Homeಮುಖಪುಟಕಾಸರಗೋಡಿನ ತೀವ್ರ ಅನಾರೋಗ್ಯ ಪೀಡಿತ ರೋಗಿಗಳಿಗೂ ರಾಜ್ಯಕ್ಕೆ ಪ್ರವೇಶವಿಲ್ಲ: ಕರ್ನಾಟಕ ಸರ್ಕಾರ ಸ್ಪಷ್ಟನೆ

ಕಾಸರಗೋಡಿನ ತೀವ್ರ ಅನಾರೋಗ್ಯ ಪೀಡಿತ ರೋಗಿಗಳಿಗೂ ರಾಜ್ಯಕ್ಕೆ ಪ್ರವೇಶವಿಲ್ಲ: ಕರ್ನಾಟಕ ಸರ್ಕಾರ ಸ್ಪಷ್ಟನೆ

- Advertisement -
- Advertisement -

ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಧ್ಯೆ ಕಾಸರಗೋಡಿನಿಂದ ತೀವ್ರ ಅನಾರೋಗ್ಯ ಪೀಡಿತ ರೋಗಿಗಳಿಗೆ ಅಂತರರಾಜ್ಯ ಗಡಿಯನ್ನು ತೆರೆಯುವುದಿಲ್ಲ ಎಂದು ಕರ್ನಾಟಕ ಸರ್ಕಾರ ಇಂದು ಸ್ಪಷ್ಟಪಡಿಸಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯ ನಡೆಸಿದ ವಿಚಾರಣೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಕೇರಳ ಹೈಕೋರ್ಟ್‌ಗೆ ಈ ವಿಷಯವನ್ನು ತಿಳಿಸಿದೆ. ಕಾಸರಗೋಡಿನಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿವೆ. ಮಂಗಳೂರು ಆಸ್ಪತ್ರೆಗಳನ್ನು ಕೊರೊನ ವೈರಸ್ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಿರುವುದರಿಂದ ಜನ ಇಲ್ಲಿಗೆ ಕರೆ ತರಲು ಬಯಸಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಲಾಕ್‌ಡೌನ್ ಸಮಯದಲ್ಲಿ ವಯನಾಡ್‌ನಿಂದ ಕರ್ನಾಟಕದವರೆಗಿನ ಎರಡು ಅಂತರರಾಜ್ಯ ರಸ್ತೆಗಳು – ಸುಲ್ತಾನ್ ಬತ್ತೇರಿ-ಗುಂಡ್ಲು ಪೇಟೆ ರಸ್ತೆ, ಮನಥವಾಡಿ-ಸಿರ್ಗೂರ್-ಮೈಸೂರು ರಸ್ತೆ – ತೆರೆದಿರುತ್ತದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಇರಿಟ್ಟಿ-ಕೊಡಗು-ಮೈಸೂರು ರಸ್ತೆಯನ್ನು ತೆರೆಯುವಂತೆ ಕಣ್ಣೂರು ಜಿಲ್ಲಾಧಿಕಾರಿ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಒಪ್ಪಿಗೆ ಸೂಚಿಸಿದರೂ, ಪ್ರಸ್ತುತ ಸನ್ನಿವೇಶದಲ್ಲಿ ಕಾಸರಗೋಡು-ಮಂಗಳೂರು ರಸ್ತೆಯನ್ನು ತೆರೆಯಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.


ಇದನ್ನೂ ಓದಿ: ಮಂಗಳೂರಿನ ಆಸ್ಪತ್ರೆಗೆ ಬರದಂತೆ ಕೇರಳಿಗರಿಗೆ ತಡೆ: ಮತ್ತೆ ಮೂರು ಸಾವು


ಈ ಮಧ್ಯೆ, ತೀವ್ರ ಅಸ್ವಸ್ಥ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವ ಮಂಗಳೂರಿನ ಎರಡು ಆಸ್ಪತ್ರೆಗಳ ಹೆಸರನ್ನು ನೀಡುವಂತೆ ಕೇರಳ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇರಳದ ಗಡಿಯನ್ನು ಕರ್ನಾಟಕ ಸರ್ಕಾರವು ನಿರ್ಬಂಧಿಸಿದ ಬಗ್ಗೆ ಕೇರಳ ಹೈಕೋರ್ಟ್ ಸೋಮವಾರ ಕರ್ನಾಟಕದ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯಗಳನ್ನು ಕೋರಿತ್ತು.

ರಸ್ತೆಗಳನ್ನು ತೆರೆಯಲು ನಿರ್ದೇಶನ ಕೋರಿ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಪರಿಗಣಿಸಿ, ನ್ಯಾಯಮೂರ್ತಿಗಳಾದ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಶಾಜಿ ಪಿ ಚಾಲಿ ಅವರನ್ನೊಳಗೊಂಡ ನ್ಯಾಯಪೀಠವು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಳು ಕರ್ನಾಟಕದ ಅಡ್ವೊಕೇಟ್ ಜನರಲ್ಗೆ ಮನವಿ ಮಾಡಿತ್ತು. ಅಂತರರಾಜ್ಯ ರಸ್ತೆಗಳಲ್ಲಿ ತಡೆಗಳನ್ನು ನಿರ್ಮಿಸುವ ದಿಗ್ಬಂಧನಗಳು ಜನರ ಬದುಕಿನ ಹಕ್ಕಿನ ಮೇಲೆ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯ ಮೌಖಿಕವಾಗಿ ಹೇಳಿದೆ.

ಕಾಸರಗೋಡಿನ ಗಡಿಯಲ್ಲಿರುವ ಮಂಗಳೂರು ನಗರದ ಆಸ್ಪತ್ರೆಗಳಲ್ಲಿ ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳು ಮತ್ತು ತುರ್ತು ಚಿಕಿತ್ಸೆ ಪಡೆಯುವ ಜನರ ಸಂಚಾರವನ್ನು ತಡೆಯಲು ಕರ್ನಾಟಕ ಸರ್ಕಾರ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಿತ್ತು. ಇದರಿಂದಾಗಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದ ಐದು ರೋಗಿಗಳು ಇದುವರೆಗೆ ಸಾವಿಗೀಡಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...