Homeಅಂತರಾಷ್ಟ್ರೀಯಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರೊನಾ : ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ

ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಅಮೆರಿಕಾದ ಟ್ರಂಪ್ ಆಡಳಿತವು ಕ್ಯೂಬಾದ ವೈದ್ಯಕೀಯ ನೆರವು ಕಾರ್ಯಾಚರಣೆಗಳನ್ನು ತಿರಸ್ಕರಿಸುವಂತೆ ಹಲವು ದೇಶಗಳಿಗೆ ಒತ್ತಡ ಹೇರುವ ಮೂಲಕ ಆಶ್ಚರ್‍ಯ ಉಂಟುಮಾಡಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವೆಬ್ ವರದಿ ಮಾಡಿದೆ.

ಏಕಾಏಕಿ ಎರಗಿದ ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಕ್ಯೂಬಾ ದೇಶವು ಪ್ರಮುಖ ಪಾತ್ರ ವಹಿಸುವ ಮೂಲಕ ಜಗತ್ತಿನ ಗಮನ ಸೆಳೆದಿದ್ದು ಶ್ಲಾಘನೆಗೆ ಪಾತ್ರವಾಗಿದೆ. ಅದು ಇಟಲಿ ಸೇರಿದಂತೆ ಕೆಲವು ಕೊರೊನಾ ಪೀಡಿತ ದೇಶಗಳಿಗೆ ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಅಲ್ಲದೇ ಕ್ಯೂಬಾವು ಇಂಟರ್ಫೆರಾನ್ ಆಲ್ಫಾ -2 ಬಿ ಯ ಔಷದಿ ಸರಬರಾಜುಗಳನ್ನು ಸಹ ಒದಗಿಸಿದೆ. ಇದು 1,500 ಕ್ಕೂ ಹೆಚ್ಚು ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಿದಾಗ ಪರಿಣಾಮಕಾರಿ ಎಂದು ಸಾಬೀತಾಗಿದೆ. ಉಸಿರಾಟದ ಕಾಯಿಲೆಯನ್ನು ಎದುರಿಸಲು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗವು ಆಯ್ಕೆ ಮಾಡಿದ 30 ಔಷಧಿಗಳಲ್ಲಿ ಇದು ಸಹ ಒಂದಾಗಿದೆ.

ಆದರೆ ಅಮೆರಿಕವು ಕ್ಯೂಬಾದ ಗುರಿ ಕೋವಿಡ್ -19 ಹರಡುವುದನ್ನು ತಡೆಯುವುದಲ್ಲ, ಅದರ ವೈದ್ಯರಿಗೆ ಸಂಬಳ ಪಾವತಿಸುವುದಕ್ಕಾಗಿ ಕೆಲವು ದೇಶಗಳಿಂದ ಹಣಕಾಸಿನ ಸಹಾಯಕ್ಕಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದೆ.


ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟ: ಇಟಲಿಗೆ ಬಲಿಷ್ಟ ವೈದ್ಯರ ತಂಡ ಕಳುಹಿಸಿಕೊಟ್ಟ ʼಕ್ಯೂಬಾʼ


ಹವಾನಾದಲ್ಲಿನ ಯುಎಸ್ ರಾಯಭಾರ ಕಚೇರಿಯು “ಕ್ಯೂಬನ್ ಸರ್ಕಾರವು ಅಂತರರಾಷ್ಟ್ರೀಯ ನೆರವು ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡ ವೈದ್ಯರು ಮತ್ತು ದಾದಿಯರ ಹೆಚ್ಚಿನ ವೇತನವನ್ನು ತಡೆಹಿಡಿದಿದೆ ಮತ್ತು ಅವರನ್ನು ಭಯಾನಕ ಕೆಲಸದ ಪರಿಸ್ಥಿತಿಗಳಿಗೆ ಒಡ್ಡುತ್ತದೆ” ಎಂದು ಸುಳ್ಳು ಆರೋಪ ಮಾಡಿದೆ.

1959ರ ಕ್ಯೂಬಾ ಕ್ರಾಂತಿಯ ನಂತರ ಹವಾನದ ಮಾನವೀಯ ವೈದ್ಯಕೀಯ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ವಿಶ್ವದಾದ್ಯಂತದ ಹಲವು ಬಡ ರಾಷ್ಟ್ರಗಳಿಗೆ ಆರೋಗ್ಯ ರಕ್ಷಣೆಯನ್ನು ಅದು ಒದಗಿಸಿದೆ.

ಕ್ಯೂಬನ್ ವಿದೇಶಾಂಗ ಸಚಿವಾಲಯದ ಪ್ರಕಾರ, 1960 ರಿಂದೀಚೆಗೆ 6,00,000 ಕ್ಕೂ ಹೆಚ್ಚು ವೈದ್ಯರು, ದಾದಿಯರು ಮತ್ತು ವೈದ್ಯಕೀಯ ತಂತ್ರಜ್ಞರನ್ನು 160 ಕ್ಕೂ ಹೆಚ್ಚು ದೇಶಗಳಿಗೆ ಕಳುಹಿಸಲಾಗಿದೆ. ಈ ಕಾರ್ಯಕ್ರಮವು ಪ್ರಸ್ತುತ ಸುಮಾರು 60 ದೇಶಗಳಲ್ಲಿ ಸಕ್ರಿಯವಾಗಿದೆ.

ಸುಮಾರು ಎರಡು ಡಜನ್ ಕಾರ್ಯಾಚರಣೆಗಳನ್ನು ಉಚಿತವಾಗಿ ನೀಡಿದರೆ, ಇತರ ದೇಶಗಳು ಹವಾನಾಕ್ಕೆ ಹಣ ಪಾವತಿಸುತ್ತವೆ. ಇದು ವರ್ಷಕ್ಕೆ ಸುಮಾರು 6.3 ಬಿಲಿಯನ್ ಡಾಲರ್‌ ಹಣ (8 4.8 ಬಿಲಿಯನ್) ಗಳಿಸುತ್ತಿದೆ. ಇದು ಆರು ದಶಕಗಳ ಅಮೆರಿಕಾದ ಆರ್ಥಿಕ ದಿಗ್ಬಂಧನದ ಪರಿಣಾಮವನ್ನು ತಗ್ಗಿಸಲು ಸಹಾಯ ಮಾಡುತ್ತಿದೆ.

ಅಮೆರಿಕಾವು ಕ್ಯೂಬಾ ಮೇಲೆ ದಿಗ್ಬಂಧನ ವಿಧಿಸಿದ ನಂತರ ವಾಷಿಂಗ್ಟನ್‌ನ ಒತ್ತಡಕ್ಕೆ ಮಣಿದು ಹಲವಾರು ಬಲಪಂಥೀಯ ಸರ್ಕಾರಗಳು ಕ್ಯೂಬಾದ ವೈದ್ಯಕೀಯ ಕಾರ್ಯಗಳನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದವು.

ಅವರಲ್ಲಿ ಒಂದು ದೇಶ ಬ್ರೆಜಿಲ್ ಆಗಿದ್ದು, ಅದರ ಬಲಪಂಥೀಯ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 10,000 ವೈದ್ಯರಲ್ಲಿ ಹೆಚ್ಚಿನವರನ್ನು ತಮ್ಮ ದೇಶದಿಂದ ಹೊರಹಾಕಿದ್ದರು. ವೈದ್ಯರನ್ನು ಸಮವಸ್ತ್ರದ ವೇಷ ಧರಿಸಿದ ಭಯೋತ್ಪಾದಕರು ಎಂದು ಕರೆದು ಅವಮಾನ ಮಾಡಿದ್ದರು.

ಆದರೆ ಈಗ ಕೊರನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಬ್ರೆಜಿಲ್ ಹೆಣಗಾಡುತ್ತಿರುವಾಗ, ಕ್ಯೂಬಾದ ವೈದ್ಯಕೀಯ ತಂಡಗಳು ಪುನಃ ಬ್ರೆಜಿಲ್‌ಗೆ ಮರಳುವಂತೆ ಮನವಿ ಮಾಡುತ್ತಿದ್ದಾರೆ. ಅಂದು ಅಹಂಕಾರ ಪ್ರದರ್ಶಿಸಿದ ಅದೇ ಬ್ರೆಜಿಲ್‌ ಇಂದು ಕ್ಯೂಬಾವನ್ನು ಬೇಡಿಕೊಳ್ಳುವ ಸ್ಥಿತಿಗೆ ಬಂದು ತಲುಪಿದೆ.

ಆದರೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಮಾನವೀಯ ನೆರವು ಕಾರ್ಯಾಚರಣೆಗಳ ಮೂಲಕ ದಿಟ್ಟ ಹೋರಾಟಕ್ಕಾಗಿ ಕ್ಯೂಬಾವನ್ನೇ ಜಗತ್ತೆ ಹಾಡಿ ಹೊಗಳುತ್ತಿವೆ. ಆದ್ದರಿಂದ ಅಮೆರಿಕ ಕ್ಯೂಬಾ ಮತ್ತು ಚೀನಾ ಎರಡರ ವಿರುದ್ಧವೂ ಕಿಡಿಕಾರುತ್ತಿದೆ.

ಅದೇ ಸಮಯದಲ್ಲಿ, ಇರಾನ್ ಮತ್ತು ವೆನೆಜುವೆಲಾ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಬಿಗಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...