Homeಮುಖಪುಟಸಂವಿಧಾನದ ಆಶಯಗಳನ್ನು ರಕ್ಷಿಸುವ ದೃಷ್ಟಿಯಿಂದ NPR ಜಾರಿಗೊಳಿಸಬೇಡಿ : ಸರ್ಕಾರಕ್ಕೆ ಒತ್ತಾಯಿಸಲು ಕಾಂಗ್ರೆಸ್ ನಿರ್ಣಯ

ಸಂವಿಧಾನದ ಆಶಯಗಳನ್ನು ರಕ್ಷಿಸುವ ದೃಷ್ಟಿಯಿಂದ NPR ಜಾರಿಗೊಳಿಸಬೇಡಿ : ಸರ್ಕಾರಕ್ಕೆ ಒತ್ತಾಯಿಸಲು ಕಾಂಗ್ರೆಸ್ ನಿರ್ಣಯ

- Advertisement -
- Advertisement -

“ಭಾರತ ದೇಶದ ಸಂವಿಧಾನದ ಮೂಲ ಆಶಯಗಳನ್ನು ಗೌರವಿಸಿ, ರಕ್ಷಿಸುವ ದೃಷ್ಟಿಯಿಂದ ಮತ್ತು ದೇಶದ ಸಾಮಾನ್ಯ ಜನರ ನೆಮ್ಮದಿಗೆ ಯಾವುದೇ ಆತಂಕ ಅಥವಾ ಭಯ ಇಲ್ಲದ ವಾತಾವರಣ ಸೃಷ್ಟಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ದೇಶದ ಹಿತದೃಷ್ಟಿ ಮತ್ತು ಸಂವಿಧಾನದ ಆಶಯಗಳನ್ನು ರಕ್ಷಿಸುವ ದೃಷ್ಟಿಯಿಂದ NPR ಅನ್ನು ಜಾರಿಗೊಳಿಸದಿರಲು ಸರ್ವಾನುಮತದಿಂದ ಸರ್ಕಾರವನ್ನು ಒತ್ತಾಯಿಸಲಾಯಿತು” ಎಂದು ಕಾಂಗ್ರೆಸ್‌ ಪಕ್ಷವು ನಿರ್ಣಯ ತೆಗೆದುಕೊಂಡಿದೆ.

ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷರಾದ ಈಶ್ವರ ಭಿ, ಖಂಡ್ರೆಯವರು ಸಭೆಯಲ್ಲಿ ಹಾಜರಿದ್ದು ಈ ನಿರ್ಣಯ ತೆಗೆದುಕೊಂಡಿದ್ದಾರೆ.

ರಾಜ್ಯ ಮತ್ತು ದೇಶದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ, ಇಡೀ ಭಾರತ ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಅಹಿಂಸಾತ್ಮಕವಾಗಿ ವಿವಿಧ ಸಂಘಟನೆಗಳು, ರ್ಪಗತಿಪರ ಚಿಂತಕರು ಮತ್ತು ನಿಷ್ಠಾವಂತ ದೇಶ ಭಕ್ತರಿಂದ NPR, NRC, CAA ಇದರ ವಿರುದ್ದ ಅಹಿಂಸಾತ್ಮಕ ಚಳುವಳಿ ನಿರಂತರವಾಗಿ ನಡೆಯುತ್ತಿರುವ ವಿಷಯವನ್ನು ಸಭೆಯು ಗಂಭೀರವಾಗಿ ಪರಿಗಣಿಸಿ, ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...