Homeಮುಖಪುಟಕೊರೊನಾ ವಿರುದ್ಧ ಹೋರಾಡುತ್ತಿರುವ ವರ್ಗಕ್ಕೆ ಪ್ರೋತ್ಸಾಹ ಧನ ನೀಡಬೇಕು: ಎಚ್‌ಡಿಕೆ

ಕೊರೊನಾ ವಿರುದ್ಧ ಹೋರಾಡುತ್ತಿರುವ ವರ್ಗಕ್ಕೆ ಪ್ರೋತ್ಸಾಹ ಧನ ನೀಡಬೇಕು: ಎಚ್‌ಡಿಕೆ

- Advertisement -
- Advertisement -

ಕೊರೊನಾ ವೈರಸ್ ವಿರುದ್ಧ ಸೆಣಸುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರನ್ನು ಚಪ್ಪಾಳೆ ಮೂಲಕ ಗೌರವಿಸಬೇಕೆಂಬ ಮೋದಿ ಕರೆಗೆ ಬೆಂಬಲಿಸುತ್ತಾ ನನ್ನದೊಂದು ಕೋರಿಕೆ. ವಿಪತ್ತಿನ ವಿರುದ್ಧ ಹೋರಾಡುತ್ತಿರುವ ಈ ವರ್ಗಕ್ಕೆ ಸರ್ಕಾರ Incentive (ಪ್ರೋತ್ಸಾಹ ಧನ) ಘೋಷಿಸಿ ಅವರನ್ನು ಮತ್ತಷ್ಟು ಪ್ರೋತ್ಸಾಹಿಸಬೇಕು ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಮಯ, ಕುಟುಂಬ, ಆರೋಗ್ಯ ಲೆಕ್ಕಿಸದೇ ಧೈರ್ಯದಿಂದ ಹೋರಾಡುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರ ಪರಿಶ್ರಮವನ್ನು ಗೌರವಿಸಬೇಕು. ಪ್ರೋತ್ಸಾಹ ಧನದ ಮೂಲಕ ನೈತಿಕ, ಆರ್ಥಿಕ ಬೆಂಬಲ‌ ನೀಡಬೇಕು.‌ ಇಷ್ಟೇ ಅಲ್ಲ, ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಎಲ್ಲರಿಗೂ ‘ಗೌರವ ಪತ್ರ’ ನೀಡಿ ಅವರ ಹೋರಾಟವನ್ನು ಅಜರಾಮರಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಕಳೆದ ಫೆಬ್ರವರಿಯಿಂದಲೇ ವೈದ್ಯಕೀಯ ವೃಂದದವರು, ಪೊಲೀಸರು, ಪೌರಕಾರ್ಮಿಕರು ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಫೆಬ್ರವರಿಯಿಂದ ಆರಂಭಿಸಿ, ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಯುವವರೆಗೆ ಪ್ರತಿ ತಿಂಗಳು ಇವರೆಲ್ಲರಿಗೂ ಪ್ರೋತ್ಸಾಹ ಧನ ನೀಡಬೇಕು. ಅವರ ಧೈರ್ಯ, ತ್ಯಾಗಕ್ಕೆ ಸರ್ಕಾರ ಮನ್ನಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...