Homeಮುಖಪುಟಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ: ಸಂಬಳ ಸಹಿತ ರಜೆ ನೀಡಲು ಹಿಂದೇಟು ಹಾಕುತ್ತಿರುವ ಶಾಹಿ ಎಕ್ಸ್‌ಪೋರ್ಟ್ ಗಾರ್ಮೆಂಟ್‌

28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ಈ ಕಂಪನಿ ತಾಕೀತು ಮಾಡಿದೆ.

- Advertisement -
- Advertisement -

ಸಿದ್ಧ ಉಡುಪು ತಯಾರಿಕಾ (ಗಾರ್ಮೆಂಟ್ಸ್) ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು ಸರಕಾರದ ಆದೇಶವನ್ನೇ ಉಲ್ಲಂಘಿಸಿ ಉದ್ಧಟತನ ಮೆರೆದಿದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್ ಆರೋಪಿಸಿದೆ.

ರಾಜ್ಯ ಸರ್ಕಾರವು ಸಾಂಕ್ರಾಮಿಕ ಕಾಯಿಲೆ ಕೊರೊನಾ ತಡೆಯುವ ಉದ್ದೇಶದಿಂದ ದಿನಾಂಕ 23.03.2020 ರಂದು ಆದೇಶ ಹೊರಡಿಸಿ ರಾಜ್ಯಾದ್ಯಂತ ಇರುವ ಎಲ್ಲಾ ಕಾರ್ಖಾನೆಗಳಿಗೆ 31.03.2020 ರವರೆಗೆ ಸಂಬಳ ಸಹಿತ ರಜೆ ಘೋಷಿಸಿದೆ. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ವೇತನವನ್ನು ಕಡಿತಗೊಳಿಸಬಾರದೆಂದು ಮತ್ತು ಕಾರ್ಮಿಕರನ್ನು ಯಾವುದೇ ಕಾರಣಕ್ಕೆ ಕೆಲಸದಿಂದ ವಜಾ ಮಾಡಬಾರದೆಂದೂ ಆದೇಶಿಸಿದೆ.

ಆದರೆ ಸರಕಾರದ ಆದೇಶವನ್ನು ಕಡೆಗಣಿಸಿ, ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗವು, ಸ್ವಾರ್ಥ, ಸರ್ವಾಧಿಕಾರಿ ಧೋರಣೆಯನ್ನು ಮುಂದುವರಿಸಿ ದಿನಾಂಕ 28.03.2020 ರವರೆಗೆ ಮಾತ್ರ ರಜೆಯನ್ನು ಘೋಷಿಸಿ, ಘೋಷಿತ ರಜಾದಿನಗಳಿಗೆ ಬದಲಿಗೆ ಮುಂದಿನ ಅವಧಿಯಲ್ಲಿ ಕೆಲಸ ಮಾಡಿ ಕೊಡಬೇಕೆಂದೂ (Comp-up) ತಾಕೀತು ಮಾಡಿದೆ.

ಈ ಮೊದಲು ಇದೇ ಕಂಪನಿಯು ಮಾರ್ಚ್‌ 19ರಂದು ಮಂಡ್ಯದ ಎಲ್ಲಾ ಗಾರ್ಮೆಂಟ್ಸ್‌ಗಳಿಗೆ ರಜೆ ಘೋಷಿಸಿದ್ದನ್ನು ವಿರೋಧಿಸಿ, ಜಿಲ್ಲಾಧಿಕಾರಿಗಳು ಆದೇಶ ಹಿಂಪಡೆಯುವಂತೆ ಒತ್ತಾಯಿಸಿತ್ತು.

ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಆಡಳಿತ ವರ್ಗದ ಈ ನಡೆ, ಕಾರ್ಮಿಕರ ಆರೋಗ್ಯದ ಬಗೆಗಿನ ನಿಷ್ಕಾಳಜಿ, ಬೇಜವಾಬ್ದಾರಿತನ ಮತ್ತು ಅತಿ ಲಾಭದ ದುರಾಸೆಯನ್ನಷ್ಟೇ ತೋರಿಸುತ್ತದೆ.

ಕಾರ್ಮಿಕರ ಹಿತ ಕಾಪಾಡಬೇಕಾದ ಸದರಿ ಕಂಪನಿಗೆ ತನ್ನ ಲಾಭವೇ ಮುಖ್ಯ ಆಗಿದೆಯೇ ಹೊರತು ಕಾರ್ಮಿಕರ ಆರೋಗ್ಯ ಮತ್ತು ಜೀವದ ಬಗ್ಗೆ ಕಿಂಚಿತ್ತು ಗೌರವ ಇಲ್ಲದಿರುವುದನ್ನು ಸೂಚಿಸುತ್ತದೆ ಎಂದು ಗಾರ್ಮೆಂಟ್ ಅಂಡ್ ಟೆಕ್ಸ್ ಟೈಲ್ ವರ್ಕರ್ಸ್ ಯೂನಿಯನ್‌ನ ಜಯರಾಮುರವರು ಕಿಡಿಕಾರಿದ್ದಾರೆ.

ಸರಕಾರದ ಆದೇಶವನ್ನೇ ಧಿಕ್ಕರಿಸಿ, ಬಡ ಕಾರ್ಮಿಕರ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿರುವ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ವಿರುದ್ಧ ಸಂಬಂಧಪಟ್ಟವರು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರ ಹಿತ ಕಾಪಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

    • Shahi Export Pvt Ltd unit 12 Bannerghatta road e company kuda janarige thumba mosa madutide beacuse of evening 5.30 ge punching madsi over time extra 12 clock madstare workarige yavude thara specialy ella out of state yinda ladies worker karesikondu PG kottidare but cleaning Ella heloru keloru yaru ella one time searching bandre nimge gottagutte sir

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...