Homeಕರ್ನಾಟಕಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಮೋದಿ ಕನಸಿನ ‘ಏಷ್ಯಾದ ಅತಿದೊಡ್ಡ ಫುಡ್‌ ಪಾರ್ಕ್‌’

- Advertisement -
- Advertisement -

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಏಷ್ಯಾದ ಅತಿದೊಡ್ಡ ಫುಡ್ ಪಾರ್ಕ್ ರೈತರ ಉಪಯೋಗಕ್ಕೆ ಬರುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಕನಸಿನ ಫುಡ್ ಪಾರ್ಕ್ ನಿರ್ಮಾಣವಾಗಿ ಆರು ವರ್ಷ ಕಳೆದರೂ ರೈತರು ಬೆಳೆದ ಹಣ್ಣು ಹಂಪಲುಗಳನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ಯಾವ ಚಟುವಟಿಕೆಗಳು ನಡೆದ ಸೂಚನೆಗಳೇ ಸಿಕ್ಕಿಲ್ಲ. ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಸಂಸ್ಥೆ ರೈತರ ನೆರವಿಗೆ ಧಾವಿಸುವಂತಹ ಕೆಲಸ ಮಾಡಬೇಕಿತ್ತು. ಇದು ಆಗಿಲ್ಲ ಜೊತೆಗೆ ಫುಡ್ ಪಾರ್ಕ್ ಉದ್ದೇಶವೂ ಈಡೇರಿಲ್ಲ.

ರಾಜ್ಯದ ಅರ್ಧ ಭಾಗದಷ್ಟು ಜಿಲ್ಲೆಗಳ ರೈತರು ಟಮೋಟೊ, ಸಪೋಟೊ, ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ ಮತ್ತು ತರಕಾರಿಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂಗ್ರಹಿಸಿಡುವ ವ್ಯವಸ್ಥೆ ಮಾಡುವುದಾಗಿ ಪ್ರಧಾನಿ ಮೋದಿ 2014ರಲ್ಲಿ ಘೋಷಿಸಿದ್ದರು. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ,  ಬಳ್ಳಾರಿ, ಶಿವಮೊಗ್ಗ ಹೀಗೆ 16 ಜಿಲ್ಲೆಗಳ ರೈತರಿಗೆ ಅನುಕೂಲ ಆಗಬೇಕಿತ್ತು. ಸಾವಿರಾರು ಟನ್ ಹಣ್ಣು ಹಂಪಲು ಮತ್ತು ತರಕಾರಿಯಲ್ಲಿ ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟು ಒಳ್ಳೆಯ ಬೆಲೆ ಸಿಕ್ಕಾಗ ರೈತರು ಮಾರಾಟ ಮಾಡಲು ಅವಕಾಶ ಕಲ್ಪಿಸುವಂತಹ ಕೆಲಸ ಮಾಡಬೇಕಿತ್ತು. ಆದರೆ ಒಂದು ಟನ್ ಹಣ್ಣನ್ನು ಕೋಲ್ಡ್ ಸ್ಟೋರ್‌ನಲ್ಲಿಟ್ಟ ಉದಾಹರಣೆಯೇ ಇಲ್ಲ.

ಬಗೆಬಗೆಯ ಸೊಪ್ಪು, ಬದನೆ, ಮೂಲಂಗಿ, ಈರೇಕಾಯಿ, ಬೆಂಡೆ, ಟಮೋಟೊ, ಕ್ಯಾರೆಟ್, ಗೋರಿಕಾಯಿ, ತೊಂಡೆಕಾಯಿ ಸೇರಿದಂತೆ ತರಿಕಾರಿಗಳನ್ನು ಇಲ್ಲಿ ಯಥೇಚ್ಚವಾಗಿ ಬೆಳೆಯಲಾಗುತ್ತದೆ. ಕೊರೊನ ವೈರಸ್ ಹರಡಿರುವ ಸಂದರ್ಭದಲ್ಲಿ ಇವುಗಳನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿಟ್ಟಿದ್ದರೆ ರೈತರಿಗೂ ಲಾಭವಾಗುತ್ತಿತ್ತು. ತಮಗೆ ಬೇಕಾದಾಗ ಅವುಗಳನ್ನು ಮಾರಿಕೊಳ್ಳಬಹುದಿತ್ತು. ಆದರೆ ಕೊರೊನ ಹಿನ್ನೆಲೆಯಲ್ಲಿ ಭಾರತ ಲಾಕ್‌ಡೌನ್ ಆದ ಮೇಲೆ ರೈತರು ಬೆಳೆದ ಎಲ್ಲಾ ಅಲ್ಪಾವಧಿ ಬೆಳೆಯು ಹಳ್ಳಿಗಳಲ್ಲೇ ಕೊಳೆಯುವಂತಾಗಿದೆ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಲು ಆಗುತ್ತಿಲ್ಲ. ಮಾರಲೂ ಅವಕಾಶ ಸಿಗುತ್ತಿಲ್ಲ. ಹಾಗಾಗಿ ಬಡ ರೈತರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಜಿಲ್ಲೆಯ ಪಾವಗಡ, ಶಿರಾ, ಮಧುಗಿರಿ ತಾಲೂಕುಗಳಲ್ಲಿ ಹೆಚ್ಚಾಗಿ ಹುಣಸೇಹಣ್ಣು ಬೆಳೆಯುತ್ತಿದ್ದು ಲಾಕ್ ಡೌನ್ ಆಗಿರುವುದರಿಂದ ಚಳ್ಳಕೆರೆ ಮತ್ತು ಹಿಂದೂಪುರ ಮಾರುಕಟ್ಟೆಗಳು ಬಂದ್ ಆಗಿವೆ. ಈಗ ಹುಣಸೇಹಣ್ಣು ಮಾರುಕಟ್ಟೆಗೆ ಹೆಚ್ಚು ಬರುವ ಕಾಲ. ಇಂತಹ ಸನ್ನಿವೇಶದಲ್ಲಿ ಮಾರುಕಟ್ಟೆ ಇಲ್ಲದೆ ಹುಣಸೇಹಣ್ಣು ಒಣಗಿ ಬೆಂಡಾಗುತ್ತಿದೆ. ಹುಣಸೇಹಣ್ಣನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವ ವ್ಯವಸ್ಥೆ ಮಾಡಿದ್ದರೆ ರೈತರು ನಿಧಾನವಾಗಿ ಮಾರಾಟ ಮಾಡಿಕೊಳ್ಳುತ್ತಿದ್ದರು. ಆದರೆ ವಸಂತನರಸಾಪುರದ ಫುಡ್ ಪಾರ್ಕ್‌‌ನಲ್ಲಿಯಾಗಲೀ ಹಿಂದೂಪುರ ಮತ್ತು ಚಳ್ಳಕೆರೆಯ ಹುಣಸೇಹಣ್ಣು ಮಾರುಕಟ್ಟೆಯಲ್ಲಾಗಲೀ ಕೋಲ್ಡ್ ಸ್ಟೋರೇಜ್‌ನಲ್ಲಿ ಇಡುವುದಕ್ಕೆ ಅವಕಾಶವಿಲ್ಲ. ಇದರಿಂದಾಗಿ ಹುಣಸೇಹಣ್ಣು ಬೆಳೆದ ರೈತರು ಕೈಕೈ ಹಿಸುಕಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಲಾಕ್ ಡೌನ್ ಇಡೀ ರೈತ ಸಮೂಹವನ್ನು ಆಘಾತಕ್ಕೆ ಒಳಗಾಗುವಂತೆ ಮಾಡಿದೆ. ಅಲ್ಪಾವಧಿ ಮತ್ತು ದೀರ್ಘಾವಧಿ ಎರಡೂ ಬೆಳೆಗಳು ಕೈಗೆ ಬಂದಿರುವ ಹೊತ್ತಿನಲ್ಲಿ ಕೋಲ್ಡ್ ಸ್ಟೋರೇಜ್‌ನಲ್ಲಿ ಸಂಗ್ರಹ ಮಾಡಲು ಅವಕಾಶ ಇಲ್ಲದಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸಾಲ ಮಾಡಿ ಬೆಳೆದಿರುವ ಹಣ್ಣು, ತರಕಾರಿ ಕಣ್ಣಮುಂದೆಯೇ ಒಣಗಿ ಹೋಗುವಂಹತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಂದ ನೇರ ಖರೀದಿ ಮಾಡಿ ಮಾರುಕಟ್ಟೆ ಕಲ್ಪಿಸಬೇಕು ನಗರದ ಜನರಿಗೆ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.


ಇದನ್ನು ಓದಿ: ತುಮಕೂರಿನ ಫುಡ್ ಪಾರ್ಕ್‌ನಲ್ಲಿ ಉದ್ಯೋಗವೂ ಇಲ್ಲ – ಎಚ್ಎಎಲ್ ಹೆಲಿಕಾಪ್ಟರ್ ಹಾರಲೇ ಇಲ್ಲ


ತುಮಕೂರು ಫುಡ್ ಪಾರ್ಕ್‌ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇದ್ದಿದ್ದರೆ ರೈತರಿಗೆ ಹೆಚ್ಚು ಪ್ರಯೋಜನ ಆಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಫುಡ್‌ ಪಾರ್ಕ್ ರೈತರ ನೆರವಿಗೆ ಬರುವಲ್ಲಿ ಸಂಪೂರ್ಣ ವಿಫಲವಾಗಿದೆ. ಯಾವ ಉದ್ದೇಶದಿಂದ ನಿರ್ಮಾಣವಾಗಿತ್ತೋ ಆ ಉದ್ದೇಶ ಈಡೇರಿಲ್ಲ. ನೂರಾರು ಕೋಟಿ ವೆಚ್ಚದ ಫುಡ್ ಪಾರ್ಕ್ ವ್ಯರ್ಥವಾದಂತಾಗಿದೆ. ರೈತರ ಸಹಾಯಕ್ಕಿಲ್ಲದ ಫುಡ್ ಪಾರ್ಕ್ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...