Homeಮುಖಪುಟಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಗಾಂಧಿ ನೆನಪಿನಲ್ಲಿ ರಾಜ್ಯದ್ಯಂತ ಉಪವಾಸ ಸತ್ಯಾಗ್ರಹ : NPR ಜಾರಿಗೊಳಿಸದಂತೆ ತಡೆಯುವ ಪ್ರತಿಜ್ಞೆ..

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

- Advertisement -
- Advertisement -

ಮಹಾತ್ಮ ಗಾಂಧೀಜಿಯವರು ನಡೆಸಿದ ದಂಡಿ (ಉಪ್ಪಿನ) ಸತ್ಯಾಗ್ರಹದ 90ನೇ ವರ್ಷಾಚರಣೆಯ ನೆನಪು ಹಾಗೂ ಸ್ಫೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ಇಂದು ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಉಪವಾಸ ಸತ್ಯಾಗ್ರಹ ನಡೆದಿದ್ದು NPR ಜಾರಿಗೊಳಿಸದಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಾವಿರಾರು ಜನರು ಇಂದು ಒಂದೇ ದಿನ, ಒಂದೇ ಬಾರಿಗೆ, ಒಂದೇ ವಿಚಾರದ ಕಾರಣಕ್ಕೆ ಉಪವಾಸವಿದ್ದು ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ವಿರೋಧಿಸಿ ಅಪೂರ್ವ ಸತ್ಯಾಗ್ರಹ ಇದಾಗಿದ್ದು ರಾಜ್ಯದ ಜನರ ಗಮನ ಸೆಳೆದಿದೆ.

ಮೈಸೂರಿನಲ್ಲಿ

ನಾವು ಭಾರತೀಯರು – We the people of India ಜಂಟಿ ಕ್ರಿಯಾ ಸಮಿತಿ – ಕರ್ನಾಟಕ, ಸಂವಿಧಾನ ಉಳಿಸಿ ವೇದಿಕೆಗಳು ಕರೆ ಕೊಟ್ಟಿದ್ದ ಉಪವಾಸ ಸತ್ಯಾಗ್ರಹ ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ರಾಯಚೂರು, ಸಿಂಧನೂರು, ಶಿವಮೊಗ್ಗ, ಬಳ್ಳಾರಿ, ಮಣಿಪಾಲ, ತುಮಕೂರು, ಯಾದಗಿರಿ, ರಾಮನಗರ ಮುಂತಾದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವ, ಭಾಷಾ ತಜ್ಞರಾದ ಪ್ರೊ.ಜಿ.ಎನ್‌ ಗಣೇಶ್‌ ದೇವಿ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ನ್ಯಾಯವಾದಿ ಬಾಲನ್‌ ಸೇರಿದಂತೆ ಹಲವು ಗಣ್ಯರು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರು

ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಆಯ್ದ ಸತ್ಯಾಗ್ರಹಿಗಳೊಂದಿಗೆ ಗಾಂಧಿಯವರು ಮಾರ್ಚ್ 12, 1930ರಂದು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದರು. ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾದರು. ಅಂತಹ ಎಷ್ಟೋ ಬಂಧನಗಳು, ಸಾವುಗಳು, ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಬಂದವು. ಇಂದು ಈ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದಿದೆ ಎಂದು ಸತ್ಯಾಗ್ರಹಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ

ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಯಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ ಎಂದು ಸತ್ಯಾಗ್ರಹಿಗಳು ಘೋಷಿಸಿದ್ದಾರೆ. ಹಲವೆಡೆ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸಬಾರದೆಂದು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ಸಿಂಧನೂರು

ಚಿಕ್ಕಮಗಳೂರು, ಚಿತ್ರದುರ್ಗ, ಹೊಸಪೇಟೆ, ಕೊಪ್ಪಳ, ವಿಜಯಪುರ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ಯೋಜಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಅಪಾಯಗಳ ಕುರಿತು ಕಾರ್ಯಗಾರಗಳು ಜರುಗಲಿವೆ.

ಶಿವಮೊಗ್ಗ

ಎನ್‌ಪಿಆರ್‌ ವಿರೋಧಿಸಿ ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ

ಜನಗಣತಿಯೊಂದಿಗೇನೆ ಏಪ್ರಿಲ್‌ 15 ರಿಂದ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಅನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಜನರು ತಮ್ಮ ಗಟ್ಟಿ ನಿರ್ಧಾರವನ್ನು ಪ್ರಕಟಿಸಲು ಮಾರ್ಚ್‌ 29 ಕ್ಕೆ ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ರಾಯಚೂರು

ಈ ಸಮಾವೇಶದಲ್ಲಿ ಜನಪರ ಸಂಘಟನೆಗಳು, ರಾಜಕೀಯ ಪಕ್ಷಗಳು, ವಿವಿಧ ಧರ್ಮ ಮತ್ತು ಜಾತಿ ಸಂಘಟನೆಗಳು, ರೈತ ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಲಕ್ಷಾಂತರ ಜನ ಭಾಗವಹಿಸಲಿದ್ದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಹೋರಾಟ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧಾರವಾಡ

ಅದಕ್ಕೂ ಸರ್ಕಾರ ಬಗ್ಗದಿದ್ದಲ್ಲಿ ಅಂಬೇಡ್ಕರ್‌ ಜನ್ಮದಿನವಾದ ಏಪ್ರಿಲ್‌ 14 ರಂದು ಮತ್ತೊಂದು ಸುತ್ತಿನ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ಸಹ ನೀಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಎನ್‌ಆರ್‌ಸಿಯ ಮೊದಲ ಹೆಜ್ಜೆಯಾಗಿರುವ ಎನ್‌ಪಿಆರ್‌ ಜಾರಿಯಾಗಬಾರದೆಂಬುದು ನಾವು ಭಾರತೀಯರು ತಂಡದ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...