Homeಮುಖಪುಟಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಭಾರತದಲ್ಲಿಯೇ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅದರ ವಿರುದ್ಧ ಲಕ್ಷಾಂತರ ಜನ ಹೋರಾಡುತ್ತಿದ್ದಾರೆ. ಮುಂಬೈ ಮೇಯರ್‌ ಕಿಶೋರಿ ಪೆಡ್ನೆಕರ್ ಅಂತಹವರ ಸಾಲಿಗೆ ಹೊಸ ಸೇರ್ಪಡೆಯಾಗಿದ್ದಾರೆ.

ಕೊರೊನಾ ರಾಜ್ಯದಲ್ಲಿ ಅತಿ ಹೆಚ್ಚಾಗಿ ವ್ಯಾಪಿಸುತ್ತಿದೆ. ಕೆಲವು ಡಾಕ್ಟರ್‌, ನರ್ಸ್ ಮತ್ತು ಪೊಲೀಸರು ಸಹ ಸೋಂಕಿಗೆ ಒಳಗಾಗಿದ್ದರು. ಹಲವರು ಕರ್ತವ್ಯಕ್ಕೆ ಹಾಜರಾಗಲು ಭಯಪಡುತ್ತಿದ್ದರು. ಇಂತಹ ಸಂಕಷ್ಟದ ಸಮಯದಲ್ಲಿ ಕೊರೊನಾ ವಿರುದ್ಧದ ಹೋರಾಟದಲ್ಲಿರುವವರಿಗೆ ಸ್ಫೂರ್ತಿ ತುಂಬಲು ಮೇಯರ್ ಪೆಡ್ನಕರ್‌ ಮಾಡಿದ್ದು ಇಷ್ಟೆ. ಹತಾಶೆ ಮತ್ತು ಅನಿಶ್ಚಿತತೆಯ ಸಮಯದಲ್ಲಿ, ಅವರು ತನ್ನ ಹಳೆಯ ನರ್ಸಿಂಗ್ ಸೂಟ್ ಅನ್ನು ಧರಿಸಿ ಆಸ್ಪತ್ರೆಗೆ ನಡೆದರು. ಅವರು ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ಸಿದ್ಧರಾದರು.

ಇದು ಉಳಿದ ನರ್ಸ್‌ ಮತ್ತು ವೈದ್ಯರುಗಳಿಗೆ ಪ್ರೇರಣೆ ನೀಡಿತು. ಅವರೆಲ್ಲರೂ ದೃಢವಾಗಿ ಕೆಲಸ ಮಾಡಲು ತೀರ್ಮಾನಿಸಿದರು. ಈ ಮಾದರಿ ಎಲ್ಲೆಡೆ ಹಬ್ಬಿತು.

ಇತ್ತೀಚೆಗೆ, ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಈ ಕಥೆಯನ್ನು ಇನ್‌ಸ್ಟಾಗ್ರಾಮ್ ಹಂಚಿಕೊಂಡರು. ಆ ಮೂಲಕ‌ ಅವರ ಕೆಲಸ ಮತ್ತು ಸಾರ್ವಜನಿಕ ಸೇವೆಯ ಬದ್ಧತೆಯನ್ನು ಅವರು ಶ್ಲಾಘಿಸಿದರು. “ಇಂದು ನಾವು ನಮ್ಮ ಮುಂಚೂಣಿಯ ಯೋಧರು, ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಿರುದ್ಧ ಹೋರಾಡಲು ಹೇಗೆ ಸಹಾಯ ಮಾಡುತ್ತಿದ್ದಾರೆ ಎಂಬ ಕಥೆಗಳನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ಅದೇ ರೀತಿ ನಾಯರ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಂದಿಗೆ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿರುವವರು ನಮ್ಮ ಮುಂಬೈನ ಮೇಯರ್‌ ಆಗಿದ್ದಾರೆ. ಅವರು ತಮ್ಮ ಹಳೆಯ ಉದ್ಯೋಗಕ್ಕೆ ಮರಳಿ ಈಗ ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಯಲ್ಲಿ ಇಚ್ಛಾಶಕ್ತಿಯಿಂದ ಅಲ್ಲಿ ರಾತ್ರಿ ಪಾಳಿ ಕೆಲಸ ಮಾಡಲಿದ್ದಾರೆ” ಎಂದು ಬರೆದರು!

View this post on Instagram

Who said we are short of people to fight Covid? While every one of us, as citizens, is doing our bit fighting covid by staying indoors, this person here, is @kishoripednekar ji. Currently the Mayor of Mumbai, she had started off her career as a nurse. Today as we here stories of how our frontline warriors, the medical staff, are helping us fight covid, she has donned on her original job description to stand side by side with the medical staff at Nair Hospital, now a designated covid hospital and will do the night shift there! There’s no less of such heroes and no less of the fighting spirit! Just till 48 hours ago, she was in self quarantine, absolutely safe but as a precaution since she was visiting every single hot spot and covid clinic from morning to night. Now, as she will serve the city and it’s people as the Mayor during the day and her night shift as medical staff at Nair Hospital begins tonight. Let’s pray for the safety and success of these heroes and many more like her, who are helping us defeat the virus!

A post shared by Aaditya Thackeray (@adityathackeray) on

ಕೊರೊನಾ ವಿರುದ್ಧ ಹೋರಾಡಲು ಸಿಬ್ಬಂದಿಗಳ ಕೊರತೆಯಿದೆ ಎಂದು ಯಾರು ಹೇಳಿದರು? ನಮ್ಮ ಮೇಯರ್‌ ಬೆಳಗ್ಗಿನಿಂದ ರಾತ್ರಿಯವರೆಗೂ ಎಲ್ಲಾ ಆಸ್ಪತ್ರೆಗಳಿಗೂ, ಹಾಟ್‌ಸ್ಪಾಟ್‌ಗಳಿಗೂ ಭೇಟಿ ನೀಡಿ ವಿಚಾರಿಸುತ್ತಿದ್ದಾರೆ. ಇವರ ಸುರಕ್ಷೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದು ಆದಿತ್ಯ ಠಾಕ್ರೆ ಬರೆದುಕೊಂಡಿದ್ದಾರೆ.

“ನಮ್ಮ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿದ್ದಾರೆ. ಅವರು ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರನ್ನು ಪ್ರೇರೇಪಿಸಲು ನಾನು ಅವರೊಂದಿಗೆ ನಿಲ್ಲಲು ಬಯಸುತ್ತೇನೆ ”
– ಕಿಶೋರಿ ಪೆಡ್ನೇಕರ್

ವರದಿಗಳ ಪ್ರಕಾರ, ಮೇಯರ್ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಗೆ ಭೇಟಿ ನೀಡಿ ದಾದಿಯರೊಂದಿಗೆ ಸಂವಹನ ನಡೆಸಿದರು. ಅವರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು, ಕೆಚ್ಚೆದೆಯ ಹೋರಾಟವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು, ಉನ್ನತ ಸಾಧಕರಿಗೆ ಮೇಯರ್ ಕಪ್ ನೀಡುವ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...