ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ ಮಾಡಿದ ಆರೋಪದಲ್ಲಿ ಲಕ್ನೋದಾದ್ಯಂತ ಹಾಕಿದ್ದ ಪೋಸ್ಟರ್‌ಗಳನ್ನು ತೆಗೆದುಹಾಕುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ ಎಂದು ಪಿಟಿಐ ವರದಿ ಮಾಡಿದೆ.
ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧದ ಉತ್ತರ ಪ್ರದೇಶ ಸರ್ಕಾರದ ಮೇಲ್ಮನವಿಯನ್ನು ಮಾರ್ಚ್ 12 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಉತ್ತರಪ್ರದೇಶ ಸರಕಾರವು ಅಳವಡಿಸಿಲಾಗಿದ್ದ ಹಿಂಸಾಚಾರದ ಆರೋಪ ಹೊತ್ತ ಸಿಎಎ ಪ್ರತಿಭಟನಾಕಾರರ ಭಾವಚಿತ್ರವುಳ್ಳ ಎಲ್ಲಾ ಪೋಸ್ಟರ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಯೋಗಿ ಸರ್ಕಾರಕ್ಕೆ ಆದೇಶಿಸಿತ್ತು. ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ನೇತೃತ್ವದ ನ್ಯಾಯಪೀಠವು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ಮಾರ್ಚ್ 16 ರೊಳಗೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರೊಂದಿಗೆ ತೆಗೆಸಿದ ವರದಿಯನ್ನು ಸಲ್ಲಿಸುವಂತೆ ನಿರ್ದೇಶಿಸಿತ್ತು.
ಭಾನುವಾರ, ಅಲಹಾಬಾದ್ ಹೈಕೋರ್ಟ್ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ತೆಗೆದುಕೊಂಡು ವಿಚಾರಣೆ ನಡೆಸಿದ ನಂತರ ಆದೇಶವನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು. ಅವತ್ತು ನ್ಯಾಯಪೀಠವು ಉತ್ತರ ಪ್ರದೇಶ ಅಧಿಕಾರಿಗಳ ಕ್ರಮವನ್ನು “ಅತ್ಯಂತ ಅನ್ಯಾಯ” ಎಂದು ಹೇಳಿತ್ತು ಅಲ್ಲದೆ ಇದು ಜನರ ವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಅತಿಕ್ರಮಣವಾಗಿದೆ ಎಂದು ಹೇಳಿತ್ತು. ಸೋಮವಾರ ತೀರ್ಪು ಪ್ರಕಟಿಸಿದ ಹೈಕೋರ್ಟ್ ಉತ್ತರಪ್ರದೇಶ ಸರಕಾರವು ಅಳವಡಿಸಿದ್ದ ಹಿಂಸಾಚಾರದ ಆರೋಪ ಹೊತ್ತ ಭಾವಚಿತ್ರವುಳ್ಳ ಎಲ್ಲಾ ಪೋಸ್ಟರ್‌ಗಳು ಮತ್ತು ಹೋರ್ಡಿಂಗ್‌ಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಆದೇಶಿಸಿತ್ತು.
ಅನೇಕ ಆರೋಪಿಗಳಿಗೆ ವೈಯಕ್ತಿಕ ಆಸ್ತಿ ಲಗತ್ತು ನೋಟಿಸ್‌ಗಳನ್ನು ಈಗಾಗಲೇ ಸರ್ಕಾರ ಕಳುಹಿಸಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.


