Homeಎಕಾನಮಿಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

ಪವಿತ್ರ ಆರ್ಥಿಕತೆಗಾಗಿ, ಗುಳೆಎದ್ದ ಬಡವರ ಸಂಕಷ್ಟ ನಿವಾರಣೆಗಾಗಿ ಪ್ರಸನ್ನರವರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

- Advertisement -
- Advertisement -

ಕೊರೊನಾ ಆವರಿಸುತ್ತಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ವಲಸೆ ಕಾರ್ಮಿಕರು ಹಸಿವಿನಿಂದಿದ್ದಾರೆ. ಇಂತಹ ಸಮಯದಲ್ಲಿ ಗುಳೆ ಎದ್ದಿರುವ ಬಡವರ ಕಷ್ಟನಷ್ಟಗಳಿಗೆ ಸ್ಪಂದಿಸುವ ಹಾಗೂ ಆತ್ಮವಿಮರ್ಶೆಮಾಡಿಕೊಳ್ಳುವ ಸಲುವಾಗಿ ಹಿರಿಯ ರಂಗಕರ್ಮಿ, ಹೋರಾಟಗಾರ ಮತ್ತು ಚಿಂತಕರಾದ ಹೆಗ್ಗೋಡು ಪ್ರಸನ್ನರವರು ಅನಿರ್ದಿಷ್ಟ ಅವಧಿಯ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಏಪ್ರಿಲ್ 10, 2020ರ ಶುಕ್ರವಾರದಂದ ಪವಿತ್ರ ಆರ್ಥಿಕತೆಗಾಗಿ ಹಲವಾರು ಜನರು 12 ಗಂಟೆಗಳ ರಾಷ್ಟ್ರೀಯ ಉಪವಾಸವ್ರತ ನಡೆಸಿದ್ದರು. ಅಲ್ಲಿಂದ ಪ್ರಸನ್ನರವರು ಅನಿರ್ದಿಷ್ಟ ಅವಧಿಯವರೆಗೆ ಉಪವಾಸವ್ರತವನ್ನು ಮುಂದುವರೆಸಿದ್ದು, ನಮ್ಮ ರಾಷ್ಟ್ರಪ್ರಜ್ಞೆಯನ್ನು ಮೀಟುವ ಒಂದು ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ನಮ್ಮ ಸತ್ಯಾಗ್ರಹವು ಸಾರ್ವಜನಿಕ ಪ್ರತಿಭಟನೆಯಲ್ಲ. ಪ್ರಸನ್ನರವರು ಸಾವುಬರಲಿ ಎಂಬ ಹಠದಿಂದ ಉಪವಾಸ ಮಾಡುತ್ತಿಲ್ಲ. ಸಾವನ್ನು ಮುಂದೂಡುವ ಸಲುವಾಗಿ ಅವರು ಪ್ರತಿದಿನ ನೀರನ್ನು ಸೇವಿಸಲಿದ್ದಾರೆ. ಒಂದು ಹರಳು ಉಪ್ಪಿನ ಜೊತೆಗೆ ಅರ್ಧ ಚಮಚೆ ನಿಂಬೆರಸವನ್ನು ದಿನಕ್ಕೊಮ್ಮೆ ಸೇವಿಸಲಿದ್ದಾರೆ. ಉಪವಾಸದ ಮೂರನೆಯ ದಿನದಿಂದ, ರಕ್ತದ ಸಕ್ಕರೆಯ ಪ್ರಮಾಣವನ್ನು ಕನಿಷ್ಟ ಮಟ್ಟದಲ್ಲಿ ಉಳಿಸಿಕೊಳ್ಳಲೆಂದು, ದಿನಕ್ಕೆರಡು ಬಾರಿ ಜೇನು ಸೇವಿಸಲಿದ್ದಾರೆ ಎಂದು ಗ್ರಾಮಸೇವಾ ಸಂಘವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸತ್ಯಾಗ್ರಹಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನೂ ಸಂಘವು ಕಾಲಕಾಲಕ್ಕೆ ಸಾರ್ವಜನಿಕಗೊಳಿಸಲು ಬದ್ಧವಾಗಿರುತ್ತದೆ.  ವ್ರತನಡೆಯುತ್ತಿರುವ ಸ್ಥಳಕ್ಕೆ ಆಗಮಿಸುವ ಹಾಗೂ ವ್ರತನಿರತರೊಡನೆ ಮಾತಿಗಿಳಿಯುವ ಪ್ರಯತ್ನವನ್ನು ದಯಮಾಡಿ ಯಾರೂ ಮಾಡಬಾರದು ಹಾಗೂ ಜಾರಿಯಲ್ಲಿರುವ ನಿರ್ಬಂಧವನ್ನು ಯಾರೂ ಮೀರಬಾರದು. ಉಪವಾಸವ್ರತವೆಂಬುದು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುತ್ತದೆ, ನಾವೆಲ್ಲರೂ ಹೆಮ್ಮೆಪಡುವ ಒಂದು ಆಚರಣೆಯಾಗಿರುತ್ತದೆ. ಎಲ್ಲ ಸ್ನೇಹಿತರು, ಎಲ್ಲ ಸ್ನೇಹಪರ ಸಂಘಟನೆಗಳು ಹಾಗೂ ಎಲ್ಲ ಸ್ನೇಹಪರ ಸರಕಾರಗಳು ಉಪವಾಸವ್ರತವನ್ನು ನಿಲ್ಲಿಸುವಂತೆ ವ್ರತಾರ್ಥಿಗಳ ಮೇಲೆ ಬಲವಂತ ಹೇರಬಾರದು. ನಾವು ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಒಂದೊಮ್ಮೆ ಸರಕಾರಗಳಿಗೆ ಉಪವಾಸವ್ರತವೆಂಬುದು ಕಾನೂನು ಬಾಹಿರ ಅನ್ನಿಸಿದರೆ, ನಾವೆಲ್ಲರೂ ಬಂಧನಕ್ಕೊಳಗಾಗಲು ಸಂತೋಷದಿಂದ ಸಿದ್ಧರಿದ್ದೇವೆ ಎಂದು ಸಹ ಹೇಳಿಕೆಯಲ್ಲಿ ತಿಳಿಸಲಾಗಿದೆ.

2015ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವಾರು ರಚನಾತ್ಮಕ ಸಂಘಟನೆಗಳು ಹಾಗೂ ಕಾರ್ಯಕರ್ತರು ಸೇರಿ ನಡೆಸಿದ ‘ಬದನವಾಳು ಸತ್ಯಾಗ್ರಹ’ದಿಂದ ಆರಂಭವಾಗಿ ಕಳೆದ ವರ್ಷ ಬೆಂಗಳೂರಿನ ಗಾಂಧಿಭವನ ಪಕ್ಕದ ವಲ್ಲಭನಿಕೇತನದ ಪವಿತ್ರ ಆರ್ಥಿಕತೆಗಾಗಿ ಉಪವಾಸದವರೆಗೂ ಪ್ರಸನ್ನರವರು ನಿರಂತರವಾಗಿ ರಚನಾತ್ಮಕ ಹೋರಾಟ ನಡೆಸಿಕೊಂಡುಬಂದಿದ್ದಾರೆ.

ಸಂಪೂರ್ಣ ಯಂತ್ರಚಾಲಿತವಾಗಿರುವ ಇಂದಿನ ಯುಗದಲ್ಲಿ ಗಾಂಧೀಜಿಯವರ ತತ್ವವನ್ನು ಜಾರಿಗೊಳಿಸುವುದು ಹೇಗೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳುವುದೇ ಪವಿತ್ರ ಆರ್ಥಿಕತೆಯ ತತ್ವ. ಯಂತ್ರಗಳ ಅಲ್ಪಪ್ರಮಾಣದ ಬಳಕೆಯನ್ನು (40% ಮೀರದಂತೆ) ಇದು ಮಾನ್ಯ ಮಾಡುತ್ತದೆ.  ಆದರೆ ಯಾವುದೇ ಉತ್ಪಾದನಾ ವ್ಯವಸ್ಥೆಯಲ್ಲಿ ಕನಿಷ್ಟ 60% ಮಾನವಶ್ರಮದ ಬಳಕೆ ಇರಲೇಬೇಕು ಎಂದು ತಾಕೀತು ಮಾಡುತ್ತದೆ. ಸುಸ್ಥಿರ ಬದುಕು ಸಾಧ್ಯವಾಗಬೇಕು ಎಂಬುದು ಅವರ ಚಳವಳಿಯ ಸಾರವಾಗಿದೆ.

ಪವಿತ್ರ ಆರ್ಥಿಕತೆಗಾಗಿ ಸತ್ಯಾಗ್ರಹ ನಡೆಯುತ್ತಿದ್ದಾಗ ಕೇಂದ್ರ ಮಂತ್ರಿ ಡಿ.ವಿ ಸದಾನಂದಗೌಡರು ಸ್ಥಳಕ್ಕೆ ಭೇಟಿ ನೀಡಿ ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿ ಸತ್ಯಾಗ್ರಹ ನಿಲ್ಲಿಸಲು ಮನವಿ ಮಾಡಿದ್ದರು. ಅದರಂತೆ ಈಗ ಕೇಂದ್ರ ಸರ್ಕಾರವು ಪವಿತ್ರ ಆರ್ಥಿಕತೆ ಕುರಿತಂತೆ ಗ್ರಾಮ ಸೇವಾ ಸಂಘದ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ ಮಾತುಕತೆ ಫಲಪ್ರದವಾಗುತ್ತಿಲ್ಲ. ಜನತೆ ಸರಕಾರಗಳ ಮೇಲೆ ನೈತಿಕ ಒತ್ತಡ ಹೇರಿ ಅವರನ್ನು ಒಪ್ಪಿಸಬೇಕಾಗಿದೆ. ಹಾಗಾಗಿ #KaronaKuch,  ಅರ್ಥಾತ್ ಏನಾದರೂ ಮಾಡು ಎಂಬ ಪ್ರಚಾರಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಗುಳೆ ಎದ್ದಿರುವ ಬಡವರ ಪರವಾಗಿ ಒಂದು ದಿನದ ರಾಷ್ಟ್ರೀಯ ಉಪವಾಸದ ನಂತರ ಅಲ್ಲಿಂದಾಚೆಗೆ, ಪವಿತ್ರ ಆರ್ಥಿಕತೆಯ ಸತ್ಯಾಗ್ರಹವು ಮಾಡು ಇಲ್ಲವೇ ಮಡಿ ಎಂಬ ಅರ್ಥದಲ್ಲಿ ತೀವ್ರಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಗ್ರಾಮಸೇವಾ ಸಂಘವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...