Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...