ಕೊರೋನಾ ಹರಡುವಿಕೆಯನ್ನು ಹೇಗೆ ತಡೆಯುವುದು ಎಂಬುದರ ಕುರಿತು ಆಡಳಿತ ಅಧಿಕಾರಿಗಳೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡೆಸಿದ ಸಭೆಗೆ ಆಕ್ಷೇಪ ವ್ಯಕ್ತಪಡಿಸಿದ ಶಿವಸೇನೆ, ಇದನ್ನು “ಅನಗತ್ಯ ಸಮಾನಾಂತರ ಆಡಳಿತ” ಎಂದು ಹೇಳಿದೆ. ಇಂತಹ ಸಭೆಗಳು ರಾಜ್ಯ ಆಡಳಿತ ಸಿಬ್ಬಂದಿಗಳಲ್ಲಿ ಗೊಂದಲವನ್ನು ಉಂಟುಮಾಡುತ್ತವೆ ಎಂದು ಶಿವಸೇನೆ ಆರೋಪಿಸಿದೆ.
ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ ದ ಸಂಪಾದಕೀಯದಲ್ಲಿ, “ಆಡಳಿತ ಪಕ್ಷವು ಕೊರೊನಾ ವಿರುದ್ಧದ ಯುದ್ಧದಂತಹ ಪರಿಸ್ಥಿತಿಯಲ್ಲಿ ಹೋರಾಡುತ್ತಿರುವಾಗ, ಆಡಳಿತ ವರ್ಗಕ್ಕೆ ನಿರ್ದೇಶನಗಳನ್ನು ನೀಡಲು ಒಂದೇ ಕೇಂದ್ರ ಆಜ್ಞೆ ಇರಬೇಕು” ಎಂದು ಪ್ರತಿಪಾದಿಸಿದೆ.
“ಕೇಂದ್ರದಲ್ಲಿ ಪ್ರಧಾನಿ ಮತ್ತು ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿ ಅಧಿಕಾರವನ್ನು ಹೊಂದಿರಬೇಕು. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬುಧವಾರ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿಯೂ ಸಹ, ಶಿವಸೇನೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನ ಮಂತ್ರಿಗೆ ಕೊರೊನಾ ವಿರುದ್ಧ ಹೋರಾಡಲು ಅವರ ನಾಯಕತ್ವದಲ್ಲಿ ಇಡೀ ದೇಶವನ್ನು ಒಗ್ಗೂಡಲಾಗಿದೆ” ಎಂದು ಶಿವಸೇನೆ ಹೇಳಿದೆ.
ಕೊರೊನಾ ವೈರಸ್ ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸಿದ್ದಕ್ಕಾಗಿ ಸಿಎಂ ನಾಯಕತ್ವವನ್ನು ಶ್ಲಾಘಿಸಿದ ಪವಾರ್, ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರಿಗೆ ರಾಜ್ಯಪಾಲರ ಪಾತ್ರದ ಬಗ್ಗೆ (ಅಧಿಕಾರಿಗಳೊಂದಿಗೆ ಸಭೆ ನಡೆಸುವಲ್ಲಿ) ತಿಳಿಸಿದ್ದರು ಎಂದು ಸಂಪಾದಕೀಯ ತಿಳಿಸಿದೆ.
“ಯಾವುದೇ ಕೆಟ್ಟ ಅನುಭವವಾಗಿಲ್ಲ, ಆದರೆ ಯಾರಾದರೂ ಸಮಾನಾಂತರ ಸರ್ಕಾರವನ್ನು ನಡೆಸಿದರೆ ಗೊಂದಲಕ್ಕೆ ಕಾರಣವಾಗುತ್ತದೆ. ಶರದ್ ಪವಾರ್ ಅವರಂತಹ ಹಿರಿಯ ನಾಯಕನಿಗೆ ಈ ರೀತಿ ಅನಿಸಿದರೆ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಸಾಮ್ನಾ ತನ್ನ ಸಂಪಾದಕೀಯದಲ್ಲಿ ಹೇಳಿದೆ.
ಈ ವಾರದ ಆರಂಭದಲ್ಲಿ ರಾಜ್ಯಪಾಲ ಕೊಶಾರಿ ಅವರು ಜಿಲ್ಲಾಧಿಕಾರಿಗಳು ಮತ್ತು ವಿಭಾಗೀಯ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ವಿಭಾಗೀಯ ಆಯುಕ್ತರು, ಬೃಹತ್ ಮುಂಬೈ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರು ಮತ್ತು ಹತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು


