Homeಮುಖಪುಟಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

ಪೋಸ್ಟ್‌ಕಾರ್ಡ್ ಹರಡಿದ ಸುಳ್ಳು: ಹೈಡ್ರಾಕ್ಸಿಕ್ಲೊರೋಕ್ವಿನ್ ಔಷಧಿ ಕಂಡುಹಿಡಿದದ್ದು ಯಾರು?

- Advertisement -
- Advertisement -

ಸುಳ್ಳು ಸುದ್ದಿ ಎಂಬುದು ಕೊರೋನಾಗಿಂತ ಮಾರಣಾಂತಿಕ ವೈರಸ್ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊರೋನಾ ಹರಡುವಿಕೆ ಅತಿಯಾದಂತೆಲ್ಲಾ ಸುಳ್ಳು ಸುದ್ದಿಯ ಹರಡುವಿಕೆಯೂ ಎಗ್ಗಿಲ್ಲದೆ ಸಾಗುತ್ತಲೇ ಇದೆ. ಇನ್ನೂ ಕರ್ನಾಟಕದ ಮಟ್ಟಿಗೆ ಈ ಸುಳ್ಳು ಸುದ್ದಿಗಳ ಶೂರರು ಯಾರು? ಸುಳ್ಳೇ ಮನೆ ದೇವರು ಎಂದು ನಂಬಿ ಜೈಲುವಾಸವನ್ನೂ ಅನುಭವಿಸಿ ಬಂದವರು ಯಾರು? ಎಂಬುದನ್ನು ಕನ್ನಡಿಗರಿಗೆ ಬಿಡಿಸಿ ಹೇಳಬೇಕಿಲ್ಲ. ಏಕೆಂದರೆ ಇವೆಲ್ಲಾ ಪೋಸ್ಟ್ ಕಾರ್ಡ್ ಕನ್ನಡ ಎಂಬ ಪೋರ್ಟಲ್ ಕೆಲಸ ಎಂಬುದು ಬಹುತೇಕರಿಗೆ ಗೊತ್ತು.

ಸುಳ್ಳು ಸುದ್ದಿಗೆ ಇಡೀ ರಾಜ್ಯದಲ್ಲಿ ಕುಖ್ಯಾತಿ ಪಡೆದಿರುವ ಪೋಸ್ಟ್ ಕಾರ್ಡ್, ದಿನಕ್ಕೊಂದು ಸುಳ್ಳು ಹೇಳಿ ಮನರಂಜನೆ ನೀಡುವಲ್ಲಿ ಎತ್ತಿದ ಕೈ. ಅಂದಹಾಗೆ ಈ ಪೋರ್ಟಲ್ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಸುಳ್ಳು ಯಾವುದು ಗೊತ್ತಾ? ಅದೇ ಪ್ರಸ್ತುತ ಕೊರೋನಾ ಸೋಂಕಿನ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧಿ ಪಿತಾಮಹ ಆಚಾರ್ಯ ಪ್ರಫುಲ್ಲಚಂದ್ರ ರಾಯ್ ಎಂಬುದು.

Posted by Postcard ಕನ್ನಡ on Friday, April 10, 2020

ಪಶ್ಚಿಮ ಬಂಗಾಳ ಮೂಲದ ಆಚಾರ್ಯ ಪ್ರಫುಲ್ಲಾಚಂದ್ರ ರಾಯ್ ಭಾರತದ ರಸಾಯನ ಶಾಸ್ತ್ರದ ಪಿತಾಮಹ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ದೇಶದ ರಸಾಯನ ಶಾಸ್ತ್ರ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ ಮತ್ತು ಶ್ಲಾಘನೀಯ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕುರಿತು ಭಾರತೀಯರೆನಿಸಿಕೊಂಡವರೆಲ್ಲರಿಗೂ ಅಪಾರ ಗೌರವ ಇದೆ. ಆದರೆ, ಪ್ರಸ್ತುತ ಚರ್ಚೆಯ ಕೇಂದ್ರವಾಗಿರುವ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಇವರಲ್ಲ ಎಂಬುದೇ ಸತ್ಯ. ಏಕೆಂದರೆ ಅವರು ನಿಧನವಾಗಿದ್ದು 1944ರಲ್ಲಿ. ಔಷಧಿ ಕಂಡುಹಿಡಿದಿದ್ದು 1945ರ ನಂತರ.

ಆದರೆ ಪೋಸ್ಟ್‌ ಕಾರ್ಡ್‌ ಹರಡಿದ ಈ ಹಸಿ ಸುಳ್ಳನ್ನು ಎರಡು ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದರೆ, 1800 ಜನ ಷೇರ್‌ ಮಾಡಿದ್ದಾರೆ.

ಹಾಗಾದ್ರೆ ಈ ಔಷಧಿ ಕಂಡು ಹಿಡಿದದ್ದು ಯಾರು? ಇಲ್ಲಿದೆ ಅಸಲಿ ಅತ್ಯ

ಅಸಲಿಗೆ ಮಲೇರಿಯಾಗೆ ಔಷಧ ಕಂಡು ಹಿಡಿಯುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧವನ್ನು ಕಂಡು ಹಿಡಿದದ್ದು ಜರ್ಮನಿಯ ಬಾಯರ್ ಫಾರ್ಮ. ಇದನ್ನು ಅನ್ವೇಷಿಸಲಾದ ವರ್ಷ 1945.

ಇವತ್ತು ಜಗತ್ತಿನ 70% ’ಹೈಡ್ರಾಕ್ಸಿಕ್ಲೋರೋಕ್ವೀನ್’ ನನ್ನು ಭಾರತ ಉತ್ಪಾದಿಸುತ್ತದೆ. ಭಾರತದ ಹೀಗೆ ಅತಿಹೆಚ್ಚು ಪ್ರಮಾಣದಲ್ಲಿ ಈ ಔಷಧವನ್ನು ಉತ್ಪಾದಿಸುತ್ತದೆ ಎಂದರೆ ಅದಕ್ಕೆ ಏಕೈಕ ಕಾರಣ ಈ ದೇಶ ಮಲೇರಿಯಾ ಮತ್ತು ಡೆಂಗ್ಯೂ ಬಾಧಿತ ರಾಷ್ಟ್ರ ಎಂಬುದೊಂದೆ.

ಆದರೆ, 1945ನೇ ವರ್ಷದಲ್ಲಿ ಜರ್ಮನಿ ಮೂಲದ ಫಾರ್ಮಾ ಕಂಪೆನಿಯಿಂದ ಮಲೇರಿಯಾಗೆ ಕಂಡು ಹಿಡಿಯಲ್ಪಟ್ಟ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಎಂಬ ಔಷಧಿಯನ್ನು, 1944ಕ್ಕೂ ಮುಂಚಿತವಾಗಿಯೇ ಮೃತಪಟ್ಟ ಆಚಾರ್ಯ ಪ್ರಫುಲ್ಲಚಂದ್ರ ರೇ ಹೇಗೆ ಕಂಡು ಹಿಡಿದರು ಎಂಬುದು ಮಾತ್ರ ಈವರೆಗೆ ತರ್ಕಕ್ಕೆ ನಿಲುಕದ್ದಾಗಿದೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ? 


ಈ ಸುಳ್ಳು ಹರಡುವುದರ ಹಿಂದೆ ಒಂದು ಕಾರಣವೂ ಇದೆ. ಅದೆಂದರೆ ಈ ಹೈಡ್ರಾಕ್ಸಿಕ್ಲೋರೋಕ್ವಿನ್ ಸದ್ಯಕ್ಕೆ ಕೊರೊನಾಗೆ ಔಷಧಿಯಾಗಿ ಬಳಕೆಯಾಗುತ್ತಿದೆ. ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪ್ರಧಾನಿಗಳು ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡುವುದನ್ನು ಮಾರ್ಚ್‌ 25ರಂದು ನಿಷೇಧಿಸಿದರು. ಕಾರಣ ಸ್ಪಷ್ಟ ನಮ್ಮ ದೇಶಕ್ಕೆ ಸಾಕಷ್ಟು ಮಾತ್ರೆಗಳು ಬೇಕು ಎಂಬುದಷ್ಟೆ. ಆದರೆ ಏಪ್ರಿಲ್‌ 7ರಂದು ಅಮೆರಿಕಾ ಟ್ರಂಪ್‌ರವರು ಭಾರತ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡದಿದ್ದರೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಕೂಡಲೇ ನಮ್ಮ ಪ್ರಧಾನಿಗಳು ರಫ್ತು ಮೇಲಿನ ನಿಷೇಧ ತೆರವುಗೊಳಿಸಿದರು. ಆದ ಡ್ಯಾಮೇಜ್‌ ಕಂಟ್ರೋಲ್‌ ಮಾಡಿಕೊಳ್ಳಲು ಪೋಸ್ಟ್‌ ಕಾರ್ಡ್‌ ಈ ರೀತಿ ಸುಳ್ಳು ಹರಡುತ್ತಿದೆ.

ಪೊಲೀಸರೇ ಕ್ರಮ ಎಂದು?

ಕೊರೋನಾ ಭೀತಿ ಹಿನ್ನೆಲೆ ಮಾಧ್ಯಮ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುವವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸ್ವತಃ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದರು. ಆದರೆ, ಪೋಸ್ಟ್ ಕಾರ್ಡ್ ಎಂಬ ಪೋರ್ಟಲ್ ಸುಳ್ಳು ಹೇಳುವುದನ್ನೇ ತನ್ನ ಕುಲಕಸುಬನ್ನಾಗಿಸಿಕೊಂಡಿದೆ.

ಇದೇ ಕಾರಣಕ್ಕೆ ಓ ಪೋರ್ಟಲ್ ಮುಖ್ಯಸ್ಥ ಇತ್ತೀಚೆಗೆ ಜೈಲು ಪಾಲಾಗಿ ಹಿಂದಿರುಗಿದ್ದರು. ಆದರೂ, ಸುಳ್ಳು ಹೇಳುವುದನ್ನು ಮಾತ್ರ ಬಿಟ್ಟಿಲ್ಲ. ಸಂದಿಗ್ಧ ಪರಿಸ್ಥಿತಿಯಲ್ಲೂ ಸುಳ್ಳು ಹೇಳುವ ಇಂತವರ ವಿರುದ್ಧ ಕ್ರಮ ಎಂದು ಎಂಬುದು ಹಲವರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...