Homeಮುಖಪುಟಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಬಯಲುಸೀಮೆ ಅಭಿವೃದ್ಧಿ ಕಡೆಗಣನೆ : ಬಹುತೇಕ ಬಜೆಟ್ ಬೆಂಗಳೂರಿಗೆ ಮೀಸಲು

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ. 

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಬಜೆಟ್ ಬಯಲುಸೀಮೆ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಬಜೆಟ್ ನಲ್ಲಿ ಅಭಿವೃದ್ದಿಗೆ ಪೂರಕ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ, ಕೈಗಾರಿಕೆ ಕ್ಷೇತ್ರದಲ್ಲಿ ತೀವ್ರ ಹಿಂದುಳಿದಿರುವ ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಸಕ್ತ ಬಜೆಟ್ ವಿಫಲವಾಗಿದೆ.

ಕುಡಿಯುವ ನೀರು ಯೋಜನೆಗಳಿಗೆ ಒತ್ತು ನೀಡುವ ಯಾವ ಕ್ರಮಗಳನ್ನು ಕೈಗೊಂಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ನಲ್ಲಿ ಬಯಲು ಪ್ರದೇಶದ ಅಭಿವೃದ್ಧಿಗೆ, ಏನಾದರೂ ಕೊಡಬಹುದು ಎಂಬ ಜನರ ನಂಬಿಕೆಗೆ ಪೆಟ್ಟು ಬಿದ್ದಿದೆ.

ಬಯಲುಸೀಮೆಯಲ್ಲಿ ಬಹುವಾಗಿ ಕಾಡುತ್ತಿರುವ ಕುಡಿಯುವ ನೀರು ಪೂರೈಕೆ ಮತ್ತು ನೀರಾವರಿಗೆ ಸಂಬಂಧಪಟ್ಟಂತೆ ಬಜೆಟ್ ಮೌನ ವಹಿಸಿದೆ. ಕುಡಿಯುವ ನೀರು ಪೂರೈಕೆ ಯೋಜನೆಗಳು ಕುಂಟುತ್ತಾ ಸಾಗಿವೆ. ಭದ್ರ ಮೇಲ್ದಂಡೆ ಮತ್ತು ಎತ್ತಿಹೊಳೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಅಷ್ಟಾಗಿ ಗಮನಹರಿಸಿದಂತೆ ಕಾಣುತ್ತಿಲ್ಲ. ಬಯಲುಸೀಮೆ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ಪ್ರಮುಖ ಮತ್ತು ಆದ್ಯತೆಯ ವಿಷಯವಾಗಬೇಕಿತ್ತು. ಆದರೆ ಬಜೆಟ್ ಶಾಶ್ವತ ನೀರಾವರಿ ಮತ್ತು ಕುಡಿಯುವ ನೀರಿಗೆ ಅಷ್ಟೊಂದು ಪ್ರಾಮುಖ್ಯತೆ ಕೊಟ್ಟಿಲ್ಲ.

ಬಯಲುಸೀಮೆಯಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳು ಯಾವುದೇ ಕ್ಷೇತ್ರದಲ್ಲೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಆದ್ದರಿಂದ ರೈಲ್ವೆ, ಹೆದ್ದಾರಿ, ಕೈಗಾರಿಕಾ ಕಾರಿಡಾರ್ ಹೀಗೆ ಯಾವುದೇ  ಕ್ಷೇತ್ರಕ್ಕೂ ಸಿಎಂ ಯಡಿಯೂರಪ್ಪ ಆದ್ಯತೆ ನೀಡದೇ ಇರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಅಧ್ಯತೆಯ ವಿಷಯವಾದ ಮತ್ತು ಬಹುದಿನಗಳ ಬೇಡಿಕೆಗೆ ಸ್ಪಂದಿಸಿಲ್ಲ. ಇದರಿಂದ ನೀರಾವರಿ ಹೋರಾಟ ಗಾರರು ಆಕ್ರೋಶಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯರೆಡ್ಡಿ “ಬಜೆಟ್ ಬಯಲುಸೀಮೆ ಪಾಲಿಗೆ ಶಾಶ್ವತ ನೀರಾವರಿ ಯೋಜನೆಯನ್ನು ಕಡೆಗಣಿಸಿದೆ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ವರದಿ ಆಧಾರಿತ ಪಶ್ಚಿಮವಾಹಿನಿ ನದಿಗಳಿಂದ ನೀರನ್ನು ಬಯಲು ಸೀಮೆಗೆ ಹರಿಸುವ ಕಾರ್ಯಯೋಜನೆಗೆ ಹಣ ಮೀಸಲಿಡದೇ ಇರುವುದು ನಿರಾಸೆ ತಂದಿದೆ. ಬಯಲುಸೀಮೆ ರೈತರಿಗೆ ರಾಡರ್ ಆಧಾರಿತ ವ್ಯವಸ್ಥೆಗೆ ಹವಾಮಾನ ಮುನ್ಸೂಚನೆ ಕೇಂದ್ರ ತೆರೆದಿದ್ದರೆ, ನೀರಿನ ನಿರ್ವಹಣೆ, ಬರ ನಿರ್ವಹಣೆ ಮತ್ತು ರೋಗ ನಿರ್ವಹಣೆಗೆ ಅನುಕೂಲವಾಗುತ್ತಿತ್ತು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಆಯ್ಕೆಯಾದ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ಕೆಲವು ಭರವಸೆ ನೀಡಿದ್ದರು. ನೂತನ ಶಾಸಕರು ಸಲ್ಲಿಸಿದ ಬೇಡಿಕೆಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿಲ್ಲ.

ತುಮಕೂರು ಜಿಲ್ಲೆಗೆ ತಿಪಟೂರಿನಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಮತ್ತು ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಿಲ್ಲ. ತುಮಕೂರು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿದೆ. ಬಜೆಟ್‌ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣವನ್ನು ಮೀಸಲಿಟ್ಟಿಲ್ಲ. ತುಮಕೂರು ಬೆಂಗಳೂರಿನ ಉಪನಗರವಾಗಿ ಅಭಿವೃದ್ಧಿಪಡಿಸುವುದಾಗಿ ಹೇಳುತ್ತಲೇ ಬರುತ್ತಿದ್ದರೂ, ಹಲವು ಕೈಗಾರಿಕಾ ಕಾರಿಡಾರ್‌ಗಳ ನಗರವಾಗಿ ಹೊರ ಹೊಮ್ಮುತ್ತಿರುವ ತುಮಕೂರು ಜಿಲ್ಲೆಯ ಅಭಿವೃದ್ಧಿಗೆ ಕ್ರಮ ವಹಿಸಿಲ್ಲ.

ಒನಕೆ ಓಬವ್ವ ಮತ್ತು ಮದಕರಿ ನಾಯಕನನ್ನು ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಜೆಟ್ ನಲ್ಲಿ ಹೇಳಿದ್ದರೂ ಶಾಶ್ವತ ನೀರಾವರಿ ಮತ್ತು ಶುದ್ಧ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಾತನಾಡಿಲ್ಲ. ಆದರೆ ಚಿತ್ರದುರ್ಗದ ಮುರುಘಾಮಠಧ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರಮಥರ ಗಣಮೇಳವನ್ನು ಆಯೋಜಿಸಿದ್ದಕ್ಕಾಗಿ ಮುರುಘಾಶರಣರ ಋಣ ತೀರಿಸುವ ಹಿನ್ನೆಲೆಯಲ್ಲಿ 325 ಅಡಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ 20 ಕೋಟಿ ಹಣ ಮೀಸಲಿಡಲಾಗಿದೆ. ಇದನ್ನು ಬಿಟ್ಟರೆ ಚಿತ್ರದುರ್ಗದ ಮೂಲಸಮಸ್ಯೆಗಳ ನಿವಾರಣೆಗೆ ಒತ್ತು ನೀಡಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಗಳೂರು ನಗರದ ಬಗ್ಗೆ ವಿಶೇಷ ಪ್ರೀತಿ ಇರುವುದು ಈ ಬಜೆಟ್ ನಲ್ಲಿ ವ್ಯಕ್ತವಾಗಿದೆ. ಮೆಟ್ರೋ ವಿಸ್ತರಣೆ, ಕಲಾಕ್ಷೇತ್ರಗಳ ನಿರ್ಮಾಣ, ಫಿಲಂ ಸಿಟಿ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಸುಮಾರು ಹತ್ತಿರ ಹತ್ತಿರ 700 ಕೋಟಿ ರೂಪಾಯಿ ಹಣ ಮೀಸಲಿಟ್ಟಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿದ್ದಾರೆ. ತಮಗೆ ಬೇಕಾದ ಸಚಿವರ ಕ್ಷೇತ್ರಗಳಿಗೆ ಕೆಲವೊಂದು ಯೋಜನೆಗಳನ್ನು ಘೋಷಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೂ ಸಮರ್ಪಕ ಹಣವನ್ನು ಮೀಸಲಿಟ್ಟಿಲ್ಲ. ಗ್ರಾಮೀಣ ಭಾಗದ ಯುವಕ-ಯುವತಿಯರು ನಗರ ಪ್ರದೇಶಗಳಿಗೆ ವಲಸೆ ಬರುವುದನ್ನು ತಪ್ಪಿಸುವಂತಹ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ.

ಕೇವಲ ಬೆಂಗಳೂರು ನಗರವನ್ನು ಕೇಂದ್ರೀಕರಿಸಿರುವ ಬಜೆಟ್ ಬಯಸಲು ಸೀಮೆಯ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದು ಎದ್ದುಕಾಣುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...