Homeಮುಖಪುಟಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

ಇಂದಿರಾ ಕ್ಯಾಂಟೀನ್‌ನಲ್ಲಿ ಇಡೀ ದಿನ ಬಡವರಿಗೆ ಉಚಿತ ಊಟ – ಯಡಿಯೂರಪ್ಪ

- Advertisement -
- Advertisement -

ಕೊರೊನಾ ಎಫಕ್ಟ್ ನಿಂದ ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಿಗಳು ದಿನದ ಊಟಕ್ಕಾಗಿ ದುಡಿಯುವ ಜನರಿಗೆ ಭಾರೀ ಹೊಡೆತ ಬಿದ್ದಿದ್ದು ಆರ್ಥಿಕವಾಗಿ ಸಂಕಷ್ಟ ಎದುರಿಸುವಂತಾಗಿದೆ. ಹೀಗಾಗಿ ಬಡವರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರಿಗೆ ಉಚಿತ ಊಟದ ವ್ಯವಸ್ಥೆಗೆ ಸಿಎಂ ಚಿಂತನೆ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗಾಗಿ ಎಲ್ಲಾ ಇಂದಿರಾ ಕ್ಯಾಂಟೀನ್ ಇಡೀ ದಿವಸ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಒಂದು ವೇಳೆ ಪರಿಸ್ಥಿತಿ ಬಿಗಡಾಯಿಸಿ ರಾಜ್ಯವಿಡೀ ಲಾಕ್ ಡೌನ್ ಮಾಡಿದಂತ ಸಂದರ್ಭದಲ್ಲಿ ದಿನ ಗೂಲಿ ಕಾರ್ಮಿಕರಿಗೆ ಕಷ್ಟವಾಗುವ ಹಿನ್ನೆಲೆಯಲ್ಲಿ ಬಡವರ ಹಿತದೃಷ್ಟಿಯಿಂದ ಇಂತಹದ್ದೊಂದು ನಿರ್ಧಾರ ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದಿದ್ದಾರೆ.

1000 ವಿಕ್ಟೋರಿಯಾದಲ್ಲಿ ಬೆಡ್ ವ್ಯವಸ್ಥೆ, ಹೋಮ್ ಕ್ವಾರೆಂಟೈನ್ ನಲ್ಲಿರುವವರಿಗೆ ನೋಟೀನ್ ಜಾರಿ, ಇಂದಿರಾ ಕ್ಯಾಂಟೀನಲ್ಲಿ ತೀರ ಬಡವರಿಗೆ ಉಚಿತ ಊಟ, 100ಕ್ಕೂ ಹೆಚ್ಚು ವೆಂಟಿಲೇಟರ್ ಗಳನ್ನು ನೀಡುವದಾಗಿ ಹೇಳಿದ್ದಾರೆ. 1000 ವೆಂಟಿಲೇಟರ್ ಖರೀದಿಸುವುದಾಗಿ ಹೇಳಿದ್ದಾರೆ. ಜೊತೆಗೆ ಇಂದು ಜನ ನಿರ್ಲಕ್ಷ್ಯ ತೋರಿ ಹೊರಬರುತ್ತಿದ್ದು ವೈರಸ್ ಹರಡುವ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಕಂಪ್ಲೀಟ್ ಲಾಕ್ ಡೌನ್ ಗೆ ಸರ್ಕಾರ ನಿರ್ಧರಿಸುವ ಸಾಧ್ಯತೆ ಹೆಚ್ಚಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...