Homeಕರ್ನಾಟಕಪ್ರಧಾನಿಯ ಜನತಾ ಕರ್ಫ್ಯೂಗೆ ದೇವೇಗೌಡರಿಂದ ಬೆಂಬಲ

ಪ್ರಧಾನಿಯ ಜನತಾ ಕರ್ಫ್ಯೂಗೆ ದೇವೇಗೌಡರಿಂದ ಬೆಂಬಲ

- Advertisement -
- Advertisement -

ಭಾನುವಾರ ಪ್ರಧಾನ ಮಂತ್ರಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಮಾಜೀ ಪ್ರಧಾನಮಂತ್ರಿ ದೇವೇಗೌಡ ಬೆಂಬಲ ನೀಡಿದ್ದಾರೆ. ಮಾರ್ಚ್ 22 ರ ಆದಿತ್ಯವಾರದಂದು ಒಂದು ದಿನ ಜನತಾ ಕರ್ಫ್ಯೂಗೆ ಪ್ರಧಾನಿ ಮೋದಿ ನಿನ್ನೆ ಕರೆ ನೀಡಿದ್ದರು.

“ಕೇಂದ್ರ ಸರ್ಕಾರ ಮತ್ತು ದೇಶದ ಎಲ್ಲಾ ರಾಜ್ಯ ಸರ್ಕಾರಗಳು ತೆಗೆದು ಕೊಂಡಿರುವ ಮುನ್ನೆಚ್ಚರಿಕೆಯ ಉಪಕ್ರಮಗಳಿಗಾಗಿ ಅಭಿನಂದಿಸುತ್ತೇನೆ” ಎಂದಿರುವ ದೇವೇಗೌಡರು, “ಪ್ರಧಾನಿಯವರು ಮಾಡಿದ ಭಾಷಣ ಮತ್ತು ಕೊಟ್ಟ ಕರೆ ಅತ್ಯಂತ ಸಮಯೋಚಿತವೂ ಮತ್ತು ಆಚರಣೆ ಯೋಗ್ಯವೂ ಆಗಿದೆ. ಈ ಮಹಾಮಾರಿಗೆ ಮಂತ್ರ ಮತ್ತು ಮದ್ದು ಇಲ್ಲದಾಗ ಅದನ್ನು ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಮತ್ತು ಸಂಯಮದಿಂದಲೇ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನೆಯೋಗ್ಯವಾಗಿದೆ. ಸಾಮಾಜಿಕ ಕರ್ತವ್ಯದ ದೃಷ್ಟಿಯಿಂದ ಜನತಾ ಕರ್ಫ್ಯೂವನ್ನು ಯಶಸ್ಸೀಗೊಳಿಸಬೇಕೆಂದು ಪ್ರಧಾನಿ ನೀಡಿರುವ ಕರೆಯನ್ನು ಪಾಲಿಸಲೇ ಬೇಕು” ಎಂದು ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟ್ಟರ್ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿರುವ ದೇವೇಗೌಡರು “ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ‌ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು‌ ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ಪ್ರಧಾನಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ” ಎಂದಿದ್ದಾರೆ.

ಅಲ್ಲದೆ, ಪ್ರಾಣವನ್ನೂ ಲೆಕ್ಕಿಸದೆ ಜನಸೇವೆಯಲ್ಲಿ ನಿರತರಾಗಿರುವವರ ಅನುಪಮ ಸೇವೆಗೆ ಮಾರ್ಚ್‌ 22 ರಂದು ಸಂಜೆ 5 ಗಂಟೆಗೆ 5 ನಿಮಿಷಗಳ ಕಾಲ ತಾವಿರುವ ತಾಣದಿಂದಲೇ ಧನ್ಯವಾದಗಳನ್ನು ಸಲ್ಲಿಸಬೇಕೆಂದು ಕೊಟ್ಟಿರುವ ಕರೆಯೂ ಸ್ವಾಗತಾರ್ಹವಾದುದು ಎಂದು ದೇವೇಗೌಡರು ಹೇಳಿದ್ದಾರೆ.

“ಪ್ರಧಾನಿಯವರ ಕರೆಯನ್ನು ಯಾವುದೇ ರಾಜಕೀಯ ಲೇಪ ಹಚ್ಚದೇ ನಾವೆಲ್ಲರೂ ಸ್ವಾಗತಿಸಬೇಕು ಹಾಗೂ ಪಾಲಿಸಬೇಕು. ಅದರ ಜೊತೆಗೆ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ತೆಗೆದು ಕೊಳ್ಳಬಹುದಾದ ಸಾರ್ವಜನಿಕ ಹಿತಾಸಕ್ತಿ ಹಾಗೂ ನಮ್ಮೆಲ್ಲರ ಸ್ವಾಸ್ಥ್ಯ ಕಾಪಾಡುವ ಉಪಕ್ರಮಗಳಿಗೆ ನಾವೆಲ್ಲರೂ ವೈಯಕ್ತಿಕವಾಗಿ ಬದ್ಧರಾಗಿರಬೇಕು” ಎಂದು ಮಾಜಿ ಪ್ರಧಾನಿ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...