Homeಫ್ಯಾಕ್ಟ್‌ಚೆಕ್Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

Fact check: ಪೊಲೀಸ್ ವಿರುದ್ಧ ತಿರುಗಿಬಿದ್ದ ಪೂಜಾರಿ: ಹಿಗ್ಗಾಮುಗ್ಗಾ ಹೊಡೆದಿದ್ದು ನಿಜವಲ್ಲ!

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಪೊಲೀಸರಿಂದ ದೌರ್ಜನ್ಯ ನಡೆಯುತ್ತಿರುವ ಹಲವು ವಿಡಿಯೋಗಳು ವೈರಲ್‌ ಆದನಂತರ ಪೊಲೀಸರ ಹೊಡೆಯುವಿಕೆ ನಿಂತಿದೆ. ಆದರೆ ಈಗ ಜನರೇ ವಾಪಸ್‌ ಪೊಲೀಸರಿಗೆ ಹೊಡೆಯುತ್ತಿದ್ದಾರೆ ಎಂಬ ಸಂದೇಶಗಳು ಹರಿದಾಡುತ್ತಿವೆ.

ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರನ್ನು ಖಾವಿ ಧರಿಸಿದ ಪೂಜಾರಿಯೊಬ್ಬರು ಹಿಡಿದಿಟ್ಟುಕೊಂಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಪೂಜಾರಿಯು ಪೋಲೀಸನ್ನು ಉಸಿರುಗಟ್ಟಿಸುವ ರೀತಿಯಲ್ಲಿ ಕುತ್ತಿಗೆಯನ್ನು ಹಿಡಿಯುತ್ತಿರುವುದು ಕಾಣಬಹುದು. ‘ಜಾಗೊ ಇಂಡಿಯಾ’ ಎಂಬ ಫೇಸ್ ಬುಕ್ ಪೇಜ್ ಈ ವಿಡಿಯೊ ಪೋಸ್ಟ್ ಮಾಡಿದೆ. ಈ ಪೋಸ್ಟ್ ಈವರೆಗೆ 18,000 ಕ್ಕೂ ಹೆಚ್ಚು ಶೇರುಗಳಾಗಿದೆ.

Anda bokth, police बाले koमार क्यू रहे हो???

Posted by Jago India on Monday, April 6, 2020

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಈ ವೀಡಿಯೋ ಬಗ್ಗೆ “ಆಲ್ಟ್ ನ್ಯೂಸ್” ಫ್ಯಾಕ್ಟ್ ಚೆಕ್ ನಡೆಸಿದೆ. ಪ್ರಸ್ತುತ ವಿಡಿಯೊ ಮಾರ್ಚ್ 18, 2019 ರಂದು ಯೂಟ್ಯೂಬ್ ಚಾನೆಲಾದ CWE ತನ್ನ ಚಾನೆಲ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೋ ಇದು ಎಂದು ಕಂಡು ಹಿಡಿದಿದೆ. ಕೆಳಗೆ ಇರುವ ವೀಡಿಯೊದಲ್ಲಿ 2:52 ನಿಮಿಷಗಳ ನಂತರ ವೈರಲ್ ಆದ ಚಿತ್ರಣವನ್ನು ನೋಡಬಹುದು.

ವೀಡಿಯೊವನ್ನು ವಿಭಿನ್ನ ಕ್ಯಾಮೆರಾ ಕೋನಗಳಿಂದ ಚಿತ್ರೀಕರಿಸಲಾಗಿರುವುದರಿಂದ, ಇದು ವೃತ್ತಿಪರವಾಗಿ ತಯಾರಿಸಲ್ಪಟ್ಟಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಅಂದರೆ ಅದು ಚಿತ್ರೀಕರಣಕ್ಕಾಗಿ ಮಾಡಿದ ನಟನೆಯಾಗಿದ್ದು ನಿಜವಾಗಿ ಹೊಡೆದುದ್ದಲ್ಲ. ಇದಲ್ಲದೆ, CWE ಚಾನೆಲ್ ನಲ್ಲಿ ಇಂತಹ ಅನೇಕ ಇತರ ವೀಡಿಯೊಗಳನ್ನು ಕಾಣಬಹುದಾಗಿದೆ.

ಈ ವೀಡಿಯೋದಲ್ಲಿರುವ ಪೊಲಿಸ್ ಪಾತ್ರದ ಹೆಸರು “ಸಿಂಘಮ್ ದುಬೆ” ಆಗಿದ್ದು, ನಟನ ಹೆಸರು ಮನೀಶ್ ದುಬೆ ಎಂದಾಗಿದೆ. ಇವರು ತನ್ನ ಫೇಸ್‌ಬುಕ್ ಬಯೋದಲ್ಲಿ ತನ್ನನ್ನು ತಾನು ವೃತ್ತಿಪರ ಕುಸ್ತಿಪಟು ಎಂದು ಗುರುತಿಸಿಕೊಳ್ಳುತ್ತಾರೆ.

CWE ಚಾನೆಲ್ ನ ಮತ್ತೊಂದು ವಿಡಿಯೊವನ್ನು ಅವಿನಾಶ್ ಎಂಬ ಫೇಸ್‌ಬುಕ್ ಅಕೌಂಟಿನಿಂದ ಪೋಸ್ಟ್ ಮಾಡಿ “ಹಿಂದೂಸ್ತಾನಿ ಮಹಿಳೆಯ ಶಕ್ತಿ ನೋಡಿ. ಮುಂಬೈಯಲ್ಲಿ, ಪಾಕಿಸ್ತಾನದ ಮಹಿಳಾ ಫ್ರೀಸ್ಟೈಲ್ ಕುಸ್ತಿಪಟುವೊಬ್ಬಳು ಅಖಾಡಕ್ಕಿಳಿದು, ಭಾರತೀಯ ಮಹಿಳೆಯರಿಗೆ ಅಶ್ಲೀಲವಾಗಿ ಬೈದು ಅಖಾಡಕ್ಕೆ ಇಳಿಯುವಂತೆ ಸವಾಲು ಒಡ್ಡುತ್ತಾಳೆ. ಅವಳ ಸವಾಲನ್ನು ಸಂಧ್ಯಾ ಫಡ್ಕೆ ಎಂಬ ದುರ್ಗಾ ವಾಹಿನಿಯ ಮಹಿಳೆ ಸ್ವೀಕರಿಸಿದಳು” ಎಂದು ಬರೆಯಲಾಗಿದೆ.

एक हिंदुस्तानी औरत की ताकत ?देखीये। मुम्बई मे एक पाकिस्तानी लेडीज फ्रीस्टाइल कुस्तीबाज महिला रिंग मे खडे हो कर भारतीय महिला ओ को गाली देते हुये रिग मे आने के लिये चैलेन्ज करने लगी इसके चैलेन्ज को स्वीकार करते हुये दुर्गा वाहिनी की महिला संन्ध्या फडके नाम की महिला रिंग मे उतर कर आई आगे क्या हुआ इस वीडियो मे आप खुद देखे ?

Posted by Avinash Singh Rajput on Tuesday, January 21, 2020

CWE ಎಂದರೆ ಕಾಂಟಿನೆಂಟಲ್ ವ್ರೆಸ್ಲಿಂಗ್ ಎಂಟರ್ಟೈನ್ಮೆಂಟ್. ಚಾನೆಲ್ ತನ್ನನ್ನು “ಮೊದಲ ಭಾರತೀಯ ಕುಸ್ತಿ ಮನರಂಜನಾ ಅಕಾಡೆಮಿ” ಎಂದು ಕರೆದುಕೊಳ್ಳುತ್ತದೆ. ಈ ಹಿಂದೆಯೂ ಈ ಚಾನೆಲ್ ವಿಡಿಯೋಗಳನ್ನು ಇಟ್ಟುಕೊಂದು ನೈಜ ಘಟನೆಗಳೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...