ ಯಾರೊಬ್ಬರೂ ತಕರಾರು ಮಾಡಿಲ್ಲ. ಆದರೆ ಬಲಪಂಥೀಯ ಸಂಘಟನೆಗಳಾದ ಹಿಂದೂ ರಕ್ಷಣಾ ವೇದಿಕೆ ಮತ್ತು ಭಜರಂಗದಳದ ಮುಖಂಡರು ಪ್ರತಿಭಟನೆ ಮಾಡಿದ ಮೇಲೆ ಇಂತಹ ಕ್ರಮಕ್ಕೆ ಮುಂದಾಗಿರುವುದು ನ್ಯಾಯ ಸಮ್ಮತವಲ್ಲ. ಸುಖಾಸುಮ್ಮನೆ ನಮ್ಮ ಮೇಲೆ ಮತಾಂತರದ ಆರೋಪ ಮಾಡುವುದು ಸರಿಯಲ್ಲ ಎನ್ನುತ್ತಾರೆ ಕ್ರಿಶ್ಚಿಯನ್ ಸಮುದಾಯದ ಮುಖಂಡರು.

ಈ ಕುರಿತು ದೇವನಹಳ್ಳಿ ತಹಶೀಲ್ದಾರ್ ಅಜಿತ್‌ ಕುಮಾರ್‌ ರೈ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಲಾಯಿತು. ಆದರೆ ಸಾಧ್ಯವಾಗಲಿಲ್ಲ. ಇಲ್ಲಿ ಭಜರಂಗದಳ ಮತ್ತು ಹಿಂದೂ ರಕ್ಷಣ ವೇದಿಕೆಯ ಒತ್ತಡಕ್ಕೆ ತಹಶೀಲ್ದಾರ್ ಮಣಿದಿರುವುದು ಸ್ಪಷ್ಟವಾಗಿದೆ. ನೋಟೀಸ್ ನೀಡದೆ ಯಾವುದೇ ಮಾಹಿತಿಯನ್ನು ನೀಡದೆ ಪ್ರತಿಮೆಗಳ ಧ್ವಂಸ ಮಾಡಿರುವುದು ಆಡಳಿತ ಎತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಪುಂಡುಪೋಕರಿಗಳ ಒತ್ತಡಕ್ಕೆ ತಾಲೂಕು ಆಡಳಿತ ಮಣಿಯುವಂತಾಗಿರುವುದು ದುರಂತವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...