HomeUncategorizedFact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ...

Fact Check: ಮುಸ್ಲಿಮರಿಂದ ಕಲ್ಲು ತೂರಾಟ- ಯುಪಿ ವೈದ್ಯೆ ವಂದನಾ ತಿವಾರಿ ಸಾವು: ಈ ಸುದ್ದಿ ನಿಜವಲ್ಲ

- Advertisement -
- Advertisement -

COVID-19 ಪರೀಕ್ಷಿಸಲು ನಿರಾಕರಿಸಿದ ವೈದ್ಯೆಗೆ ಸ್ಥಳೀಯ ಮುಸ್ಲಿಮರು ಕಲ್ಲು ತೂರಿದ್ದರಿಂದ ಉತ್ತರ ಪ್ರದೇಶದ ಮಹಿಳಾ ವೈದ್ಯೆಯೊಬ್ಬಳು ಸಾವನ್ನಪ್ಪಿದ್ದಾರೆ ಎಂದು ಹೇಳುವ ಹಲವಾರು ಫೇಸ್‌ಬುಕ್ ಪೋಸ್ಟ್‌ಗಳು ವೈರಲ್‌ ಆಗಿವೆ. ಆದರೆ ಆ ಸುದ್ದಿ ಸುಳ್ಳಾಗಿದ್ದು ವೈರಲ್‌ ಫೋಟೊದಲ್ಲಿರುವ ಮಹಿಳೆಯರು ಮಧ್ಯಪ್ರದೇಶ ಫಾರ್ಮಾಸಿಸ್ಟ್‌ ಆಗಿದ್ದು ಅವರು ಮಿದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಹಾಸಿಗೆಯಲ್ಲಿ ಮಹಿಳೆಯೊಬ್ಬಳು ಬಾಯಿಯಲ್ಲಿ ಇಂಟ್ಯೂಬೇಶನ್ ಟ್ಯೂಬ್ ಇಟ್ಟುಕೊಂಡಿರುವ ಚಿತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆಗೆ ಕೋಮು ಬಣ್ಣವನ್ನು ನೀಡಲಾಗುತ್ತಿದೆ.

ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಮುಸ್ಲಿಮರು ಕಲ್ಲು ತೂರಾಟದಿಂದ ಗಾಯಗೊಂಡ ವೈದ್ಯ ಮಹಿಳೆ ಈಗ ಮೃತಪಟ್ಟಿದ್ದಾಳೆ. ಅಲ್ಲಿ ಅವರು ಶಂಕಿತ COVID-19 ರೋಗಿಗಳನ್ನು ಪರೀಕ್ಷಿಸಲು ಹೋಗಿದ್ದರು ಎಂದು ಒಂದು ಪೋಸ್ಟ್‌ನಲ್ಲಿ ಬರೆದಿದ್ದರೆ ಮತ್ತೊಂದು ಪೋಸ್ಟ್‌ ಈ ಕೆಳಗಿನಂತಿದೆ.

‘ಸ್ನೇಹಿತರೇ, ದುಃಖದ ಸುದ್ದಿ ಇದೆ. ಡಾಕ್ಟರ್ ವಂದನಾ ತಿವಾರಿ ಇನ್ನಿಲ್ಲ. ಕೊರೊನಾವೈರಸ್ ರೋಗಿಗಳನ್ನು ಪರೀಕ್ಷಿಸಲು ಅವರು ಕಳೆದ ವಾರ ಉತ್ತರ ಪ್ರದೇಶಕ್ಕೆ ಹೋಗಿದ್ದರು ಆದರೆ ಜಿಹಾದಿಗಳು ಅವಳ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಂಡರು. ಇತರರ ಪ್ರಾಣ ಉಳಿಸಲು ಹೋರಾಡುತ್ತಿದ್ದ ಆ ಯೋಧೆ ಏಳು ದಿನಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಇಲ್ಲವಾಗಿದ್ದಾರೆ. ಸಂತಾಪಗಳು’.

ಮಧ್ಯಪ್ರದೇಶದ ಇಂದೋರ್‌ನಲ್ಲಿ 2020ರ ಏಪ್ರಿಲ್ 2 ರಂದು ಆರೋಗ್ಯ ಅಧಿಕಾರಿಗಳ ಐದು ಸದಸ್ಯರ ತಂಡವು ಕೊರೊನಾ ಪರೀಕ್ಷೆಗಾಗಿ ಭೇಟಿ ನೀಡಿತ್ತು. ಇಂದೋರ್‌ನ ಟಾಟ್ ಪ್ಯಾಟಿ ಬಖಾಲ್ ಪ್ರದೇಶಕ್ಕೆ ಭೇಟಿ ನೀಡಿದಾಗ ಅವರ ಮೇಲೆ ಹಲ್ಲೆಯಾಗಿತ್ತು. ಆ ಸುದ್ದಿಗೂ ಈ ಸುದ್ದಿಗೂ ಗೊಂದಲ ಉಂಟು ಮಾಡಿರುವುದರಿಂದ ಬಹಳಷ್ಟು ಜನ ಈ ಸುದ್ದಿಯನ್ನು ನಿಜವೆಂದು ನಂಬಿಬಿಟ್ಟಿದ್ದಾರೆ. ಹಾಗಾಗಿಯೇ ಈ ಪೋಸ್ಟ್‌ಗಳನ್ನು ಸಹ ಸಾವಿರಾರು ಜನ ಲೈಕ್‌ ಮತ್ತು ಷೇರ್‌ ಮಾಡಿದ್ದಾರೆ.

ಸತ್ಯವೇನು?

ಚಿತ್ರದಲ್ಲಿರುವ ಮಹಿಳೆ ವಂದನಾ ತಿವಾರಿ ಮಧ್ಯಪ್ರದೇಶದ ಶಿವಪುರಿಯ ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ  ಔಷಧಿ ಅಧಿಕಾರಿಯಾಗಿದ್ದರು (pharmacist) ಎಂದು ಸ್ಥಳೀಯ ಪತ್ರಿಕೆ ಭೋಪಾಲ್ ಸಮಾಚಾರ್‌ನಲ್ಲಿನ ಲೇಖನವೊಂದು ವರದಿ ಮಾಡಿದೆ. ತಿವಾರಿ ಅವರನ್ನು ಏಪ್ರಿಲ್ 1, 2020 ರಂದು ಗ್ವಾಲಿಯರ್‌ನ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಏಪ್ರಿಲ್ 7 ರಂದು ನಿಧನರಾದರು ಎಂದು ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಮಿದುಳಿನ ರಕ್ತಸ್ರಾವವು ಅವಳ ಸಾವಿಗೆ ಕಾರಣವೆಂದು ಹೇಳಲಾಗಿದೆ.

ತಿವಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾರ್ಚ್ 31 ರವರೆಗೆ ಕರ್ತವ್ಯದಲ್ಲಿದ್ದಾರೆ ಎಂದು ಆಸ್ಪತ್ರೆಯ ಡೀನ್ ಇಲಾ ಗುಜರಿಯಾ ತಿಳಿಸಿದ್ದಾರೆ. “ಗ್ವಾಲಿಯರ್ನಲ್ಲಿ ಪ್ರವೇಶ ಪಡೆದಿದ್ದರಿಂದ ಆಕೆಯ ಚಿಕಿತ್ಸೆಯ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಏಪ್ರಿಲ್ 1 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಹಾಗಾಗಿ  ವಂದನಾ ತಿವಾರಿಗೆ ಯುಪಿ ಗ್ರಾಮವೊಂದರಲ್ಲಿ ಮುಸ್ಲಿಮರಿಂದ ಹಲ್ಲೆ ನಡೆಸಲಾಗಿದೆ ಎಂಬ ಹೇಳಿಕೆ ಸುಳ್ಳು ಎಂದು ಘಟನೆಗಳ ಟೈಮ್‌ಲೈನ್ ತೋರಿಸುತ್ತದೆ.

ಪೊಲೀಸ್ ವರಿಷ್ಠಾಧಿಕಾರಿ ಶಿವಪುರಿ ರಾಜೇಶ್ ಚಂದೇಲ್ “ಆಕೆಯನ್ನು ಶಿವಪುರಿ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಗೆ ಗ್ವಾಲಿಯರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆಸಲಾಯಿತು. ಆದರೂ ಬದುಕುಳಿಯಲಿಲ್ಲ. ಇನ್ನು ಆಕೆ ಉತ್ತರ ಪ್ರದೇಶದಲ್ಲಿ ಹಲ್ಲೆಗೊಳಗಾಗಿರುವುದು ಸಂಪೂರ್ಣ ಸುಳ್ಳು ಸುದ್ದಿ ಎಂದಿದ್ದಾರೆ.

ಯುಪಿ ಪೊಲೀಸರ ಅಧಿಕೃತ ಫ್ಯಾಕ್ಟ್ ಚೆಕ್ ಹ್ಯಾಂಡಲ್‌ ಸಹ ಟ್ವೀಟ್ ಮಾಡಿ, ವಂದನಾ ತಿವಾರಿ ಅವರ ಸಾವಿಗೆ ಉತ್ತರ ಪ್ರದೇಶದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರದ ಪಿಆರ್ ಇಲಾಖೆಯು ವಂದನಾ ತಿವಾರಿ ಸಾವಿನ ಬಗ್ಗೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಕಚೇರಿ ಶಿವಪುರಿ ನೀಡಿದ ಹೇಳಿಕೆಯನ್ನು ಟ್ವೀಟ್ ಮಾಡಿದೆ. ವೈರಲ್ ಪೋಸ್ಟ್‌ಗಳಲ್ಲಿ ಹೇಳಿರುವಂತೆ ಕಲ್ಲು ತೂರಾಟದ ಘಟನೆಯ ಬಗ್ಗೆ ಹೇಳಿಕೆಯಲ್ಲಿ ಎಲ್ಲಿಯೂ ಉಲ್ಲೇಖವಿಲ್ಲ.

ಇದು ಭಾರತೀಯ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ತಪ್ಪು ಮಾಹಿತಿ ಹರಡುತ್ತಿರುವ ಇತ್ತೀಚಿನ ಉದಾಹರಣೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...