Homeಮುಖಪುಟವ್ಯಾಪಾರಕ್ಕೆ ಬಂದರೆ ಹೊಡೆದು ಕಳಿಸುತ್ತೇನೆ : ಮುಸ್ಲಿಂ ವ್ಯಾಪಾರಿಗೆ ಯುಪಿ ಶಾಸಕ ಧಮಕಿ

ವ್ಯಾಪಾರಕ್ಕೆ ಬಂದರೆ ಹೊಡೆದು ಕಳಿಸುತ್ತೇನೆ : ಮುಸ್ಲಿಂ ವ್ಯಾಪಾರಿಗೆ ಯುಪಿ ಶಾಸಕ ಧಮಕಿ

- Advertisement -
- Advertisement -

ಉತ್ತರ ಪ್ರದೇಶದ ಚಾರ್ಖಾರಿ ಕ್ಷೇತ್ರದ ಬಿಜೆಪಿ ಶಾಸಕ ಬ್ರಿಜ್ ಭೂಷಣ್, ಮುಸ್ಲಿಂ ತರಕಾರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿ, ವ್ಯಾಪಾರ ಮಾಡದಂತೆ ಎಚ್ಚರಿಕೆ ನೀಡುವ ವೀಡಿಯೊವೊಂದು ವೈರಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಬರ್ಹಜ್‌ನ ಬಿಜೆಪಿ ಶಾಸಕ ಮುಸ್ಲಿಮರಿಂದ ತರಕಾರಿ ಖರೀದಿಸಬೆಡಿ ಎಂದು ವಿವಾದಕ್ಕೆ ಸಿಲುಕಿದ್ದರು.

“ಈ ಪ್ರದೇಶಕ್ಕೆ ಮತ್ತೆ ಬರಬೇಡ, ಇಲ್ಲದಿದ್ದರೆ ಹೊಡೆದು ಸರಿಪಡಿಸುತ್ತೇವೆ” ಎಂದು ಬ್ರಿಜ್ ಭೂಷಣ್ ರಜಪೂತ್ ಮುಸ್ಲಿಂ ತರಕಾರಿ ವ್ಯಾಪಾರಿಗೆ ಆತನ ಚಿಕ್ಕ ಮಗನ ಎದುರೇ ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ. ತರಕಾರಿ ವ್ಯಾಪಾರಿ ತಾನು ಹಿಂದು ಎಂದು ಸುಳ್ಳು ಹೆಸರು ಹೇಳಿದ್ದಾನೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಹಾಕಿ ಅಲ್ಲಿಂದ ಓಡಿಸಿದ್ದಾರೆ.

 

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಬ್ರಿಜ್ ಭೂಷಣ್, ವಿಡಿಯೊದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ನಾನೆ ಎಂದು ಒಪ್ಪಿಕೊಂಡಿದ್ದಾರೆ. “ಅವರು ಸುಳ್ಳು ಹೇಳಿದ್ದರಿಂದ ನಾನು ಖಂಡಿಸಿದೆ ಹಾಗೂ ಅವರು ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಲಿಲ್ಲ” ಎಂದು ಶಾಸಕ ಹೇಳಿದ್ದಾರೆ. ಆದರೆ ವ್ಯಾಪಾರಿಯು ತನ್ನ ಮುಖಕ್ಕೆ ಕಪ್ಪು ಮುಖವಾಡವನ್ನು ಧರಿಸಿದ್ದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

ಅಗತ್ಯ ಸರಕುಗಳ ಪೂರೈಕೆಯಲ್ಲಿ ತೊಡಗಿರುವವರಿಗೆ ಪಾಕಿಸ್ತಾನ ಅಥವಾ ಗುಪ್ತಚರರೊಂದಿಗೆ ಸಂಬಂಧವಿಲ್ಲ ಎಂದು ಖಚಿತಪಡಿಸಿಕೊಂಡ ನಂತರ ಸರ್ಕಾರವು ಗುರುತಿನ ಚೀಟಿಗಳನ್ನು ನೀಡಬೇಕು ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ


ಇದನ್ನೂ ಓದಿ:`ವೈರಸ್’ ಕಾರಣಕ್ಕೆ ಹೊರಗಿಟ್ಟ ಮುಸ್ಲಿಮರನ್ನು ಬಿಟ್ಟು ನಮ್ಮೂರು ಬದುಕೀತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...

SIR ವಿರೋಧಿ ಹೋರಾಟಕ್ಕೆ ಧುಮುಕಿದ ರೈತ, ದಲಿತ ಸಂಘಟನೆಗಳು : ಅ.23ರಂದು ರಾಜ್ಯದಾದ್ಯಂತ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ತೀರ್ಮಾನಗಳನ್ನು ವಿರೋಧಿಸಿ ಅಕ್ಟೋಬರ್ 23ರಂದು ರಾಜ್ಯದಾದ್ಯಂತ ಬೃಹತ್ ಜನತಾ ಮೆರವಣಿಗೆ ಮತ್ತು 'ಜಂತರ್ ಮಂತರ್' ಮಾದರಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಎಸ್ಐಆರ್ ವಿರೋಧಿ...

ಸೌರವ್ ದಾಸ್ – ಆಶುತೋಶ್ ರಾಂಕಾ ಬಿಡುಗಡೆ ಕುರಿತು ಸಿಗದ ಸ್ಪಷ್ಟತೆ

ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಸೋಮವಾರ ಮಧ್ಯಾಹ್ನ ಹೊಸ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ಮುಂದೆ ಹಾಜರುಪಡಿಸಬೇಕಿತ್ತು....

ಅಸ್ಸಾಂನಲ್ಲಿ ಎರಡು ದಿನಗಳಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಒಕ್ಕಲೆಬ್ಬಿಸಲಾಗಿದೆ: 10ಕ್ಕೂ ಹೆಚ್ಚು ಮಸೀದಿಗಳ ಧ್ವಂಸ

ಅಸ್ಸಾಂ: ಅಸ್ಸಾಂನ ಬಿಜೆಪಿ ನೇತೃತ್ವದ ಸರ್ಕಾರ ಎರಡು ದಿನಗಳ ಅತಿಕ್ರಮಣ ವಿರೋಧಿ ತೆರವು ಕಾರ್ಯಾಚರಣೆಯಲ್ಲಿ 1,100ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದು, 10ಕ್ಕೂ ಹೆಚ್ಚು ಮಸೀದಿಗಳನ್ನು ಧ್ವಂಸಗೊಳಿಸಿದೆ. ನಾಗಾಂವ್, ಗೋಲಾಘಾಟ್ ಮತ್ತು ಹೊಜೈ...

ಸುಳ್ಳು ಅಫಿಡವಿಟ್‌ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಮತದಾರರು ಖಾಸಗಿ ದೂರು ದಾಖಲಿಸಬಹುದು : ಸುಪ್ರೀಂ ಕೋರ್ಟ್

'ಜನತಾ ಪ್ರಾತಿನಿಧ್ಯ ಕಾಯ್ದೆ 1951'ರ ಸೆಕ್ಷನ್ 125A ಅಡಿಯಲ್ಲಿ ಬರುವ ಅಪರಾಧಗಳಿಗೆ ಸಂಬಂಧಿಸಿದಂತೆ, ಚುನಾಯಿತ ಅಭ್ಯರ್ಥಿಗಳು ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅಥವಾ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ, ಖಾಸಗಿ...

ಉತ್ತರ ಪ್ರದೇಶ| ಜಾಹೀರಾತು ವಿವಾದ; ಹಿಟ್ಟಿನ ಗಿರಣಿಯಲ್ಲಿ ಹಲ್ಲೆಗೊಳಗಾಗಿದ್ದ ಹಿರಿಯ ಪತ್ರಕರ್ತ ಸಾವು

ಉತ್ತರ ಪ್ರದೇಶದ ಹಪುರ್‌ನಲ್ಲಿರುವ ಹಿಂದಿ ದಿನಪತ್ರಿಕೆ 'ದೈನಿಕ್ ಜನ್ವಾಣಿ'ಯ ಪತ್ರಕರ್ತರೊಬ್ಬರು ಹಿಟ್ಟಿನ ಗಿರಣಿಯಲ್ಲಿ ಭಾಣುವಾರ ನಡೆದ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ. ಜಾಹೀರಾತು ಕೇಳಲು ತೆರಳಿದ್ದ ವೇಳೆ ಅವರನ್ನು ನಕಲಿ ಪತ್ರಕರ್ತ ಎಂದು ಆರೋಪಿಸಿ ಹಲ್ಲೆ...

ಗ್ಯಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ : ಬಾಂಡ್ ಸಲ್ಲಿಸುವಂತೆ ಪೊಲೀಸರಿಂದ ನೋಟಿಸ್; ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ವಿಚಾರಣೆಯ ಅವಧಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಒಬ್ಬರ ಜಾಮೀನಿನೊಂದಿಗೆ (ಶ್ಯೂರಿಟಿ) 10,000 ರೂ. ಮೌಲ್ಯದ ಬಾಂಡ್ (ಮುಚ್ಚಳಿಕೆ ಪತ್ರ) ಸಲ್ಲಿಸುವಂತೆ ದೆಹಲಿ ಪೊಲೀಸರು ತಮಗೆ ನೀಡಿದ್ದ ನೋಟಿಸ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿ ಸಂಘಟನೆ...

ಜೆಎನ್‌ಯು ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ರಾಷ್ಟ್ರಪತಿಗಳಿಗೆ ಪತ್ರ ಬರೆದ ಸಿಪಿಐ(ಎಂ) ಸಂಸದ ಜಾನ್ ಬ್ರಿಟಾಸ್

ತಮ್ಮ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ವಿಚಾರದಲ್ಲಿ ತುರ್ತು ಮಧ್ಯಪ್ರವೇಶ ಕೋರಿ ಕಮ್ಯೂನಿಸ್ಟ್...

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ವಶಕ್ಕೆ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಲ್ಲಿ ಇಬ್ಬರು ಪುರುಷರು ಮತ್ತು 17 ವರ್ಷದ ಅಪ್ರಾಪ್ತ ವಯಸ್ಕನನ್ನು ಪೊಲೀಸರು ವಶಕ್ಕೆ...