Homeಮುಖಪುಟಲಾಕ್‌ಡೌನ್‌ನಿಂದಾಗಿ 12 ಸಾವಿರ ಕೋಟಿ ನಷ್ಟ: ನೌಕರರ ಸಂಬಳಕ್ಕೆ ಕತ್ತರಿ ಹಾಕಿದ ತೆಲಂಗಾಣ ಸರ್ಕಾರ

ಲಾಕ್‌ಡೌನ್‌ನಿಂದಾಗಿ 12 ಸಾವಿರ ಕೋಟಿ ನಷ್ಟ: ನೌಕರರ ಸಂಬಳಕ್ಕೆ ಕತ್ತರಿ ಹಾಕಿದ ತೆಲಂಗಾಣ ಸರ್ಕಾರ

- Advertisement -
- Advertisement -

ಮೊದಲೇ ಹಳ್ಳ ಹಿಡಿದಿದ್ದ ದೇಶದ ಆರ್ಥಿಕತೆಯು ಕೊರೊನಾ ಮುನ್ನೆಚ್ಚರಿಕೆಯ ಕಾರಣಕ್ಕಾಗಿ ಘೋಷಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಪಾತಾಳ ತಲುಪಿದೆ. ಬಡವರು ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ. ಈ ನಡುವೆ ಸರ್ಕಾರಕ್ಕಾದ ನಷ್ಟ ತುಂಬಿಕೊಳ್ಳಲು ತೆಲಂಗಾಣ ಸರ್ಕಾರವು ತಮ್ಮ ನೌಕರರ ಸಂಬಳಕ್ಕೆ ಕತ್ತರಿ ಹಾಕುವ  ಕೆಲಸಕ್ಕೆ ಮುಂದಾಗಿದೆ.

ಲಾಕ್‌ಡೌನ್‌ನಿಂದಾಗಿ ಒಂದು ವಾರದಲ್ಲಿ 12 ಸಾವಿರ ಕೋಟಿ ನಷ್ಟವಾಗಿದೆ ಎಂದು ಲೆಕ್ಕ ಹಾಕಿರುವ ತೆಲಂಗಾಣ ಸರ್ಕಾರವೂ ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಶಾಸಕರಿಂದ ಆರಂಭವಾಗಿ ಗುತ್ತಿಗೆ ನೌಕರರ ಸಂಬಳದಲ್ಲಿ ಕಡಿತ ಮಾಡಲು ನಿರ್ಧರಿಸಿದೆ.

ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಸಂಬಳದ ಶೇ.75 ಹಣ ಕಳೆದುಕೊಂಡರೆ, ಐಎಎಸ್‌, ಐಪಿಎಸ್‌ ಮತ್ತು ಐಎಫ್‌ಎಸ್‌ ಅಧಿಕಾರಿಗಳು ಶೇ.60, ಸರ್ಕಾರಿ ನೌಕರರು ಶೇ.50 ಮತ್ತು ಡಿ ದರ್ಜೆ ಮತ್ತು ಗುತ್ತಿಗೆ ನೌಕರರ ಶೇ. 10 ರಷ್ಟು ವೇತನವನ್ನು ಕಡಿತ ಗೊಳಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸಂಬಳ ಕಟ್‌ ಮಾಡುವ ಕ್ರಮವು ಮಾರ್ಚ್‌ ತಿಂಗಳ ಸಂಬಳದಿಂದಲೇ ಜಾರಿಯಾಗಲಿದ್ದು ಸರ್ಕಾರದ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಈ ರೀತಿ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಿಸಲು ನೌಕರರ ಸಂಬಳ ಕತ್ತರಿಸುವ ಕ್ರಮಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾದರೂ ಕೂಡ ಬೇರೆ ದಾರಿ ಇಲ್ಲ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಹೇಳಿದ್ದಾರೆ.

ಕೊರೊನಾ ಸೋಂಕಿಗೆ ಇದುವರೆಗೂ ತೆಲಂಗಾನದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ 1251 ಸೋಂಕಿತ ಪ್ರಕರಣಗಳು ದಾಖಲಾಗಿದ್ದು 32 ಮಂದಿ ಸಾವನಪ್ಪಿದ್ದರೆ 101 ಜನ ಗುಣಮುಖರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...