Homeಮುಖಪುಟಪ್ರಪಂಚದ ನೂರು ಕೋಟಿ ಸ್ಲಂ ನಿವಾಸಿಗಳು ಹಾಗೂ ಕೊರೊನಾ ದಾಳಿ

ಪ್ರಪಂಚದ ನೂರು ಕೋಟಿ ಸ್ಲಂ ನಿವಾಸಿಗಳು ಹಾಗೂ ಕೊರೊನಾ ದಾಳಿ

ಕೊರೋನಾ ಮಹಾಮಾರಿಯ ಆರ್ಥಿಕ ಸಮಸ್ಯೆಗಳು ಕೊಳೆಗೇರಿ ನಿವಾಸಿಗಳನ್ನು ಹೆಚ್ಚು ತೀವ್ರವಾಗಿ ಕಾಡುತ್ತವೆ. ಕೊಳಚೆಗೇರಿಯ ಬಹುಪಾಲು ಜನ ಅನೌಪಚಾರಿಕ ವಲಯಗಳಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಲಾಕ್‌ಡೌನ್ ಸಂದರ್ಭದಲ್ಲಿ ಅವರ ಆರ್ಥಿಕ ಮೂಲವೇ ಇಲ್ಲವಾಗಿಬಿಡುತ್ತದೆ.

- Advertisement -
- Advertisement -

ಕೃಪೆ: ನ್ಯೂ ಯಾರ್ಕ್ ಟೈಮ್ಸ್
ಲೀ ರಿಲೆ, ಇವಾ ರ‍್ಯಾಫೆಲ್ ಮತ್ತು ರಾಬರ್ಟ್ ಸಿಂಡರ್

ಅನುವಾದ: ಶೈಲಜ ಮತ್ತು ವೇಣುಗೋಪಾಲ್

ಕೊರೋನಾ ಮಹಾಮಾರಿಯನ್ನು ಇಡೀ ವಿಶ್ವದಾದ್ಯಂತ ಹರಡಿದವರು ಏರೋಪ್ಲೇನುಗಳಲ್ಲಿ ಮತ್ತು ಖುಷಿಗಾಗಿ ಹಡಗುಗಳಲ್ಲಿ ಪಯಣಿಸಬಲ್ಲ ಸಿರಿವಂತರು. ಆದರೆ ಇಂದು ಕೊರೋನಾ ತೀವ್ರವಾಗಿ ಕಾಡುತ್ತಿರುವುದು ಸ್ಲಂಗಳಲ್ಲಿ ಬದುಕುತ್ತಿರುವ ಜನರನ್ನು. ಅವರೆಲ್ಲಾ ಸಾಮಾಜಿಕವಾಗಿ ಅದೃಷ್ಯವಾಗಿರುವ ಮಂದಿ. ನಾವು ಅವರನ್ನು ಮರೆತೇಬಿಟ್ಟಿದ್ದೇವೆ.

ಕೊಳೇಗೇರಿಗಳಲ್ಲಿ ಸುಮಾರು ಒಂದು ಬಿಲಿಯನ್ ಜನ ವಾಸಿಸುತ್ತಿದ್ದಾರೆ. ವಿಶ್ವ ಸಂಸ್ಥೆಯ ಪ್ರಕಾರ ಕೊಳೇಗೇರಿ ಎಂದರೆ ಶುದ್ಧ ನೀರಿನ ಪೂರೈಕೆ ಇಲ್ಲದ, ನೈರ್ಮಲ್ಯ ವ್ಯವಸ್ಥೆ ಸಮರ್ಪಕವಾಗಿಲ್ಲದ, ವಾಸಿಸಲು ಯೋಗ್ಯವಲ್ಲದ ಮನೆಗಳ ಹಾಗೂ ಸದಾ ಕಿಕ್ಕಿರಿದು ಇಡಿಕಿರಿದಿರುವ, ಸುರಕ್ಷತೆಯಿಲ್ಲದ ವಸತಿ ಪ್ರದೇಶಗಳು.

ಈ ಸೋಂಕು ಖಾಯಿಲೆಗಳು ಕೊಳೆಗೇರಿಗಳಲ್ಲಿ ಬೇಗ ಹರಡುತ್ತವೆ. ಈಗಾಗಲೇ ಭಾರತದ ಮುಂಬೈನ ಧಾರಾವಿ, ಪಾಕಿಸ್ತಾನದ ಕರಾಚಿಯ ಒರಾಂಗಿ ನಗರ, ಮತ್ತು ಮನಿಲಾದ ಪಯತಸ್‌ನಲ್ಲಿ ಕರೋನಾ ಮಾರಿ ಕಾಲಿಟ್ಟಿದೆ. 2014-2016ರಲ್ಲಿ ಪಶ್ಚಿಮ ಆಫ್ರಿಕದಲ್ಲಿ ಎಬೋಲಾ ವೈರಸ್ ದೊಡ್ಡ ಪ್ರಮಾಣದಲ್ಲಿ ಹರಡಿದ್ದೇ ಕೊಳೆಗೇರಿಗಳಿಂದ. ತುಂಬಾ ದಟ್ಟವಾದ ಜನಸಂಖ್ಯೆ ಇರುವ ಲೈಬೀರಿಯಾ, ಗಿನಿ ಮತ್ತು ಸರ‍್ರಾ ಲಿಯೋನಿನ ನಗರಗಳ ಕೊಳೆಗೇರಿಗಳಿಂದ ಎಬೋಲಾ ಪಶ್ಚಿಮ ಆಫ್ರಿಕಾಕ್ಕೆ ಹರಡಿದೆ.

ಮಹಾಮಾರಿ ಪಿಡುಗುಗಳ ಸಂದರ್ಭದಲ್ಲಿ ಕೊಳೆಗೇರಿವಾಸಿಗಳಿಗೆ ಶ್ವಾಸಕೋಶದ ಸೋಂಕುಗಳಾದ ಇನ್‌ಫ್ಲುಯೆನ್‌ಜ಼ಾ ಮತ್ತು ಡೆಂಗ್ಯೂ ಇವು ಬಹು ಬೇಗನೇ ಬರುತ್ತವೆ. 2018ರಲ್ಲಿ ದೆಹಲಿಯ ಸಂಶೋಧಕರು ಒಂದು ವರದಿಯನ್ನು ಪ್ರಕಟಿಸಿದ್ದಾರೆ. ಅವರ ಪ್ರಕಾರ ಲಸಿಕೆಯನ್ನು ವ್ಯಾಪಕವಾಗಿ ಹಾಕಿದ್ದಾಗಲೂ ಮತ್ತು ಸಾಮಾಜಿಕ ದೂರವನ್ನು (ಮನೆಯಲ್ಲಿಯೇ ಇರುವುದು, ಶಾಲೆಗಳನ್ನು ಮುಚ್ಚುವುದು ಮತ್ತು ಸೋಂಕಿತರನ್ನು ಪ್ರತ್ಯೇಕವಾಗಿ ಇಡುವುದು) ಕಾಯ್ದುಕೊಂಡಿದ್ದಾಗಲೂ ಕೊಳೆಗೇರಿಯಲ್ಲಿ ವಾಸಿಸುವ ಸಮುದಾಯಗಳಿಗೆ ಇನ್‌ಫ್ಲುಯೆನ್‌ಜ಼ಾ ಸೋಂಕು ತಗುಲುವ ಸಾಧ್ಯತೆಗಳು ತುಂಬಾ ಹೆಚ್ಚು. ಬೇರೆ ಸಮುದಾಯಗಳಿಗೆ ಹೋಲಿಸಿದರೆ ಕೊಳೆಗೇರಿಯ ನಿವಾಸಿಗಳಿಗೆ ಸೋಂಕು ಹರಡುವ ಪ್ರಮಾಣ ಶೇಕಡ 44ರಷ್ಟು ಹೆಚ್ಚು.

ಕೊಳೇಗೇರಿಗಳಲ್ಲಿ ಸೋಂಕು ಬೇಗ ಹರಡುವುದಕ್ಕೆ ಅತಿಯಾದ ಜನಸಂದಣಿ ಒಂದು ಮುಖ್ಯ ಕಾರಣ. ಬೇರೆ ಪ್ರದೇಶಗಳಿಗಿಂತ ದೆಹಲಿಯ ಕೊಳೆಗೇರಿಗಳಲ್ಲಿ ಜನಸಂಖ್ಯೆಯ ಒತ್ತಡ ಶೇಕಡ 10ರಿಂದ 100ರಷ್ಟು ಹೆಚ್ಚಿಗೆ ಇದೆ. ನ್ಯೂ ಯಾರ್ಕ್ ನಗರಕ್ಕೆ ಹೋಲಿಸಿದರೆ ಶೇಕಡ 30ರಷ್ಟು ಹೆಚ್ಚಿಗೆ ಇದೆ. ಜೊತೆಗೆ ಕೊಳೆಗೇರಿಗಳಲ್ಲಿ ಇರುವ ಮಕ್ಕಳಲ್ಲಿ ಅಪೌಷ್ಠಿಕತೆ ತೀವ್ರವಾಗಿದೆ ಮತ್ತು ವಯಸ್ಕರಲ್ಲಿ ತೀವ್ರಸ್ವರೂಪದ ಆರೋಗ್ಯದ ಸಮಸ್ಯೆಗಳಿವೆ. ಹಾಗಾಗಿ ಅವರಿಗೆ ಸೋಂಕು ತಗುಲುವ ಸಾಧ್ಯತೆಗಳು ಉಳಿದೆಲ್ಲರಿಗಿಂತ ಹೆಚ್ಚು.

ಅಲ್ಲಿಯ ಇನ್ನೊಂದು ಸಮಸ್ಯೆ ನೈರ್ಮಲ್ಯ ವ್ಯವಸ್ಥೆಯ ಕೊರತೆ. ಕೊಳೆಗೇರಿಗಳಲ್ಲಿ ಶುದ್ಧವಾದ ಸಾರ್ವಜನಿಕ ಶೌಚಾಲಯಗಳಿಲ್ಲ. ಆದುದರಿಂದ ಮಲದ ಮೂಲಕ ಕೊರೋನಾ ಮಹಾಮಾರಿಯ ಸೋಂಕು ಹರಡುತ್ತದೆ. ಶುದ್ಧವಾದ ನೀರಂತೂ ಅಪರೂಪ. ಅದು ಆ ಪ್ರದೇಶಗಳ ಮತ್ತೊಂದು ದೊಡ್ಡ ಸಮಸ್ಯೆ. ಈಗ ಮುನ್ನೆಚ್ಚರಿಕೆಯ ಕ್ರಮವಾಗಿ ಮನೆಯಲ್ಲಿಯೇ ಇರುವುದರಿಂದ ನೀರಿನ ಸಮಸ್ಯೆ ಇನ್ನೂ ತೀವ್ರವಾಗಿದೆ.

ಇನ್ನು ಅಲ್ಲಿಯ ಮನೆಗಳಿಗೆ ಸೂಕ್ತವಾದ ಗಾಳಿ ಬೆಳಕಿನ ವ್ಯವಸ್ಥೆ ಇಲ್ಲ. ಬಹುಪಾಲು ಮನೆಗಳಿಗೆ ಕಿಟಕಿಗಳು ಇರುವುದಿಲ್ಲ. ಸೌದೆ, ಬೆರಣಿ ಬಳಸಿ ಅಡುಗೆ ಮಾಡುವುದರಿಂದ ಉಸಿರಾಟದ ಸಮಸ್ಯೆ ಮತ್ತಷ್ಟು ಗಂಭೀರಗೊಳ್ಳಬಹುದು ಮತ್ತು ಕೊರೋನಾ ಮಹಾಮಾರಿಯ ಸೋಂಕು ತೀವ್ರವಾಗುವ ಸಾಧ್ಯತೆಗಳು ತುಂಬಾ ಹೆಚ್ಚು.

ಸರ್ಕಾರದ ಗಣ್ಯರು ಅಂಚಿಗೆ ಸರಿದು ಹೋಗುತ್ತಿರುವ ಇಂತಹ ಸಮುದಾಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಅದೂ ಕೂಡ ಮಹಾಮಾರಿಗಳು ಕೊಳೆಗೇರಿಗಳಲ್ಲಿ ಹರಡುವುದಕ್ಕೆ ಕಾರಣ. ಖಾಯಿಲೆಗಳು ಹರಡದಿರುವಂತೆ ತಡೆಯುವಂತಹ ಯಾವುದೇ ಪ್ರಯತ್ನಗಳು ಈ ಹಿಂದೆಯೂ ನಡೆದಿಲ್ಲ. ಇನ್ನು ಕೊರೋನಾ ವೈರಾಣುವಿಗಾಗಿ ಸುಲಭವಾಗಿ ಪರೀಕ್ಷಿಸಬಹುದಾದ ಸಾಧ್ಯತೆಗಳು ಇಂತಹ ಸ್ಥಳಗಳಲ್ಲಿ ತುಂಬಾ ಕಡಿಮೆ.

ಇಂತಹ ಪ್ರದೇಶಗಳಲ್ಲಿ ಸಂಬಂಧಪಟ್ಟವರ ಮಧ್ಯಪ್ರವೇಶ ತುಂಬಾ ಅವಶ್ಯಕ. ಜಾರಿಗೊಳಿಸಬಹುದಾದ ಕ್ರಮಗಳನ್ನು ತುಂಬಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಕೊಳಚೆ ಪ್ರದೇಶಗಳ ವಾಸ್ತವ ಸ್ಥಿತಿಯನ್ನು, ಅವರ ಅವಶ್ಯಕತೆಗಳನ್ನು ಪರಿಗಣಿಸದೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಬಯಸುವುದು ಪ್ರಾಯೋಗಿಕವಲ್ಲ. ಸ್ಲಂ ಡ್ವೆಲ್ಲರ್‍ಸ್‌ ಇಂಟರ್‌ನ್ಯಾಷನಲ್ ಅಂತಹ ಸಾಮುದಾಯಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಎಲ್ಲಾ ನೀತಿಗಳನ್ನು ರೂಪಿಸಬೇಕು. ಇದು ಜಗತ್ತಿನ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಕೊಳೆಗೇರಿ ನಿವಾಸಿಗಳನ್ನು ಪ್ರತಿನಿಧಿಸುವ ಸಂಸ್ಥೆ. ಜೊತೆಗೆ ಸ್ಥಳೀಯ ಸಂಸ್ಥೆಗಳನ್ನು ಇಂತಹ ಪ್ರಯತ್ನಗಳಲ್ಲಿ ಸೇರಿಸಿಕೊಳ್ಳಬೇಕು. ಬ್ರೆಜಿಲ್‌ನ ಕೆಲವು ಕೊಳೆಗೇರಿಗಳಲ್ಲಿ ಹಲವು ಸ್ಥಳೀಯ ಸಂಘಟನೆಗಳು ಕೊಳೆಗೇರಿಗಳನ್ನು ಪ್ರವೇಶಿಸುವ ಪ್ರಮುಖ ದಾರಿಗಳಲ್ಲಿ ಕೈತೊಳೆಯುವ ಯಂತ್ರಗಳಿರುವ ಸ್ಟಾಲುಗಳನ್ನು ಹಾಕಿವೆ.

ಯಾವುದೇ ಪಿಡುಗಾಗಲೀ ಒಮ್ಮೆ ಕೊಳೆಗೇರಿಯಲ್ಲಿ ಕಾಲಿಟ್ಟಿತೆಂದರೆ ಅದು ಮತ್ತಷ್ಟು ಹರಡುವ ಸಾಧ್ಯತೆಗಳು ಹೆಚ್ಚು. ಸಾಮಾನ್ಯವಾಗಿ ಈ ಅಪಾಯದ ತೀವ್ರತೆಯನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುವುದಿಲ್ಲ. ಉದಾಹರಣೆಗೆ ಕೊಳೆಗೇರಿಗಳನ್ನು ಕಡೆಗಣಿಸಿದರೆ ನಗರದಲ್ಲಿ ಸೋಂಕಿನ ಪ್ರಮಾಣದ ಅಂದಾಜು ಶೇಕಡಾ 10ರಿಂದ 50ರಷ್ಟು ಕಡಿಮೆಯಾಗಿ ಕಾಣುತ್ತದೆ. ಅಷ್ಟೇ ಅಲ್ಲ ಲಸಿಕೆಯ ಪರಿಣಾಮಕಾರಿತ್ವದ ಅಂದಾಜು ಇರುವುದಕ್ಕಿಂತ ಶೇಕಡಾ 30ರಿಂದ 55ರಷ್ಟು ಹೆಚ್ಚಾಗಿಬಿಡುತ್ತದೆ. ಇದನ್ನು ದೆಹಲಿಯ ಸಂಶೋಧಕರು ತಿಳಿಸಿದ್ದಾರೆ.

ಕೊಳೆಗೇರಿಗಳಲ್ಲಿ ಸೋಂಕಿನ ತೀವ್ರತೆಯನ್ನು ಕಡಿಮೆ ಅಂದಾಜು ಮಾಡಿಕೊಂಡಲ್ಲಿ, ಆರೋಗ್ಯ ಸುರಕ್ಷಾ ಸಂಪನ್ಮೂಲಗಳ ಹಂಚಿಕೆ ಅಸಮವಾಗಬಹುದು. ಕೋವಿಡ್-19ರಿಂದ ಒದ್ದಾಡುತ್ತಿರುವ ಗಂಭೀರ ರೋಗಿಗಳಿಗೆ ಐಸಿಯು ಮತ್ತು ವೆಂಟಿಲೇಟರುಗಳಂತಹ ಉನ್ನತ ಜೀವರಕ್ಷಕ ಸಹಾಯಗಳ್ಯಾವುವೂ ದೊರೆಯದೇ ಹೋಗುವ ಸಾಧ್ಯತೆಗಳೇ ಹೆಚ್ಚು.

ಇನ್ನು ಇದಕ್ಕೆ ಆರ್ಥಿಕ ಆಯಾಮವೂ ಇದೆ. ಕೊರೋನಾ ಮಹಾಮಾರಿಯ ಆರ್ಥಿಕ ಸಮಸ್ಯೆಗಳು ಕೊಳೆಗೇರಿ ನಿವಾಸಿಗಳನ್ನು ಹೆಚ್ಚು ತೀವ್ರವಾಗಿ ಕಾಡುತ್ತವೆ. ಕೊಳಚೆಗೇರಿಯ ಬಹುಪಾಲು ಜನ ಅನೌಪಚಾರಿಕ ವಲಯಗಳಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಲಾಕ್‌ಡೌನ್ ಸಂದರ್ಭದಲ್ಲಿ ಅವರ ಆರ್ಥಿಕ ಮೂಲವೇ ಇಲ್ಲವಾಗಿಬಿಡುತ್ತದೆ.

ನವ ದೆಹಲಿ, ಮುಂಬೈ, ಕೇಪ್ ಟೌನ್, ಮನಿಲಾ, ಕರಾಚಿ, ರಿಯೋ ಡಿ ಜನೈರೋ ಮತ್ತು ನೈರೋಬಿ, ಕೆನ್ಯಾಗಳ ಕೊಳೆಗೇರಿಗಳಲ್ಲಿ ದಿನಕೂಲಿ ಕಾರ್ಮಿಕರ ಸಂಕಟ ಈ ಲಾಕ್‌ಡೌನಿನಿಂದಾಗಿ ತುಂಬಾ ತೀವ್ರಗೊಂಡಿದೆ. ಮನೆಯಲ್ಲಿ ಉಳಿದುಕೊಳ್ಳುವುದು ಈ ಸಮುದಾಯಗಳಿಗೆ ಸಾಧ್ಯವೇ ಇಲ್ಲ. ಅವರ ಜೀವನೋಪಾಯ ಸಂಪೂರ್ಣವಾಗಿ ಅನೌಪಚಾರಿಕ ಕೆಲಸವನ್ನೇ ಅವಲಂಬಿಸಿದೆ.

ಈ ಎಲ್ಲಾ ಪರಿಣಾಮಗಳನ್ನು ಊಹಿಸಿ, ಬ್ರೆಜಿಲ್ ಸರ್ಕಾರವು ಮೂರು ತಿಂಗಳ ಕಾಲ ಈ ಅನೌಪಚಾರಿಕ ಕಾರ್ಮಿಕರಿಗೆ 600 ಬ್ರೆಜಿಲ್ ರಿಯಾಗಳನ್ನು ನೀಡಿ ಬೆಂಬಲಿಸುವ ತುರ್ತುಕ್ರಮಗಳನ್ನು ಮತ್ತು ಯೋಜನೆಗಳನ್ನು ಜಾರಿಗೆ ತಂದಿತು. ಈ ಮೊತ್ತ ಸುಮಾರು 114 ಡಾಲರುಗಳಿಗೆ ಸಮ. ದೆಹಲಿಯಲ್ಲಿ ಮಾಲೀಕರು ಕಾರ್ಮಿಕರಿಗೆ ವೇತನ ನೀಡಬೇಕು ಮತ್ತು ಭೂಮಾಲಿಕರು ಕೆಲಸಗಾರರನ್ನು ಒಕ್ಕಲೆಬ್ಬಿಸಬಾರದು ಎಂದು ದೆಹಲಿಯ ಸರ್ಕಾರ ಮನವಿ ಮಾಡಿಕೊಂಡಿದೆ. ಆದರೆ ಇಷ್ಟೇ ಸಾಲುವುದಿಲ್ಲ ಅನ್ನುವುದು ಸ್ಪಷ್ಟ.

ಗ್ರೂಪ್ ಆಫ್ 20 ಎಂಬ ಸಂಸ್ಥೆಯು ಕೊರೋನಾ ಮಹಾಮಾರಿಯ ಬಿಕ್ಕಟ್ಟಿಗೆ ಸ್ಪಂದಿಸುತ್ತಾ 5 ಟ್ರಿಲಿಯನ್ ಡಾಲರುಗಳನ್ನು ಪರಿಹಾರಕ್ಕಾಗಿ ಮುಡುಪಾಗಿಟ್ಟಿದೆ. ಈ ಪರಿಹಾರ ಕಡ್ಡಾಯವಾಗಿ ಕೊಳೆಗೇರಿ ನಿವಾಸಿಗಳಿಗೂ ಸಿಗಬೇಕು. ಈ ನಿಧಿಯನ್ನು ಬ್ರೆಜಿಲ್‌ನ ಬೋಲ್ಸಾ ಫ್ಯಾಮೀಲಿಯಾ, ಮೆಕ್ಸಿಕೊದ ಪ್ರೊಸ್ಪೆರಾ ಅಂತಹ ಸರ್ಕಾರದ ಷರತ್ತಿಗೆ ಒಳಪಟ್ಟು ಹಣವನ್ನು ವರ್ಗಾಯಿಸುವ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ವಿಸ್ತರಿಸುವುದಕ್ಕೆ ತಾತ್ಕಾಲಿಕವಾಗಿ ಬಳಸಬಹುದು. ಭಾರತವು ಈ ಲಾಕ್‌ಡೌನ್ ಅವಧಿಯಲ್ಲಿ ಬಡವರಿಗೆ ಮೂರುತಿಂಗಳ ಕಾಲ ಪಡಿತರವನ್ನೂ ಮತ್ತು ನಗದನ್ನೂ ವರ್ಗಾಯಿಸುವುದಾಗಿ ಘೋಷಿಸಿದೆ. ಕಡಿಮೆ ಆದಾಯದ ಜನರನ್ನು ಕಾಪಾಡಲು ಹಲವು ದೇಶಗಳು ನಗದು ವರ್ಗಾವಣೆಯ ಯೋಜನೆಯನ್ನು ರೂಪಿಸಿಕೊಂಡಿವೆ. ಅವುಗಳನ್ನು ವಿಸ್ತರಿಸಬೇಕು.

ಬ್ರೆಜಿಲ್‌ನಲ್ಲಿ ಫ್ಯಾಮಿಲಿ ಹೆಲ್ತ್ ಸ್ಟ್ರಾಟಜಿ ಕಾರ್ಯಕ್ರಮದಲ್ಲಿ ತರಬೇತಿಗೊಂಡ ಸ್ಥಳೀಯರನ್ನೇ ತಮ್ಮ ತಮ್ಮ ಸಮುದಾಯಗಳಿಗೆ ಮೂಲಭೂತ ಮತ್ತು ಮುನ್ನೆಚ್ಚರಿಕೆಯ ರಕ್ಷಣೆಯನ್ನು ನೀಡುವುದಕ್ಕಾಗಿ ಬಳಸಿಕೊಂಡರು. ಅದೇ ರೀತಿಯಲ್ಲಿ ಈಗ ಕೆಲಸ ಕಳೆದುಕೊಂಡಿರುವ ಕಾರ್ಮಿಕರಿಗೆ ತರಬೇತಿ ನೀಡಿ, ತಮ್ಮದೇ ನೆರೆಹೊರೆಯಲ್ಲಿ ಕೊರೋನಾ ವೈರಾಣು ಸೋಂಕಿತರನ್ನು ಗುರುತಿಸುವ ಕೆಲಸಗಾರರನ್ನಾಗಿ ಅವರನ್ನು ಮತ್ತೆ ನೇಮಿಸಿಕೊಳ್ಳಬಹುದು.

ಅನೌಪಚಾರಿಕ ನೆಲಸುನಾಡುಗಳು ಕೇವಲ ಅಭಿವೃದ್ಧಿಶೀಲ ದೇಶಗಳಲ್ಲಿ ಮಾತ್ರ ಕಂಡುಬರುತ್ತವೆಂದು ಭಾವಿಸಬಾರದು. ಶ್ರೀಮಂತ ದೇಶಗಳ ನಗರಗಳಲ್ಲಿಯೂ ಇಂಥಹ ನೆಲಸುನಾಡುಗಳಿವೆ. ಲಾಸ್ ಅಂಜಲಿಸ್, ಓಕ್‌ಲ್ಯಾಂಡ್, ಸಿಯಾಟೆಲ್, ನ್ಯೂ ಯಾರ್ಕ್ ಸಿಟಿ, ಕಾಲಿಫ್, ಪ್ಯಾರಿಸ್ ಮತ್ತು ಲಂಡನ್ನಿನ ಮನೆಯಿಲ್ಲದವರ ಬಿಡಾರಗಳು ಇಂತಹ ಮಹಾಮಾರಿಗಳಿಗೆ ಬಹು ಸುಲಭವಾಗಿ ಬಲಿಯಾಗುವಂತಹ ಸ್ಥಳಗಳು.

ಜಗತ್ತಿನ ಹಲವೆಡೆಗಳಲ್ಲಿ ನಿರಾಶ್ರಿತರಿಗಾಗಿ ನಿರ್ಮಿಸಿದ ಬಿಡಾರಗಳೇ ಈಗ ಅವರ ನೆಲಸುನಾಡುಗಳಾಗಿವೆ. ಅವುಗಳಿಗೆ ಯುನೈಟೆಡ್ ನೇಷನ್ಸ್ ವ್ಯಾಖ್ಯಾನಿಸುವ ಕೊಳೆಗೇರಿಯ ಲಕ್ಷಣಗಳೂ ಇವೆ. ಬಾಂಗ್ಲಾದೇಶ, ಲೆಬನಾನ್, ಕೆನ್ಯಾ ಮತ್ತು ಗ್ರೀಸ್‌ನ ನಿರಾಶ್ರಿತರ ಬಿಡಾರಗಳಲ್ಲಿ ಕೊರೋನವೈರಸ್ ಹರಡಬಹುದೆಂಬ ಭೀತಿ ದಟ್ಟವಾಗಿದೆ. ಕಳೆದ ವಾರ ಅಥೆನ್ಸ್ನ ಬಳಿಯಿರುವ ಬಿಡಾರವೊಂದರ ಕನಿಷ್ಠ ಇಪ್ಪತ್ತು ನಿರಾಶ್ರಿತರಿಗೆ ಕೊರೋನ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ಜಗತ್ತಿನ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸರ್ಕಾರಗಳು ಇಂತಹ ಕೊಳೆಗೇರಿಗಳನ್ನು ಮನೆಯಿಲ್ಲದವರ ಪಾಳೆಯಗಳನ್ನು ಮತ್ತು ನಿರಾಶ್ರಿತರ ಬಿಡದಿಗಳನ್ನು ಮರೆಯಬಾರದು ಮತ್ತು ಅವರ ಬಗ್ಗೆ ಎಚ್ಚರ ವಹಿಸಬೇಕು. ಮಹಾಮಾರಿಯಿಂದ ಜಗತ್ತಿನ ಎಲ್ಲಾ ವರ್ಗದ ಜನರ ಮೇಲೆ ಆಗುವ ಪರಿಣಾಮಗಳನ್ನು ಎದುರಿಸಲು ಸಿದ್ಧರಿರಬೇಕು.

(ಲೀ ಡಬ್ಲು ರೈಲಿ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರು, ಇವಾ ರ‍್ಯಾಫೆಲ್ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಕ್ಲಿನಿಕಲ್ ರೀಸರ್ಚ್ ಫೆಲೊ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...