Homeಸಿನಿಮಾಕ್ರೀಡೆಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

ಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 85 ರನ್ನುಗಳ ಅಂತರದಲ್ಲಿ ಸೋಲುವ ಮೂಲಕ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರುಗಳಲ್ಲಿ 184/4 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ 185 ರನ್‌ಗಳ ಸವಾಲು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಮುಗ್ಗರಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಲಿಸಾ ಹೀಲಿ ಮತ್ತು ಬೆಥ್ ಮೂನಿ ಕ್ರಮವಾಗಿ 75, 78 ರನ್ ಗಳಿಸಿದರಿಂದ ಆಸ್ಟ್ರೇಲಿಯಾ ತಂಡವು 20 ಓವರಿಗೆ 184 ರನ್ನುಗಳನ್ನು ಪೇರಿಸಿಲು ಸಾಧ್ಯವಾಯಿತು.

ಉತ್ತಮ ಆಟವಾಡುತ್ತಿದ್ದ ಅಲಿಸಾ ಭಾರತದ ರಾಧಾ ಯಾದವ್ ಅವರ ಎಸೆತಕ್ಕೆ ವೇದ ಕೃಷ್ಣಮೂರ್ತಿ ಅವರಿಗೆ ಕ್ಯಾಚ್ ಕೊಟ್ಟು ಔಟಾದರು. ಬೆಥ್ ಮೂನಿ ಕೊನೆವರೆಗೂ ಔಟಾಗದೆ 78 ರನ್ನುಗಳನ್ನು ತಂಡಕ್ಕೆ ನೀಡಿದರು.

185 ರನ್‌ಗಳ ಗುರಿ ಬೆನ್ನ ಭಾರತ, ಶಫಾಲಿ ವರ್ಮ ಮತ್ತು ಸ್ಮೃತಿ ಮಂದನ ಮೊದಲಿಗರಾಗಿ ಬ್ಯಾಟ್ ಬೀಸಿ ಬಹುಬೇಗನೇ ಔಟಾದರು. ನಂತರ ದೀಪ್ತಿ ಶರ್ಮ, ವೇದ ಕೃಷ್ಣಮೂರ್ತಿ, ರೀಚಾ ಘೋಷ್ ಕ್ರಮವಾಗಿ 33, 19, 18 ರನ್ನುಗಳನ್ನು ನೀಡಿದರೂ ಭಾರತ ತಂಡವೂ 19.1 ಓವರಿನಲ್ಲಿ 99 ರನ್ನುಗಳನ್ನಷ್ಟೇ ಪೇರಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

ಸಂಕ್ಷಿಪ್ತ ಪಟ್ಟಿ:

ಆಸ್ಟ್ರೇಲಿಯಾ 184/4 (20.0 / 20)

ಅಲಿಸಾ ಹೀಲಿ 75 ರನ್ (39 ಬಾಲ್ ಗಳಲ್ಲಿ)
ಬೆತ್ ಮೂನಿ ಅಜೇಯ 78 ರನ್ (54 ಬಾಲ್ ಗಳಲ್ಲಿ)
ಮೆಗ್ ಲ್ಯಾನಿಂಗ್ 16 ರನ್ (15 ಬಾಲ್ ಗಳಲ್ಲಿ)
ಆಶ್ಲೀ ಗಾರ್ಡ್ನರ್ 2 ರನ್ (3 ಬಾಲ್ ಗಳಲ್ಲಿ)
ರಾಚೆಲ್ ಹೇನ್ಸ್ 4 ರನ್ (5 ಬಾಲ್ ಗಳಲ್ಲಿ)
ನಿಕೋಲಾ ಕ್ಯಾರಿ ಅಜೇಯ 5 ರನ್ (5 ಬಾಲ್ ಗಳಲ್ಲಿ)
ಹೆಚ್ಚುವರಿ 4 ರನ್ಗಳು
ಒಟ್ಟು 184/4 20.0

ಭಾರತ 99 (19.1 / 20)

ಶಫಾಲಿ ವರ್ಮಾ 2 ರನ್ (3 ಬಾಲ್ ಗಳಲ್ಲಿ)

ಸ್ಮೃತಿ ಮಂದಾನ 11 ರನ್ (8 ಬಾಲ್ ಗಳಲ್ಲಿ)

ತಾನಿಯಾ ಭಾಟಿಯಾ 2 ರನ್ (4 ಬಾಲ್ ಗಳಲ್ಲಿ)
ಜೆಮಿಮಾ ರೊಡ್ರಿಗಸ್ 2 ರನ್

ಹರ್ಮನ್‌ಪ್ರೀತ್ ಕೌರ್ 4 ರನ್ (7 ಬಾಲ್ ಗಳಲ್ಲಿ)

ದೀಪ್ತಿ ಶರ್ಮಾ 33 ರನ್ (35 ಬಾಲ್ ಗಳಲ್ಲಿ)

ವೇದ ಕೃಷ್ಣಮೂರ್ತಿ 19 ರನ್ (24 ಬಾಲ್ ಗಳಲ್ಲಿ)

ರಿಚಾ ಘೋಷ್ 18 ರನ್ (18 ಬಾಲ್ ಗಳಲ್ಲಿ)

ಶಿಖಾ ಪಾಂಡೆ 2 ರನ್ (4 ಬಾಲ್ ಗಳಲ್ಲಿ)

ರಾಧಾ ಯಾದವ್ 1ರನ್ (2 ಬಾಲ್ ಗಳಲ್ಲಿ)

ಪೂನಂ ಯಾದವ್ 1 ರನ್ (5 ಬಾಲ್ ಗಳಲ್ಲಿ)

ರಾಜೇಶ್ವರಿ ಗಾಯಕ್ವಾಡ್ ಅಜೇಯ 1 ರನ್ (3 ಬಾಲ್ ಗಳಲ್ಲಿ)

ಹೆಚ್ಚುವರಿ 5 ರನ್ಗಳು
ಒಟ್ಟು 99/10 (19.1 / 20)

ಫಲಿತಾಂಶ ಆಸ್ಟ್ರೇಲಿಯಾಕ್ಕೆ 85ರನ್‌ಗಳ ಗೆಲುವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...