Homeಮುಖಪುಟಕರೋನ ವೈರಸ್: ಕಾಶ್ಮೀರದಲ್ಲಿ ವೈರಸ್ ಭಾದಿತರು, ಶಾಲೆಗಳು ಬಂದ್

ಕರೋನ ವೈರಸ್: ಕಾಶ್ಮೀರದಲ್ಲಿ ವೈರಸ್ ಭಾದಿತರು, ಶಾಲೆಗಳು ಬಂದ್

- Advertisement -
- Advertisement -

ಭಾರತದಲ್ಲಿ ಮತ್ತೆ 3 ಜನರು ಕರೋನ ವೈರಸ್ ಭಾದಿತರಾಗಿರುವುದು ಪತ್ತೆಯಾಗಿದೆ. ಭಾರತದಲ್ಲಿ ಈಗ ಕರೋನ ಸೋಂಕಿತ ಪ್ರಕರಣಗಳ ಸಂಖ್ಯೆ 34 ಕ್ಕೆ ಏರಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ಸಂಜೀವ ಕುಮಾರ್ “ಭಾರತದಲ್ಲಿ ಇನ್ನೂ 3 ಪ್ರಕರಣಗಳು ಸೋಂಕು ಭಾದಿತರಾಗಿರುವುದು ಕಂಡುಬಂದಿವೆ, ಒಟ್ಟು ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ 34 ಕ್ಕೆ ತಲುಪಿದೆ” ಎಂದಿದ್ದಾರೆ. ಲಡಾಖ್‌ನಿಂದ 2 ಪ್ರಕರಣಗಳು ಪತ್ತೆಯಾಗಿದೆ ಇವರು ಇರಾನ್ ನಿಂದ ಆಗಮಿಸಿದ್ದರು. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವರದಿಯಾಗಿದೆ, ಇವರು ಒಮಾನ್ ನಿಂದ ಪ್ರಯಾಣಿಸಿದ್ದರು.

ಸಾಂಕ್ರಾಮಿಕ ಕೊರೊನ ವೈರಸ್‌ನಿಂದ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆಂದು ಶಂಕಿಸಿ ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಸರ್ಕಾರ ತಿಳಿಸಿದೆ. ಹೊಸ ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ “ಜಮ್ಮುವಿನಿಂದ ಇಬ್ಬರು ಶಂಕಿತ ರೋಗಿಗಳ ಪರೀಕ್ಷಾ ವರದಿಗಳು ಬಂದಿವೆ. ಎರಡೂ ಹೆಚ್ಚಿನ ವೈರಲ್ ಲೋಡ್ ಪ್ರಕರಣಗಳು. ಸೋಂಕು ಇರುವ ಸಾಧ್ಯತೆ ಹೆಚ್ಚಿವೆ” ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದರು.

ಅನಾರೋಗ್ಯದಿಂದ ಬಳಲುತ್ತಿರುವ 30,000 ಕ್ಕಿಂತ ಹೆಚ್ಚಿನ ಜನರನ್ನು ಅಧಿಕಾರಿಗಳು ವೀಕ್ಷಣೆಯಲ್ಲಿಟ್ಟಿದ್ದಾರೆ. ರಾಷ್ಟ್ರದ ರಾಜಧಾನಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ತಿಂಗಳ ಮಟ್ಟಿಗೆ ಮುಚ್ಚುವ ಆದೇಶವನ್ನು ಹೊರಡಿಸಲಾಗಿದೆ.

ವಿಶ್ವಾದ್ಯಂತ ವೇಗವಾಗಿ ಹರಡುವ ವೈರಸ್‌ನಿಂದ ಬಳಲುತ್ತಿರುವ ಜನರ ಸಂಖ್ಯೆ ಗುರುವಾರ ಸಂಜೆ 97,000 ಕ್ಕೆ ಹೆಚ್ಚಾಗಿದೆ. ಈ ಪೈಕಿ 3,300 ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ.

ಕರೊನಾ ವೈರಸ್ ಕಾಯಿಲೆ ಹರಡುವುದನ್ನು ತಪ್ಪಿಸಲು ಸಾಮೂಹಿಕ ಕೂಟಗಳನ್ನು ಕಡಿಮೆ ಮಾಡಲು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ.

ಭಾರತದ ಸೋಂಕಿತರಲ್ಲಿ 16 ಜನ ಇಟಾಲಿಯ ಪ್ರವಾಸಿಗರಾಗಿದ್ದಾರೆ. ಮೊದಲ ಮೂರು ಪ್ರಕರಣಗಳು ಕೇರಳದಿಂದ ವರದಿಯಾಗಿದ್ದು, ಮೂವರೂ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...