HomeಮುಖಪುಟPPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ - 10 ಅಂಶಗಳು

PPE ಗಳ ಕೊರತೆ: ದೆಹಲಿಯಲ್ಲಿ ಬಿಜೆಪಿ, ಆಪ್‌ ನಡುವೆ ಜಟಾಪಟಿ – 10 ಅಂಶಗಳು

- Advertisement -
- Advertisement -

ಕೊರೊನಾ ಭಾರತದಲ್ಲಿ ವೇಗವಾಗಿ ಹಬ್ಬುತ್ತಿದೆ. ಹಾಗಾಗಿ PPE ಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ದೆಹಲಿಯ ಆಡಳಿತರೂಢ ಆಪ್‌ ಒತ್ತಾಯಿಸಿತ್ತು. ಆದರೆ ಬಿಜೆಪಿಯ ಗೌತಮ್‌ ಗಂಭೀರ್‌ ಆಪ್‌ ಮೇಲೆ ಅಹಂಕಾರ ಬಿಟ್ಟು ಕೆಲಸ ಮಾಡಿ, ಹಣ ಬೇಕಾದರೆ ನಾನು ಕೊಡುತ್ತೇನೆ ಎಂದು ದಾಳಿ ಮಾಡಿದರು. ಅದಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಒಟ್ಟಾರೆ ಪ್ರಕರಣದ 10 ಮುಖ್ಯಾಂಶಗಳು ಇಲ್ಲಿವೆ.

  1. ನಾವು ಪಿಪಿಇ ಕಿಟ್‌ಗಳ ಕೊರತೆಯನ್ನು ಎದುರಿಸುತ್ತಿದ್ದೇವೆ. ನಮ್ಮ ವೈದ್ಯರು ಮತ್ತು ದಾದಿಯರಿಗೆ ಅಗತ್ಯವಾದ ಕಿಟ್‌ಗಳನ್ನು ಪೂರೈಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಆದರೆ ನಾವು ಈವರೆಗೆ ಕೇಂದ್ರ ಸರ್ಕಾರದಿಂದ ಒಂದು ಪಿಪಿಇ ಕಿಟ್ ಕೂಡ ಸ್ವೀಕರಿಸಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಏಪ್ರಿಲ್‌ ನಾಲ್ಕರಂದು ಆರೋಪಿಸಿದ್ದರು.

2. ಅಲ್ಲದೇ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾರವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದ ಪತ್ರದಲ್ಲಿ, “ಕೇಂದ್ರವು 17,000 ಕೋಟಿ ರೂ.ಗಳನ್ನು ರಾಜ್ಯಗಳಿಗೆ ವಿಪತ್ತು ನಿಧಿಯಿಂದ ಬಿಡುಗಡೆ ಮಾಡಿದೆ. ಆದರೆ ದೆಹಲಿಗೆ ಒಂದು ರೂಪಾಯಿ ಕೂಡ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

3. “ದೆಹಲಿಯಲ್ಲಿ ವಾರ್ಷಿಕ 65,000 ಕೋಟಿ ರೂ.ಗಳ ಬಜೆಟ್ ಮಂಡಿಸುವ ಆಪ್‌ ಪಕ್ಷವು 1-2 ಕೋಟಿ ರೂ.ಗಳ ಪಿಪಿಇ ಕಿಟ್‌ಗಳನ್ನು ಖರೀದಿಸಲು ಅಸಮರ್ಥವಾಗಿದೆ ಅಂದರೆ ಅರವಿಂದ್ ಕೇಜ್ರಿವಾಲ್ ಅವರ ಉದ್ದೇಶದ ಏನು” ಎಂದು ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು.

4. ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರಚಾರಕ್ಕಾಗಿ ಟಿವಿಯಲ್ಲಿ ಕುಳಿತರೆ ಪ್ರಯೋಜನವಿಲ್ಲ. ಬದಲು ಪಿಪಿಈಗಳನ್ನು ಖರೀದಿಸಿದರೆ ಸಾರ್ವಜನಿಕರಿಗೆ ಸ್ವಲ್ಪ ಒಳ್ಳೆಯದು ಸಿಗುತ್ತದೆ. 2 ವಾರಗಳ ಹಿಂದೆ ನಾನು ಪಿಪಿಇ ಕಿಟ್‌ಗಳು ಮತ್ತು ಮುಖವಾಡಗಳಿಗಾಗಿ 50 ಲಕ್ಷ ನೀಡಲು ಪ್ರತಿಜ್ಞೆ ಮಾಡಿದ್ದೇನೆ, ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈಗ ಕೇಂದ್ರವನ್ನು ಕೇಳುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಮೊಸಳೆ ಕಣ್ಣೀರು ಮತ್ತು ಬಲಿಪಶು ಎಂಬ ಎರಡು ಕಾರ್ಡ್ ಗಳನ್ನು ಆಡುತ್ತಿದ್ದಾರೆ ಎಂದು ಗೌತಮ್‌ ಗಂಭೀರ್‌ ಟ್ವೀಟ್‌ ಮಾಡುವ ಮೂಳಕ ಆರೋಪಿಸಿದ್ದಾರೆ.

5. ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪಮುಖ್ಯಮಂತ್ರಿ ಹಣದ ಅಗತ್ಯವಿದೆ ಎಂದು ಹೇಳುತ್ತಾರೆ. ಆದರೆ ಸಂಸದರ ನಿಧಿಯಿಂದ 50 ಲಕ್ಷ ಹಣ ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿದ್ದರೂ ಸಹ ಅದಕ್ಕೆ ಅವರ ಬೃಹತ್ ಅಹಂಕಾರವು ಅಡ್ಡಬರುತ್ತದೆ. ಇನ್ನೂ 50 ಲಕ್ಷ ಹೆಚ್ಚಿಗೆ ಕೊಡಲು ಸಿದ್ದನಿದ್ದೇನೆ. ಇದರಿಂದ ಮುಗ್ಧರು ತೊಂದರೆ ಅನುಭವಿಸುವುದಿಲ್ಲ! “1 ಕೋಟಿ ಹಣವು ಕನಿಷ್ಠ ಹಲವು ದಿನಗಳ ಮುಖವಾಡಗಳು ಮತ್ತು ಪಿಪಿಇ ಕಿಟ್‌ಗಳ ತುರ್ತು ಅಗತ್ಯವನ್ನು ಪರಿಹರಿಸುತ್ತದೆ, ಅವರು ದೆಹಲಿಗೆ ಆದ್ಯತೆ ನೀಡುತ್ತಾರೆಂದು ಭಾವಿಸುತ್ತೇವೆ” ಎಂದು ಗಂಭೀರ್ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

6. “ಗೌತಮ್ ಜಿ, ನಿಮ್ಮ ಕೊಡುಗೆಗಾಗಿ ಧನ್ಯವಾದಗಳು. ಸಮಸ್ಯೆ ಹಣದಲ್ಲ ಆದರೆ ಪಿಪಿಇ ಕಿಟ್‌ಗಳ ಲಭ್ಯತೆಯದ್ದು. ತಕ್ಷಣವೇ ಎಲ್ಲಿಂದಲಾದರೂ ಅವುಗಳನ್ನು ಪಡೆಯಲು ನಮಗೆ ಸಹಾಯ ಮಾಡಿದರೆ ನಾವು ಕೃತಜ್ಞರಾಗಿರುತ್ತೇವೆ. ದೆಹಲಿ ಸರ್ಕಾರ ಅವುಗಳನ್ನು ಖರೀದಿಸುತ್ತದೆ. ಧನ್ಯವಾದಗಳು” ಎಂದು ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಗೌತಮ್‌ ಗಂಭೀರ್‌ರವರಿಗೆ ಉತ್ತರಿಸಿದ್ದಾರೆ.

7. ದೆಹಲಿಯಲ್ಲಿ ಕನಿಷ್ಠ 24 ಆರೋಗ್ಯ ಕಾರ್ಯಕರ್ತರು-ವೈದ್ಯರು, ದಾದಿಯರು, ನೈರ್ಮಲ್ಯ ಸಿಬ್ಬಂದಿಗಳು ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ. ಅವರು ಪೂರ್ಣ-ದೇಹದ ಸೂಟುಗಳು, ಕನ್ನಡಕಗಳು, ಮುಖವಾಡಗಳು, ಕೈಗವಸುಗಳು ಮತ್ತು ಶೂ ಕವರ್‌ಗಳಂತಹ ಸಾಕಷ್ಟು ಪಿಪಿಇಗಳ ಲಭ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ವೈದ್ಯಕೀಯ ಸಲಕರಣೆಗಳು ಸಮಯಕ್ಕೆ ಸರಿಯಾಗಿ ಸಿಕ್ಕಿದ್ದರೆ ಸಮಸ್ಯೆ ಉಲ್ಬಣವಾಗುತ್ತಿರಲಿಲ್ಲ ಎಂದು ದೂರಿದ್ದಾರೆ.

8. ಭಾರತದಲ್ಲಿ ಸೋಂಕಿತರ ಸಂಖ್ಯೆ 4000 ದಾಟಿದ್ದು, ಮೃತಪಟ್ಟವರ ಸಂಖ್ಯೆ 100 ರ ಗಡಿ ದಾಟಿದೆ.

9. ದೆಹಲಿಯು ಅತಿ ಹೆಚ್ಚು ಪ್ರಕರಣಗಳು ಕಂಡುಬಂದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ.

10. ವೈದ್ಯರುಗಳಿಗೆ ಕೊರೊನಾ ಹರಡಲು ಮೋದಿ ಸರ್ಕಾರವೇ ಕಾರಣವಾಗಿದೆ. ಅವರು ವೈದ್ಯಕೀಯ ಸಲಕರಣೆಗಳನ್ನು ಖರೀದಿಸಲು ಮುಂದಾಗದೆ, ಚಪ್ಪಳೆ ತಟ್ಟಲು, ದೀಪ ಹಚ್ಚಲು ಕರೆ ಕೊಡುವಲ್ಲಿ ನಿರತರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...