Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...