Homeಮುಖಪುಟಸೂರತ್‌ನಲ್ಲಿ ವಲಸೆ ಕಾರ್ಮಿಕರಿಂದ ಪ್ರತಿಭಟನೆ; ಪೊಲೀಸರಿಂದ ಆಶ್ರುವಾಯು ಸಿಡಿತ

ಸೂರತ್‌ನಲ್ಲಿ ವಲಸೆ ಕಾರ್ಮಿಕರಿಂದ ಪ್ರತಿಭಟನೆ; ಪೊಲೀಸರಿಂದ ಆಶ್ರುವಾಯು ಸಿಡಿತ

- Advertisement -
- Advertisement -

ಮನೆಗೆ ತಲುಪಲಾಗದೆ ಹತಾಶರಾಗಿದ್ದ ವಲಸೆ ಕಾರ್ಮಿಕರ ಗುಂಪು ಗುಜರಾತಿನ ಸೂರತ್‌ನಲ್ಲಿ ಆಕ್ರೋಶಗೊಂಡು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದಾರೆ.

ಗುಜರಾತಿನ ಸೂರತ್ ನ ಕೊಡೊದರ, ವರೇಲಿಯ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆಯುತ್ತಿದೆ ಎಂದು ವರದಿಯಾಗುತ್ತಿದೆ. ಟ್ರಾವೆಲ್ ಪಾಸ್ ಗಳನ್ನು ಅನುಮತಿಸಿದರೂ, ಅಧಿಕಾರಿಗಳ ಅಸಮರ್ಥ ನಿರ್ವಹಣೆಯಿಂದಾಗಿ ವಲಸೆ ಕಾರ್ಮಿಕರು ನಿರಾಶೆಗೊಂಡಿದ್ದಾರೆ ಎಂದು ವರದಿಯಾಗಿದೆ.

ಆಕ್ರೋಶಗೊಂಡ ಕಾರ್ಮಿಕರು ಬೀದಿಯಲ್ಲಿ ಜಮಾಯಿಸಿ, ಗುಂಪಾಗಿ ನಿಂತು ಘೋಷಣೆ ಕೂಗತೊಡಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ವಲಸಿಗರು ಕಲ್ಲುಗಳನ್ನು ಎತ್ತಿಕೊಂಡು ಎಸೆಯುವ ಹಲವಾರು ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡುತ್ತಿದೆ.

ಕಾರ್ಮಿಕರು ತಮ್ಮ ಊರಿಗೆ ಹಿಂತಿರುಗಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಟ್ವಿಟ್ಟರ್‌ನಲ್ಲಿ ಹಲವಾರು ಜನ ಹೇಳುತ್ತಿದ್ದಾರೆ.

ಏಪ್ರಿಲ್ 28 ರಂದು ಕೂಡಾ ಸೂರತ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಲು ಯತ್ನಿಸುತ್ತಿದ್ದ ಭದ್ರತಾ ಸಿಬ್ಬಂದಿಯ ಮೇಲೆ ಕೆಲವು ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ, ಕಾರ್ಮಿಕರು ಡೈಮಂಡ್ ಬೋರ್ಸ್‌ನ ಕಚೇರಿಗೆ ಕಲ್ಲು ಎಸೆಯಲಾಗಿತ್ತು.

ಕಾರ್ಮಿಕ ದಿನವಾದ ಮೇ 1 ರಂದು, ಸಿಕ್ಕಿಕೊಂಡ ವಲಸಿಗರು, ವಿದ್ಯಾರ್ಥಿಗಳು ಇತ್ಯಾದಿಗಳನ್ನು ತಮ್ಮ ಮನೆಗಳಿಗೆ ಕರೆದೊಯ್ಯಲು ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತಾದರೂ, ವಲಸಿಗರಿಂದಲೇ ಶುಲ್ಕ ವಿಧಿಸುವ ಕೇಂದ್ರದ ನೀತಿಯನ್ನು ಪ್ರತಿಪಕ್ಷಗಳು ಟೀಕೆ ಮಾಡಿವೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ


ವಿಡಿಯೊ ನೋಡಿ: ಕೊರೊನಾದ ಜೊತೆಗೂ ಮೂರ್ಖತನವನ್ನೂ ಓಡಿಸೋಣ; ಮಾನವೀಯತೆಯನ್ನಲ್ಲ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...