Homeಮುಖಪುಟವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ವಲಸಿಗ ಕಾರ್ಮಿಕರಿಗೆ ಧೈರ್ಯ ನೀಡಿ, ಭಜನೆ, ಕೀರ್ತನೆ, ನಮಾಜ್ ಮಾಡಲಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಕೊರೊನ ವೈರಸ್ ಲಾಕ್‌ಡೌನ್ ಮಧ್ಯೆ ವಲಸಿಗರ ಸುದೀರ್ಘ ಪ್ರಯಾಣವನ್ನು ನಿಲ್ಲಿಸಿ ಆಶ್ರಯಕ್ಕೆ ಕಳುಹಿಸಲಾಗಿದ್ದು, ಎಲ್ಲಾ ಧರ್ಮಗಳ ಮುಖಂಡರಿಂದ ಆಹಾರ, ವೈದ್ಯಕೀಯ ನೆರವು ಮತ್ತು ಸಮಾಲೋಚನೆ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ತಿಳಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್‌ಡೌನ್ ಕಾರಣ ಹಠಾತ್ತನೆ ಉದ್ಯೋಗ ಅಥವಾ ಮನೆಗಳಿಲ್ಲದೆ ಉಳಿದುಕೊಂಡ ನಂತರ ವಲಸಿಗರಲ್ಲಿ ಅವರ ಭವಿಷ್ಯದ ಬಗ್ಗೆ ಭಯವನ್ನು ಶಾಂತಗೊಳಿಸುವ ಬಗ್ಗೆಯೂ ನ್ಯಾಯಾಲಯವು ಮಾತನಾಡಿದೆ.


ಇದನ್ನೂ ಓದಿ: ಬಂಧನದಲ್ಲಿ ಕಣ್ಣೀರಿಡುತ್ತಿರುವ ವಲಸೆ ಕಾರ್ಮಿಕರು: ಪ್ರಶಾಂತ್ ಕಿಶೋರ್ ವಿಡಿಯೊ ಬಿಡುಗಡೆ


“ಭಯವೂ ವೈರಸ್‌ಗಿಂತ ಹೆಚ್ಚಿನ ಜೀವಗಳನ್ನು ಕೊಲ್ಲುತ್ತದೆ. ಭಜನೆ, ಕೀರ್ತನೆ, ನಮಾಜ್ ಅಥವಾ ಯಾವುದನ್ನಾದರೂ ಮಾಡಬಹುದು ಆದರೆ ನೀವು ಜನರಿಗೆ ಬಲ ನೀಡಬೇಕು” ಎಂದು ನ್ಯಾಯಾಲಯ ಹೇಳಿದೆಯಲ್ಲದೆ, “ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಸಮುದಾಯದ ಮುಖಂಡರು ಪರಿಹಾರ ಶಿಬಿರಗಳಿಗೆ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಿ ಮತ್ತು ಭೀತಿಯನ್ನು ತಡೆಯಿರಿ” ಎಂದು ತಿಳಿಸಿದೆ.

“24 ಗಂಟೆಗಳ ಒಳಗೆ ನಾವು ತರಬೇತಿ ಪಡೆದ ಸಲಹೆಗಾರರನ್ನು ಮತ್ತು ಧಾರ್ಮಿಕ ಮುಖಂಡರನ್ನು ಸಜ್ಜುಗೊಳಿಸುತ್ತೇವೆ ಎಂದು ನಾನು ಇಲ್ಲಿ ಹೇಳಿಕೆ ನೀಡುತ್ತಿದ್ದೇನೆ. ಶಾಂತವಾಗಿರಲು ಸಲಹೆ ನೀಡುವಂತೆ ನಾವು ಧಾರ್ಮಿಕ ಮುಖಂಡರು, ಮೌಲ್ವಿಗಳು, ಸಾಧುಗಳನ್ನು ಸಜ್ಜುಗೊಳಿಸುತ್ತೇವೆ” ಎಂದು ಕೇದ್ರದ ಪರವಾಗಿ ಸಾಲಿಸಿಟರ್ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

“ರಸ್ತೆಗಳಲ್ಲಿ ವಲಸೆ ಕಾರ್ಮಿಕರಿಲ್ಲ ಇಂದು ಬೆಳಿಗ್ಗೆ 11 ಗಂಟೆಯವರೆಗೆ, ಎಲ್ಲರನ್ನು ಆಶ್ರಯದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದರು.

ಸೋಂಕಿನ ಅಪಾಯದಿಂದ, ಎಲ್ಲಾ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಿದ ನಂತರ ವಲಸಿಗರು ತಮ್ಮ ತಾಯ್ನಾಡಿನ ಕಡೆಗೆ ನಡೆಯಲು ಪ್ರಾರಂಭಿಸಿದರು. ದೀರ್ಘ ಪ್ರಯಾಣದಲ್ಲಿ ಅವರ ನೋವುಗಳ ಬಗ್ಗೆ ಹೃದಯ ವಿದ್ರಾವಕ ಚಿತ್ರಣಗಳು ಹೊರಹೊಮ್ಮಿದೆಯಲ್ಲದೆ, ಇದರಿಂದಾಗಿ ಇಲ್ಲಿಯವರೆಗೆ ಕನಿಷ್ಟ 22 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ ಘೋಷಿದಂದಿನಿಂದ 22 ವಲಸೆ ಕಾರ್ಮಿಕರ ಸಾವು


“ಭಾರತವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ. ಇತರ ಹಲವು ದೇಶಗಳು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ, ಭಾರತದಲ್ಲಿ ವೈರಸ್ ಹರಡುವಿಕೆಯು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಸರಿಯಾದ ಮಾಹಿತಿಗಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸಲು ಹಾಗೂ ಫೇಸ್ಬುಕ್, ಟ್ವಿಟರ್, ಟಿಕ್ ಟಾಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ತಪ್ಪು ಮಾಹಿತಿ ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಿ ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಹೇಳಿದರು.

ಭಾರತದಲ್ಲಿ ಸುಮಾರು 1,200 ಕೊರೊನ ವೈರಸ್ ರೋಗಿಗಳಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...