Homeಮುಖಪುಟದೆಹಲಿ ನಿರ್ಭಯ ಪ್ರಕರಣ: ಅಪರಾಧಿಗಳಿಗೆ ಡೆತ್ ವಾರೆಂಟ್, ಮಾರ್ಚ್ 20ಕ್ಕೆ ಗಲ್ಲು

ದೆಹಲಿ ನಿರ್ಭಯ ಪ್ರಕರಣ: ಅಪರಾಧಿಗಳಿಗೆ ಡೆತ್ ವಾರೆಂಟ್, ಮಾರ್ಚ್ 20ಕ್ಕೆ ಗಲ್ಲು

- Advertisement -
- Advertisement -

ದೆಹಲಿ ನಿರ್ಭಯ ಪ್ರಕರಣದ ನಾಲ್ವರು ಅಪರಾಧಿಗಳ ವಿರುದ್ಧ ದೆಹಲಿ ನ್ಯಾಯಾಲಯ ಹೊಸ ಡೆತ್ ವಾರಂಟ್ ಹೊರಡಿಸಿದೆ. ಅವರನ್ನು ಮಾರ್ಚ್ 20 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲಾಗುವುದು ಎಂದು ಹೇಳಿದ್ದು ಇದು ನ್ಯಾಯಾಲಯ ಹೊರಡಿಸಿದ ನಾಲ್ಕನೇ ಡೆತ್ ವಾರಂಟ್ ಆಗಿದೆ.

ಜನವರಿ 22 ಮತ್ತು ಫೆಬ್ರವರಿ 1 ರಂದು ಮರಣದಂಡನೆಯನ್ನು ರದ್ದುಗೊಳಿಸುವಂತೆ ಅಪರಾಧಿಗಳು ಅರ್ಜಿಯನ್ನು ಸಲ್ಲಿಸಿದರು. ಫೆಬ್ರವರಿ 5ರಂದು ದೆಹಲಿ ಹೈಕೋರ್ಟ್ ರಾಷ್ಟ್ರಪತಿಗೆ ಕ್ಷಮಾದಾನದ ಅರ್ಜಿಗಳು ಸೇರಿದಂತೆ ಎಲ್ಲಾ ಕಾನೂನು ಪರಿಹಾರಗಳನ್ನು ಮುಗಿಸಲು ನಾಲ್ವರಿಗೂ ಒಂದು ವಾರವಿದೆ ಎಂದು ಆದೇಶಿಸಿತ್ತು.

ಅತ್ಯಾಚಾರ ಪ್ರಕರಣದ ಅಪರಾಧಿ ಪವನ್ ಮಾರ್ಚ್ 2 ಸೋಮವಾರದಂದು ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ನೀಡುವಂತೆ ಅರ್ಜಿ ಹಾಕಲಾಗಿತ್ತು ಅದನ್ನು ರಾಷ್ಟ್ರಪತಿ ನಿನ್ನೆ ತಿರಸ್ಕರಿಸಿದ್ದರು.

ಕ್ಷಮಾದಾನ ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಮರಣದಂಡನೆಯನ್ನು ನಿಲ್ಲಿಸುವಂತೆ ಕೋರಿ ಪವನ್ ಕೆಳ ನ್ಯಾಯಾಲಯಕ್ಕೆ ಹೊಸ ಅರ್ಜಿಯನ್ನು ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ಪುರಸ್ಕರಿಸಿತ್ತು.

ಮರಣ ದಂಡನೆಯಿಂದ ತಪ್ಪಿಸಲು ಅಪರಾಧಿಗಳ ಮುಂದೆ ಇದ್ದ ಎಲ್ಲಾ ದಾರಿಗಳು ಇಲ್ಲಿಗೆ ಮುಕ್ತಾಯವಾಯಿತು. ರಾಷ್ಟ್ರಪತಿ ಕ್ಷಮಾದಾನವನ್ನು ತಿರಸ್ಕರಿಸಿದರೆ, ಅಪರಾಧಿಯನ್ನು 14 ದಿನಗಳ ನಂತರ ಗಲ್ಲಿಗೇರಿಸಬಹುದು ಎಂದು ಕಾನೂನು ಹೇಳುತ್ತದೆ.

2012ರಲ್ಲಿ ಯುವತಿಯ ಮೇಲೆ ಚಲಿಸುವ ಬಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಲ್ಲಿ ಹದಿಹರೆಯದ ಬಾಲಕನನ್ನು ಸೇರಿಸಿ ಆರು ಮಂದಿಯನ್ನು ಬಂಧಿಸಲಾಗಿತ್ತು. ಮುಖ್ಯ ಆರೋಪಿಗಳಲ್ಲಿ ಒಬ್ಬರಾದ ರಾಮ್ ಸಿಂಗ್ ಈ ಹಿಂದೆ ಜೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹದಿಹರೆಯದ ಬಾಲಕನನ್ನು ಮೂರು ವರ್ಷಗಳ ನಂತರ ಬಿಡುಗಡೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...