Homeಮುಖಪುಟರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ.

- Advertisement -
- Advertisement -

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದ ಡೆರೆಕ್ ಒ’ಬ್ರಿಯೆನ್ ಗಂಭೀರ ಟೀಕೆ ಮಾಡಿದ್ದಾರೆ.

ಕೊರೊನಾ ವೈರಸ್ ಲಾಕ್‌ಡೌನ್ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸುವ ಕೇಂದ್ರದ ತಂಡಕ್ಕೆ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರವೇಶಿಸದಂತೆ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆದಿದ್ದಾರೆ.

ತನಿಖಾ ತಂಡ ಆರು ಜನರಲ್ಲಿ ರಾಜ್ಯದ ಒಬ್ಬರನ್ನು ಅನುಮತಿಸಿದ ಕಾರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರವು ಕೇಂದ್ರದ ತಂಡವನ್ನು ಅನುಮತಿಸಲು ನಿರಾಕರಿಸಿದೆ. ಕೇಂದ್ರ ತಂಡಗಳನ್ನು ವಿರೋಧ ಪಕ್ಷಗಳು ಆಳುತ್ತಿರುವ ಮೂರು ರಾಜ್ಯಗಳು ಸೇರಿದಂತೆ ನಾಲ್ಕು ರಾಜ್ಯಗಳಿಗೆ ಕಳುಹಿಸಲಾಗಿದೆ.

ಕೇಂದ್ರವೂ ತಂಡಗಳನ್ನು ಮಹಾರಾಷ್ಟ್ರದ ಪುಣೆ, ರಾಜಸ್ಥಾನದ ಜೈಪುರ, ಕೋಲ್ಕತಾ, ಹೌರಾ, ಮಿಡ್ನಾಪುರ ಪೂರ್ವ, 24 ಪರಗಣಗಳು ಉತ್ತರ, ಡಾರ್ಜಿಲಿಂಗ್, ಕಾಲಿಂಪಾಂಗ್ ಮತ್ತು ಪಶ್ಚಿಮ ಬಂಗಾಳದ ಜಲ್ಪೈಗುರಿ ಮತ್ತು ಮಧ್ಯಪ್ರದೇಶದ ಇಂದೋರ್‌ಗೆ ಕಳುಹಿಸಲಾಗಿದೆ.

ಈ ಬಗ್ಗೆ ಬಂಗಾಳದ ಕೋಲ್ಕತ್ತಾದ ತಂಡದ ಸದಸ್ಯರೊಬ್ಬರು ತಮ್ಮ ಕೆಲಸವನ್ನು ಮಾಡಲು ಅನುಮತಿ ನೀಡಿಲ್ಲ ಎಂದು ಆರೋಪಿಸಿದ್ದಾರೆ. “ಇಂದು ಸ್ಥಳಗಳಿಗೆ ಭೇಟಿ ನೀಡಬಹುದೆಂದು ನಮಗೆ ಭರವಸೆ ನೀಡಲಾಯಿತಾದರೂ, ನಂತರ ಕೆಲವು ಸಮಸ್ಯೆಗಳಿವೆ ಹಾಗು ನಾವು ಹೊರಗೆ ಹೋಗುವಂತಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಕೋಲ್ಕತಾ ತಂಡದ ಮುಖ್ಯಸ್ಥ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ ಅಪೂರ್ವಾ ಚಂದ್ರ ಹೇಳಿದ್ದಾರೆ.

“ತಂಡಗಳು ಇತರ ರಾಜ್ಯಗಳಿಗೆ ಹೋಗಿವೆ, ಅಲ್ಲಿ ಅವರಿಗೆ ಸಂಪೂರ್ಣ ಬೆಂಬಲ ಸಿಗುತ್ತಿದೆ. ಅವರಿಗೆ ಪಶ್ಚಿಮ ಬಂಗಾಳದಂತೆಯೇ ನೋಟಿಸ್ ನೀಡಲಾಗಿದೆ ಆದರೆ ನಿನ್ನೆಯಿಂದ ಅವರಿಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂದ್ರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲ್ಕತ್ತಾಗೆ ತನಿಖಾ ತಂಡ ಆಗಮಿಸುವ ಬಗ್ಗೆ ಪತ್ರ ಬರೆದಿದ್ದರು. ಗೃಹ ಸಚಿವ ಅಮಿತ್ ಶಾ ಅವರು ಔಪಚಾರಿಕವಾಗಿ ಫೋನ್‌ನಲ್ಲಿ ತಿಳಿಸುವ ಮುನ್ನವೆ “ಜಿಲ್ಲೆಗಳ ಆಯ್ಕೆ ಮತ್ತು ಏಕಪಕ್ಷೀಯವಾಗಿ ತಂಡದ ಆಯ್ಕೆ ಮಾಡಿರುವುದು  ದುರದೃಷ್ಟಕರವಾಗಿದೆ” ಎಂದು ಅವರು ಕೆರಳಿದ್ದಾರೆ. ಹಾಗಾಗಿ ತಂಡದ ಆಗಮನ ಪ್ರೋಟೋಕಾಲ್ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ತಂಡದ ವೀಕ್ಷಣಾ ಪಟ್ಟಿಯಲ್ಲಿ ಬಂಗಾಳದ ಏಳು ಜಿಲ್ಲೆಗಳನ್ನು ಹೊಂದಿದೆ. ನಾಲ್ಕು ಜಿಲ್ಲೆಗಳಲ್ಲಿ ಮೂರು ಜಿಲ್ಲೆಗಳು 14 ದಿನದಿಂದ ಒಂದೇ ವೈರಸ್ ಪ್ರಕರಣ ವರದಿ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ, ತೆಲಂಗಾಣ ಮತ್ತು ದೆಹಲಿಗೆ ಕೇಂದ್ರದ ಯಾವುದೇ ತಂಡಗಳನ್ನು ಯಾಕೆ ಕಳುಹಿಸಲಿಲ್ಲ ಎಂದು ರಾಜ್ಯದ ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ ಪ್ರಶ್ನಿಸಿದೆ.

“ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿವೆ, ಕೇಂದ್ರವು ಕೆಲವು ರಾಜ್ಯಗಳ ವಿರುದ್ಧ ಹೋರಾಡುತ್ತಿದೆ” ಎಂದು ಆರೋಪಿಸಿ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯೆನ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಒಂದು ರಾಜ್ಯಕ್ಕೆ ಮಾತ್ರ ಕೇಂದ್ರವು ತಂಡವನ್ನು ಕಳುಹಿಸಿದೆ. ಅದು ಮಧ್ಯಪ್ರದೇಶವಾಗಿದೆ. ಕಳೆದ ಕೆಲವು ವಾರಗಳಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವ ಗುಜರಾತ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಅಲ್ಲಿ 1939 ಪ್ರಕರಣಗಳು ಹಾಗೂ 71 ಸಾವುಗಳು ಸೇರಿದಂತೆ ದೇಶದಲ್ಲಿ ಮೂರನೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳಿವೆ.

ಪರಿಸ್ಥಿತಿ ಗಂಭೀರವಾಗಿದೆ ಹಾಗೂ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗುತ್ತಿರುವ ಜಿಲ್ಲೆಗಳಿಗೆ ತಂಡಗಳನ್ನು ಕಳುಹಿಸಿದೆ ಎಂದು ಕೇಂದ್ರ ಹೇಳಿಕೊಂಡಿದೆ. ರಾಜ್ಯ ಆಡಳಿತವು ಕೊರೊನಾ ವೈರಸ್‌ ಪ್ರಕರಣಗಳನ್ನು ಕಡಿಮೆ ವರದಿ ಮಾಡಿದ ಉದಾಹರಣೆಗಳಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿ, ನಿರ್ದಿಷ್ಟವಾಗಿ ಬಂಗಾಳವನ್ನು ಉಲ್ಲೇಖಿಸದೆ ನಿಜವಾದ ಸಂಖ್ಯೆಯ ಕೊರೊನಾ ವೈರಸ್ ರೋಗಿಗಳನ್ನು ಮರೆಮಾಡಿದೆ ಎಂದು ಆರೋಪಿಸಲಾಗಿದೆ.

ಗೃಹ ಸಚಿವಾಲಯದ ಆಂತರಿಕ ಮೌಲ್ಯಮಾಪನವು ಬಂಗಾಳದಲ್ಲಿ ಕೊರೊನಾ ವೈರಸ್ ಸಾವಿನ ಸಂಖ್ಯೆ ವರದಿಯಾಗುವುದಕ್ಕಿಂತ ಹೆಚ್ಚಾಗಿದೆ ಎಂದು ಪರಿಗಣಿಸುತ್ತದೆ; ಸಾವಿನ ಕಾರಣವನ್ನು ತಪ್ಪಾಗಿ ವರದಿ ಮಾಡಲಾಗಿದೆಯೆಂದು ಅದು ಹೇಳಿದೆ.

ಲಾಕ್‌ಡೌನ್ ಕ್ರಮಗಳ ಅನುಷ್ಠಾನ, ಅಗತ್ಯ ಸರಕುಗಳ ಪೂರೈಕೆ, ಸಾಮಾಜಿಕ ದೂರ, ಆರೋಗ್ಯ ಮೂಲಸೌಕರ್ಯ, ಆರೋಗ್ಯ ವೃತ್ತಿಪರರ ಸುರಕ್ಷತೆ ಮತ್ತು ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಪರಿಹಾರ ಶಿಬಿರಗಳ ಪರಿಸ್ಥಿತಿಗಳ ಕುರಿತು ದೂರುಗಳ ಬಗ್ಗೆ ಅಂತರ್‌-ಸಚಿವಾಲಯದ ತಂಡಗಳು ಗಮನ ಹರಿಸಲಿವೆ ಎಂದು ಕೇಂದ್ರ ತಿಳಿಸಿದೆ.


ಇದನ್ನೂ ಓದಿ: ಒಡೆದು ಆಳುವವರಿಗೆ ನಮ್ಮ ಬೆಂಬಲ ಇಲ್ಲ: ಪಶ್ಚಿಮ ಬಂಗಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂತಹ ವಿಶಮ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....