HomeಮುಖಪುಟFact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

Fact Check: ಬೀದಿಗಿಳಿದು ಸಿದ್ದು, ಡಿಕೆಶಿ ಪ್ರತಿಭಟನೆ? ಪೋಸ್ಟ್‌ ಕಾರ್ಡ್‌ ಹೇಳಿದ್ದು ನಿಜವೇ?

- Advertisement -
- Advertisement -

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಬೇಕಿತ್ತೇ? ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಎಷ್ಟು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ. ನೀವೂ ಸರ್ಕಾರದ ಜೊತೆ ಸೇರಿ ಒಗ್ಗಟ್ಟಾಗಿ ಹೋರಾಡುವುದು ಬಿಟ್ಟು ಈ ರೀತಿಯಾಗಿ, ಈ ಸಮಯದಲ್ಲಿ ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯೇ? ಎಂದು ಪೋಸ್ಟ್‌ ಕಾರ್ಡ್‌ ಪೋಸ್ಟ್‌ ಮಾಡಿ ಹರಡಿದೆ.

ಫ್ಯಾಕ್ಟ್‌ಚೆಕ್

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಮೇ 1 ರಂದು ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಮೇ 2 ರಂದು ಒಂದೇ ದರ (ಸಿಂಗಲ್‌ ಫೇರ್‌) ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಭಿಕ್ಷೆ ಬೇಡಿಯಾದರೂ ಸರಿಯೇ ನಾವು ಹಣ ಕೊಡುತ್ತೇವೆ, ವಲಸೆ ಕಾರ್ಮಿಕರಿಗೆ ಉಚಿತವಾಗಿ ಅವರ ಊರಿಗೆ ಕಳಿಸಿ ಎಂದು ಮನವಿ ಮಾಡಿದರು.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ನಂತರ ಮೇ 3 ರಂದು ವಲಸೆ ಕಾರ್ಮಿಕರ ಬಸ್‌ ಚಾರ್ಜ್‌‌ಗಾಗಿ ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಆ ಚೆಕ್‌ ಅನ್ನು ಕೆಎಸ್‌ಆರ್‌ಟಿಸಿ ಎಂಡಿಯವರಿಗೆ ಹಸ್ತಾಂತರಿಸಲು ಇಂದು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇನ್ನಿತರ ನಾಯಕರು ಮೆಜೆಸ್ಟಿಕ್‌ಗೆ ನಡೆದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಉಚಿತ ಪ್ರಯಾಣಕ್ಕೆ ಅವಕಾಶಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆ ಎಸ್ ಆರ್ ಟಿಸಿ ಬಸ್‍ಗಳಲ್ಲಿ ಬೆಂಗಳೂರು…

Posted by Chief Minister of Karnataka on Saturday, May 2, 2020

ತದನಂತರ ಕಾಂಗ್ರೆಸ್‌ ಮುಖಂಡರು ಅಲ್ಲಿಯೇ ಪಕ್ಕದಲ್ಲಿದ್ದ ಬಸ್‌ನಿಲ್ದಾಣಕ್ಕೆ ತೆರಳಿ ಕಾರ್ಮಿಕರೊಡನೆ ಮಾತನಾಡಿದರು. ಒಂದಷ್ಟು ಜನರಿಗೆ ಊಟದ ವ್ಯವಸ್ಥೆ ಮಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದರು. ಆದರೆ ಆ ಸಮಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌‌ರವರು ಯಾವುದೇ ಪ್ರತಿಭಟನೆ ಮಾಡಲಿಲ್ಲ. ಈ ಕುರಿತು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ – ಕರ್ನಾಟಕ ಮತ್ತು ಸಿದ್ದರಾಮಯ್ಯನವರ ಫೇಸ್‌ಬುಕ್‌ ಪುಟದಲ್ಲಿ ಪೂರ್ಣ ಲೈವ್ ಇದೆ.

ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದರು

Posted by Indian National Congress – Karnataka on Saturday, May 2, 2020

ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟಿಸಿದ್ದೇಕೆ?

ಆದರೆ ತದನಂತರ ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಏಕೆಂದರೆ ಆನೇಕಲ್‌ ಕ್ಷೇತ್ರದ ಬಿಜೆಪಿ ಮುಖಂಡರದ ಮುನಿರಾಜು ಎಂಬುವವರು ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಡುವ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ತನ್ನ ಮತ್ತು ಬಿಜೆಪಿಯ ಚಿತ್ರ ಹಾಕಿಸಿ ತಾನೇ ದಾನ ಕೊಡುತ್ತಿರುವುದಾಗಿ ಪೋಸು ಕೊಟ್ಟಿದ್ದಾರೆ. ಈ ಕುರಿತು ರೆಡ್‌ ಹ್ಯಾಂಡಾಗಿ ಸಿಕ್ಕಬಿದ್ದಿದ್ದಾರೆ. ಇದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೂ ಕಾರ್ಮಿಕರ ವಿಚಾರಕ್ಕೂ ಸಂಬಂಧವಿಲ್ಲ. ಈ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿಲ್ಲ. ವಿಡಿಯೋ ನೋಡಿ.

Posted by Indian National Congress – Karnataka on Sunday, May 3, 2020


ಇದನ್ನೂ ಓದಿ: ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...