Homeಮುಖಪುಟಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಮೂರನೇ ಒಂದು ಭಾಗದಷ್ಟು ವಲಸೆ ಕಾರ್ಮಿಕರು ಕೊರೊನಾ ಸೋಂಕಿಗೆ ಒಳಗಾಗಬಹುದು: ಸುಪ್ರೀಂಗೆ ಕೇಂದ್ರದ ಉತ್ತರ

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

- Advertisement -
- Advertisement -

ಲಾಕ್‌ಡೌನ್‌ ಕಾರಣದಿಂದಾಗಿ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ತೆರಳಿರುವ 10 ಜನ ವಲಸೆ ಕಾರ್ಮಿಕರಲ್ಲಿ ಮೂವರಿಗೆ ಕೊರೊನಾ ವೈರಸ್ ಕಾಯಿಲೆ ಹರಡುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಎರಡು ಸಾರ್ವಜನಿಕ ಹಿತಾಸಕ್ತಿ ದಾವೆಗಳ (ಪಿಐಎಲ್) ವಿಚಾರಣೆಯಲ್ಲಿ ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಉತ್ತರಿಸಿದ್ದು, ಸುಮಾರು 4.14 ಕೋಟಿ ಜನರು ಕೆಲಸಕ್ಕಾಗಿ ವಲಸೆ ಬಂದಿದ್ದಾರೆ. ಆದರೆ ಕೊರೊನಾವೈರಸ್ ಲಾಕ್‌ಡೌನ್‌  ಕಾರಣಕ್ಕಾಗಿ ಹಿಮ್ಮುಖ ವಲಸೆ ನಡೆಯುತ್ತಿದೆ ಎಂದಿದ್ದಾರೆ.

ಆಶ್ರಯ ಮನೆಗಳಲ್ಲಿ ಇರಿಸಲಾಗಿರುವ ವಲಸೆ ಕಾರ್ಮಿಕರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶನ ನೀಡಿತು. ವಲಸಿಗರ ಭೀತಿಯನ್ನು ಹೋಗಲಾಡಿಸಲು ಸಹಾಯ ಮಾಡಲು ಎಲ್ಲಾ ಧರ್ಮಗಳ ತರಬೇತಿ ಪಡೆದ ಸಲಹೆಗಾರರು ಮತ್ತು ಧಾರ್ಮಿಕ ಮುಖಂಡರ ಸಹಾಯವನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಸೂಚಿಸಿದೆ.

“ಭೀತಿಯು ವೈರಸ್‌ಗಿಂತ ಹೆಚ್ಚಿನ ಜನರನ್ನು ನಾಶಮಾಡುತ್ತದೆ ಎಂದು ನಾವು ನಿಮಗೆ ತಿಳಿಸಲು ಬಯಸುತ್ತೇವೆ. ನಿಮಗೆ ಸಲಹೆಗಾರರ ​​ಅಗತ್ಯವಿದೆ” ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ನ್ಯಾಯಪೀಠವು ಹೇಳಿದೆ. ಅದಕ್ಕಾಗಿ ನೀವು ’ಭಜನೆ, ಕೀರ್ತನೆ ನಮಾಜ್’ ಅಥವಾ ಯಾವುದನ್ನಾದರೂ ಮಾಡಿಸುವ ಮೂಲಕ ಜನರಿಗೆ ಬಲವನ್ನು ನೀಡಬೇಕು ಎಂದು ಹೇಳಿದರು.

ಭೀತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸಲು ಕೊರೊನಾದ ನೈಜ-ಸಮಯದ ಮಾಹಿತಿಯನ್ನು ಪ್ರಸಾರ ಮಾಡಲು 24 ಗಂಟೆಗಳ ಒಳಗೆ ಪೋರ್ಟಲ್ ಸ್ಥಾಪಿಸಲು ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಕೊರೊನ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ವಿಧಿಸಿದ ನಂತರ ಅಸಹಾಯಕರಾಗಿ ಉಳಿದಿರುವ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಸಮಯದಲ್ಲಿ ಹಳ್ಳಿಗಳಲ್ಲಿ ವೈರಸ್ ಹರಡುವುದರಿಂದ ಜನರ ವಲಸೆಯನ್ನು ಈ ಸಮಯದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.

“ನೀವು ವಲಸೆ ನಿಲ್ಲಿಸಿದ ಎಲ್ಲರನ್ನು ಆಹಾರ, ಆಶ್ರಯ, ಪೋಷಣೆ ಮತ್ತು ವೈದ್ಯಕೀಯ ನೆರವಿನ ವಿಷಯದಲ್ಲಿ ನೋಡಿಕೊಳ್ಳುವುದನ್ನು ಭರವಸೆ ನೀಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಪಿಐಎಲ್‌ಗಳ ಮೇಲಿನ ವಿಚಾರಣೆಯನ್ನು ಏಪ್ರಿಲ್ 7 ಕ್ಕೆ ಮುಂದೂಡಿದ ನ್ಯಾಯಪೀಠ, ವಲಸಿಗರ ಸಮಸ್ಯೆಯನ್ನು ತೆಗೆದುಕೊಳ್ಳದಂತೆ ಹೈಕೋರ್ಟ್‌ಗಳನ್ನು ತಡೆಯಲು ನಿರಾಕರಿಸಿದೆ. ಅವರು ಈ ಸಮಸ್ಯೆಯನ್ನು ಹೆಚ್ಚು ನಿಕಟವಾಗಿ ಮೇಲ್ವಿಚಾರಣೆ ಮಾಡಬಹುದು ಎಂದು ಕೋರ್ಟ್ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ದೇಶಾದ್ಯಂತ 21,000 ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿ 6.6 ಲಕ್ಷಕ್ಕೂ ಹೆಚ್ಚು ನಿರ್ಗತಿಕರು ಮತ್ತು ಕೋವಿಡ್ -19 ಲಾಕ್‌ಡೌನ್ ಕಾರಣದಿಂದಾಗಿ ಸಿಕ್ಕಿಕೊಂಡವರಿಗೆ ಆಶ್ರಯ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...