Homeಮುಖಪುಟಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ 19 ಸಾವಿರ ಕೋಟಿ ಕಡಿತ: ಬಿಎಸ್‌ವೈ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ 19 ಸಾವಿರ ಕೋಟಿ ಕಡಿತ: ಬಿಎಸ್‌ವೈ

2020-21 ನೇ ಸಾಲಿನ ಬಜೆಟ್‌ನ ಪ್ರಮುಖ ಅಂಶಗಳು...

- Advertisement -
- Advertisement -

ಜಿಎಸ್‌ಟಿ ಪಾಲು ಮತ್ತು ಅನುದಾನ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ ಅಂದಾಜು 19 ಸಾವಿರ ಕೋಟಿ ಕಡಿತವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಬಜೆಟ್‌ ಭಾಷಣದ ವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ತೆರಿಗೆ, ಮಾಹಿತಿ ತಂತ್ರಜ್ಞಾನ ಆಧರಿತ ಉತ್ಪನ್ನಗಳು ಸೇರಿದಂತೆ ಹಲವಾರು ವಿಚಾರದಲ್ಲಿ ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಲ್ಲಿಸುತ್ತಿದೆ. ಆದರೆ ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಬರುವಲ್ಲಿ ಕಡಿತವಾಗುತ್ತಿದೆ ಎಂದಿದ್ದಾರೆ.

ಹಾಗಾಗಿ ಕರ್ನಾಟಕದ ಹಲವು ಇಲಾಖೆಗಳ ವೆಚ್ಚ ಕಡಿತ ಮಾಡಿತ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ.

2020-21 ನೇ ಸಾಲಿನ ಬಜೆಟ್‌ನ ಪ್ರಮುಖ ಅಂಶಗಳು ಈ ಕೆಳಗಿನಂತಿವೆ.

  • ಬಜೆಟ್ ಶೇಕಡಾ 6 ರಷ್ಟು ಅಬಕಾರಿ ಸುಂಕ ಹೆಚ್ಚಳ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ. ಬೆಂಗಳೂರು ಕೆರೆಗಳ ಅಭಿವೃದ್ಧಿ ಗೆ 100 ಕೋಟಿ.
  • ಶುಭ್ರ ಬೆಂಗಳೂರು ಯೋಜನೆಗೆ 900 ಕೋಟಿ ಮೀಸಲು, ಮಹಾದಾಯಿ ಯೋಜನೆಗೆ 500 ಕೋಟಿ ಘೋಷಣೆ,
  • ಎತ್ತಿನಹೊಳೆ ನೀರಾವರಿ ಯೋಜನೆಗೆ 1500 ಕೋಟಿ ಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡನೆ.
  • ಕಿಸಾನ್ ಸಮ್ಮಾನ್ ಯೋಜನೆಗೆ 2600 ಕೋಟಿ, ಮನೆ ಖರೀದಿ ನೋಂದಣಿ ಶುಲ್ಕ 5 ರಿಂದ 2ಕ್ಕೆ ಇಳಿಕೆ.
  • ಶನಿವಾರ ಮಕ್ಕಳು ಶಾಲೆಗೆ ಬ್ಯಾಗ್ ತರುವಂತಿಲ್ಲ. ಶಿಕ್ಷಕ ಮಿತ್ರ ಮೊಬೈಲ್ ಆಪ್ 10 ಲಕ್ಷ ಮನೆಗಳಿಗೆ ಮನೆ ಮನೆಗೆ ಗಂಗೆ ಜಲಭಾಗ್ಯ ಯೋಜನೆ ಜಾರಿ.
  • ರಾಜ್ಯದಲ್ಲಿ 2450 ಹೊಸ ಬಸ್ ಖರೀದಿ, ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್. ಒಂದು ಲಕ್ಷ ಮಹಿಳೆಯರಿಗೆ ಉಚಿತ ಬಿಎಂಟಿಸಿ ಪಾಸ್..
  • ಬೆಂಗಳೂರಿಗೆ 90 ಎಲೆಕ್ಟ್ರಿಕ್ ಬಸ್ ಖರೀದಿ, ಬೆಂಗಳೂರು ನಗರ ಅಭಿವೃದ್ದಿಗೆ 8772 ಕೋಟಿ ರೂ. 60 ವರ್ಷ ಮಿರಿದವರಿಗೆ ಹೊಸ ಯೋಜನೆ ಜಾರಿ.
  • ಬಡವರ ಜೀವನ ಚೈತ್ರಯಾತ್ರೆ ಯೋಜನೆಗೆ 20 ಕೋಟಿ ಮೀಸಲು. ಕೆ.ಸಿ.ಜನರಲ್, ಸಿವಿ ರಾಮನ್ ಆಸ್ಪತ್ರೆಯಲ್ಲಿ ನೂತನ ಲ್ಯಾಬ್ ಸ್ಥಾಪನೆ.
  • ಎಸ್ ಎಸ್ ಎಲ್ ಸಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ ನಗದು ಬಹುಮಾನ.
  • ಎಸ್ಸಿ ಎಸ್ಪಿ ನಿರುದ್ಯೋಗಿ ಯುವಕರಿಗೆ ಉಚಿತ ಉದ್ಯೋಗ ತರಬೇತಿ.
  • ಅಡಿಕೆ ಬೆಳೆಗಾರರಿಗೆ 2 ಲಕ್ಷ ರೂವರೆಗೆ ಸಾಲಕ್ಕೆ ಶೇಕಡ 5 ರಷ್ಟು ಬಡ್ಡಿ ವಿನಾಯಿತಿ.
  • ಪೊಲೀಸ್ ಸಿಬ್ಬಂದಿಗೆ ಗೃಹ ಭಾಗ್ಯ ಯೋಜನೆಗೆ 200 ಕೋಟಿ.
  • ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 5 ಕೋಟಿ ಮೀಸಲು
  • ಗೊಲ್ಲ ಸಮುದಾಯದ ಅಭಿವೃದ್ಧಿಗೆ 10 ಕೋಟಿ
  • ಮಂಗಳೂರು ಹಾಗೂ ಉಡುಪಿಯಲ್ಲಿ ಹೊಸ ಮೀನುಗಾರಿಕಾ ಬಂದರು.
  • ಬಸವ ಕಲ್ಯಾಣದಲ್ಲಿ 500 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ.
  • ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನಕ್ಕೆ ಐದು ಕೋಟಿ ಮೀಸಲು.
  • ಕೈಸ್ತ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂ. ಮೀಸಲು.
  • ವಿಶ್ವಕರ್ಮ ಸಮುದಾಯ ಅಭಿವೃದ್ಧಿಗೆ 25 ಕೋಟಿ ರೂ ಮೀಸಲು.
  • ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಇಸ್ರೇಲ್ ಮಾದರಿಯಲ್ಲಿ ನೀರಿನ ರಕ್ಷಣೆಗೆ ಕ್ರಮ ಕಯಗೊಳ್ಳಲಾಗುವುದು.
  • 10 ಲಕ್ಷ ಮನೆಗಳಿಗೆ ಮನೆ ಮನೆಗೆ ಗಂಗೆ ನೀರು ಯೋಜನ.
  • ಚಿತ್ರದುರ್ಗದ ಮುರುಘಾಮಠದಲ್ಲಿ 325 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ,
  • ಎಸ್.ಎಲ್.ಭೈರಪ್ಪ ಹುಟ್ಟೂರು ಅಭಿವೃದ್ಧಿ ಗೆ 5 ಕೋಟಿ.
  • ಇತರೆ ರಾಜ್ಯಗಳಿಗೆ ಹೋಲಿಸಿದರೆ, ರಾಜ್ಯದ ಆದಾಯ ಹೆಚ್ಚಾಗಿದೆ. ಜಿಡಿಪಿಯಲ್ಲಿ ಶೇ. 6- 8 ವೃದ್ಧಿ ನಿರೀಕ್ಷೆಯಿದೆ.
  • 1 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ.
  • ರೂ. 100 ಕೋಟಿ ಅನುದಾನದಲ್ಲಿ 278 ಪಬ್ಲಿಕ್ ಶಾಲೆಗಳ ಆರಂಭಕ್ಕೆ ಚಿಂತನೆ.
  •  ಮಹದಾಯಿ ಯೋಜನೆಗೆ ರೂ. 500 ಕೋಟಿ ಕೇಂದ್ರ ಸರ್ಕಾರ ನೀಡಿದೆ.
  •  ಭಾಗ್ಯಲಕ್ಷ್ಮೀ ಯೋಜನೆ, ಶಾಲಾ ಮಕ್ಕಳಿಗೆ ನೀಡುವ ಸೈಕಲ್ ಯೋಜನೆ ಮುಂದುವರಿಕೆ.
  •  ಬಾದಾಮಿ ಕ್ಷೇತ್ರದ ಅಭಿವೃದ್ದಿಗೆ 25 ಕೋಟಿ ರೂ.
  • ಸರ್ಕಾರದಿಂದಲೇ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ, ಯೋಜನೆ ಆರಂಭ.
  • ನೇಕಾರರ ಸಾಲ ಮನ್ನಾ ಯೋಜನೆಗೆ 79.57 ಕೋಟಿ.
  • ರಾಜೀವ್ ಗಾಂಧಿ ವಸತಿ ನಿಗಮಕ್ಕೆ 1 ಸಾವಿರ ಕೋಟಿ.
  • ಪ್ರತಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಮೂರು ಶಾಲೆಗಳನ್ನು ದತ್ತು ಪಡೆಯುವ ಆದೇಶ,
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1500 ಕೋಟಿ.
  • ಆಟೋ ಚಾಲಕರ ಮಕ್ಕಳಿಗೆ ಪ್ರತಿ ವರ್ಷ 2 ಸಾವಿರ. ಇದಕ್ಕಾಗಿ 40 ಕೋಟಿ ಮೀಸಲು.
  •  ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು ಅಭಿವೃದ್ಧಿಗೆ 10 ಕೋಟಿ.
  •  ಹೂಸ ಏತ ನೀರಾವರಿ ಯೋಜನೆಗಳ ಜಾರಿಗೆ 5 ಸಾವಿರ ಕೋಟಿ.
  • ನೋಂದಾಯಿತ 1 ಲಕ್ಷ ಕಟ್ಟಡ ಕಾರ್ಮಿಕರಿಗೆ ಹೆಲ್ತ್‌ ಕಾರ್ಡ್‌ ವಿತರಣೆ.
  •  ಬೆಂಗಳೂರು ಕೆರೆ ಅಭಿವೃದ್ಧಿಗೆ ರೂ. 100 ಕೋಟಿ ಬಿಡುಗಡೆ.
  •  ಸಾವಯವ ಕೃಷಿ ಪ್ರೋತ್ಸಾಹಕ್ಕೆ ರೂ. 200 ಕೋಟಿ.
  •  ಕೆರೆಗಳ ಅಭಿವೃದ್ಧಿಯ ಕ್ರೀಯಾಯೋಜನೆಗೆ ರೂ. 100 ಕೋಟಿ ಮೀಸಲು.
  •  ಮಳೆಯಿಂದ ಮನೆಗಳಿಗೆ ನೀರು ನುಗ್ಗುವುದನ್ನು ತಡೆಯಲು ರೂ. 200 ಕೋಟಿ ನಿಗದಿ.
  • ರಾಜ ಕಾಲುವೆಗಳ ಅಭಿವೃದ್ಧಿಗೆ ರೂ. 200 ಕೋಟಿ.
  •  ಹಳ್ಳಿಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು ಮತ್ತು ಒಳ ಚರಂಡಿ ಅಭಿವೃದ್ಧಿಗೆ ರೂ. 1 ಸಾವಿರ ಕೋಟಿ ಮೀಸಲು,
  •  ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಷ್ಯವೇತನ.
  • ಸಣ್ಣ ಮಧ್ಯಮ ಕಾಫಿ ಬೆಳೆಗಾರರ ಪಂಪ್ ಸೆಟ್ ಗಳ ವಿದ್ಯುತ್ ಶುಲ್ಕ ವಾಪಾಸ್,
  • ಹೆಬ್ಬಾಳದಿಂದ ಜೆಪಿ ನಗರವರೆಗೆ ಮೆಟ್ರೋ ಸೇವೆ ವಿಸ್ತರಣೆ.
  •  ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಲು ಇಲಾಖಾವಾರು ವಿಂಗಡಿಸದೇ ಆರು ವಲಯಗಳನ್ನಾಗಿ ವಿಂಗಡಿಸಿ ಆಯವ್ಯಯ ಮಂಡನೆ.
  •  “ಪ್ರಧಾನ ಮಂತ್ರಿ ಕಿಸಾನ್ ಸಮಾನ್ ನಿಧಿ ಯೋಜನೆ” ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ, ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ
  • ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ.
  •  ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು ಬಿಡುಗಡೆಗೆ 900 ಕೋಟಿ ರೂ.
  •  ರೈತ ಸಿರಿ ಯೋಜನೆಯಡಿ ಟೆಫ್, ಚಿಯಾ ಮತ್ತು ಕೈನೋವಾ ಸಿರಿಧಾನ್ಯಗಳ ಸೇರ್ಪಡೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...