Homeಮುಖಪುಟಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

ಉತ್ತರ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ’ಸೋಂಕುನಿವಾರಕ’ ಸಿಂಪಡಿಸುತ್ತಿರುವ ಅಘಾತಕಾರಿ ವಿಡಿಯೊ ಬಹಿರಂಗ

- Advertisement -
- Advertisement -

ಉತ್ತರ ಪ್ರದೇಶಕ್ಕೆ ಹಿಂತಿರುಗಿರುವ ವಲಸಿಗ ಕಾರ್ಮಿಕರ ಮೇಲೆ “ಸೋಂಕುನಿವಾರಕ” ಸಿಂಪಡಿಸುತ್ತಿರುವ ಆಘಾತಕಾರಿ ವೀಡಿಯೋವೊಂದು ಹೊರಬಿದ್ದಿದೆ.

ಈ ವೀಡಿಯೊವನ್ನು ಬರೇಲಿ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾಗಿದೆ. ಲಕ್ನೋದಿಂದ ಸುಮಾರು 270 ಕಿ.ಮೀ. ದೂರದಿಂದ ವಲಸೆ  ಹೊರಟವರ ತಂಡಕ್ಕೆ ವಿಶೇಷ ಬಸ್‌ಗಳನ್ನು ವ್ಯವಸ್ಥೆಗೊಳಿಸಿದ ನಂತರ ವಾರಾಂತ್ಯದಲ್ಲಿ ಯುಪಿಗೆ ಮರಳಿದ್ದಾರೆ. ಸೋಂಕುನಿವಾರಕವನ್ನು ಹಾಕುತ್ತಿರುವ ವಿಡಿಯೋದಲ್ಲಿ ಕೆಲವು ಪೊಲೀಸರು ಇದ್ದಾರೆ. ವಿಡಿಯೊ ಕ್ಲಿಪ್‌ನಲ್ಲಿ ಒಬ್ಬ ಮನುಷ್ಯ “ನಿಮ್ಮ ಕಣ್ಣುಗಳನ್ನು ಹಾಗೂ ಮಕ್ಕಳ ಕಣ್ಣುಗಳನ್ನು ಸಹ ಮುಚ್ಚಿ” ಎಂದು ಹೇಳುವುದನ್ನು ಕೇಳಬಹುದು.

ವಿಡಿಯೊ ಕ್ಲಿಪ್ ಜಿಲ್ಲಾಡಳಿತದ ಟೀಕೆಗೆ ಕಾರಣವಾದ ನಂತರ, ಅಧಿಕಾರಿಯೊಬ್ಬರು “ವಲಸಿಗರಿಗೆ ಕ್ಲೋರಿನ್ ಮತ್ತು ನೀರಿನ ಮಿಶ್ರಣವನ್ನು ಸಿಂಪಡಿಸಲಾಗಿತ್ತು … ಯಾವುದೇ ರಾಸಾಯನಿಕ ದ್ರಾವಣವನ್ನು ಬಳಸಲಾಗಿಲ್ಲ. ನಾವು ಅವರ ಕಣ್ಣುಗಳನ್ನು ಮುಚ್ಚಿಡಲು ಕೇಳಿದೆವು” ಎಂದು ಹೇಳಿದ್ದಾರಲ್ಲದೆ, “ಇದರಿಂದಾಗಿ ನಾವು ಅಮಾನವೀಯರೆಂದು ಅರ್ಥವಲ್ಲ … ಎಲ್ಲರನ್ನೂ ಸ್ವಚ್ಛಗೊಳಿಸುವುದು ಮುಖ್ಯವಾಗಿತ್ತು ಮತ್ತು ಹೆಚ್ಚಿನ ಸಂಖ್ಯೆಯ ಜನರು ಹಿಂತಿರುಗಿದ್ದರಿಂದ ಜನರ ಸಂಖ್ಯೆ ಭಾರಿ ವಿಪರೀತವಾಗಿದೆ. ಆದ್ದರಿಂದ ನಮಗೆ ಉತ್ತಮವೆನಿಸಿದ್ದನ್ನು ನಾವು ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಕ್ಲಿಪ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬರೇಲಿ ಜಿಲ್ಲಾಧಿಕಾರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. “ಮುಖ್ಯಮಂತ್ರಿಗಳ ಕಚೇರಿಯ ಮೇಲ್ವಿಚಾರಣೆಯಲ್ಲಿ, ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯ ಸಂಸ್ಥೆ ಮತ್ತು ಅಗ್ನಿಶಾಮಕ ದಳದ ತಂಡವನ್ನು ಬಸ್ಸುಗಳನ್ನು ಸ್ವಚ್ಛಗೊಳಿಸಲು ಕೇಳಲಾಯಿತು … ಆದರೆ ಅವರು ಹೆಚ್ಚಿನ ಜನವಿದ್ದ ಕಾರಣ ಇದನ್ನು ಮಾಡಿದರು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ” ಎಂದು -ಬರೆದಿದ್ದಾರೆ.

ಬರೇಲಿಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಚಂದ್ರ ಮೋಹನ್ ಶರ್ಮಾ “ಸೋಂಕುನಿವಾರಕಗಳಲ್ಲಿ ರಾಸಾಯನಿಕಗಳಿವೆ. ಇದನ್ನು ಮನುಷ್ಯರ ಮೇಲೆ ಬಳಸಬಾರದು. ಕಣ್ಣುಗಳ ಸಂಪರ್ಕಕ್ಕೆ ಬರಬಾರದು. ಈ ವಿಡಿಯೋವನ್ನು ತನಿಖೆ ಮಾಡಲಾಗುತ್ತಿದೆ. ಹಿರಿಯರಿಂದ ವರದಿಯನ್ನು ಕೋರಲಾಗಿದೆ” ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ವಿಡಿಯೊ ಕ್ಲಿಪ್ ಬಗ್ಗೆ ಪ್ರತಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದು, ಈ ಕ್ರಮವನ್ನು “ಅಮಾನವೀಯ” ಎಂದು ಕರೆದಿದ್ದಾರೆ. “ನಾನು ಯುಪಿ ಸರ್ಕಾರಕ್ಕೆ ಮನವಿ ಮಾಡುತ್ತೇನೆ … ಈ ಬಿಕ್ಕಟ್ಟಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡುತ್ತಿದ್ದೇವೆ ಎಂದು ಯುಪಿ ಸರ್ಕಾರ ಹೇಳುತ್ತಿದೆ. ದಯವಿಟ್ಟು ಇಂತಹ ಅಮಾನವೀಯ ಕೃತ್ಯಗಳಲ್ಲಿ ತೊಡಗಬೇಡಿ. ಕಾರ್ಮಿಕರು ಈಗಾಗಲೇ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಅವರ ಮೇಲೆ ರಾಸಾಯನಿಕಗಳನ್ನು ಸಿಂಪಡಿಸಬೇಡಿ. ಇದು ಅವರನ್ನು ರಕ್ಷಿಸುವುದಿಲ್ಲ … ಬದಲಿಗೆ ಇದು ಅವರ ಆರೋಗ್ಯಕ್ಕೆ ಹಾನಿ ಮಾಡುತ್ತದೆ “ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್‌ಗಳಲ್ಲಿ, ಯುಪಿ ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ “ಈ ಕಠಿಣ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ, ದೇಶಾದ್ಯಂತ ಅನ್ಯಾಯದ ಬಗ್ಗೆ ಹಲವಾರು ಚಿತ್ರಗಳು ಹೊರಬಂದಿವೆ … ಆದರೆ ಬರೇಲಿಯಲ್ಲಿ ವಲಸೆ ಬಂದವರ ಮೇಲೆ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸಂಪೂರ್ಣ ಕ್ರೌರ್ಯಕ್ಕೆ ಒಂದು ಉದಾಹರಣೆಯಾಗಿದೆ, ಅನ್ಯಾಯ. ಸರ್ಕಾರ ಕೂಡಲೇ ಗಮನ ಹರಿಸಬೇಕು” ಎಂದು ಹರಿಹಾಯ್ದಿದ್ದಾರೆ.

ಕೊರೊನ ವೈರಸ್ ವಿರುದ್ಧ ಹೋರಾಡಲು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ನಂತರ ದೇಶದ ವಿವಿಧ ಭಾಗಗಳಲ್ಲಿ ಲಕ್ಷಾಂತರ ವಲಸಿಗರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲದೆ ದೇಶದಲ್ಲಿ 1,000 ಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ, ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ.

ಹಲವರು ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ಪ್ರಯಾಣ ಮಾಡುತ್ತಿದ್ದಾರೆ.  ನಿನ್ನೆ ದೆಹಲಿಯಿಂದ 200 ಕಿ.ಮೀ ನಡೆದು 38 ವರ್ಷದ ಯುವಕ ಯುಪಿ ಹೆದ್ದಾರಿಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...