Homeಮುಖಪುಟಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

- Advertisement -
- Advertisement -

ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ.
ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ ತಾವು ಬಲ್ಲಿರಿ. ಈ ನಡುವೆಯೇ
ಈಗ ತಾನೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

ಕೃಷಿಕರು ತಮ್ಮ ಕೃಷಿ ಚಟುವಟಿಕೆಗಾಗಿ ತಮ್ಮಲ್ಲಿ ಇದ್ದ ಒಂದಷ್ಟು ಒಡವೆಗಳನ್ನು ಬ್ಯಾಂಕ್ ಗಳಲ್ಲಿ ಇಟ್ಟು ಸರ್ಕಾರ ನೀಡಿದ್ದ ಅಗ್ರಿಗೋಲ್ಡ್ ಲೋನ್ ಅಡಿಯಲ್ಲಿ ನಾಲ್ಕು ಪರ್ಸೆಂಟ್ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದರು. ಆದರೆ ತಮ್ಮ ಸರ್ಕಾರ ಈ ಅಗ್ರಿಗೋಲ್ಡ್ ಸಹಾಯ ಯೋಜನೆಯನ್ನು ರದ್ದು ಪಡಿಸಿರುವುದರಿಂದಾಗಿ ಈಗ ವಾರ್ಷಿಕ ಶೇ.10.45 ದರದಲ್ಲಿ ಚಿನ್ನ ಅಡವಿಡಬೇಕಿದೆ.

ಈಗಾಗಲೇ ರಾಜ್ಯದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಅಗ್ರಿಗೋಲ್ಡ್ ಯೋಜನೆಯಡಿ ಚಿನ್ನ ಅಡವಿಟ್ಟಿರುವ ರೈತರಿಗೆ ಈಗಿನ 10.45 ದರದಲ್ಲಿ ಬಡ್ಡಿ ವಿಧಿಸಿರುವುದರಿಂದ ಅನೇಕ ರೈತರಿಗೆ ಅದಕ್ಕೆ ಅಷ್ಡು ಬಡ್ಡಿ ಪಾವತಿ ಮಾಡಿ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲಾಗದ ದುಃಸ್ಥಿತಿಯಲ್ಲಿ ಇದ್ದಾರೆ.

ರೈತಪರವಾಗಿ ಯೋಚಿಸುವ ತಾವು, ಹಿಂದೆ ಇದ್ದ ಅಗ್ರಿಗೋಲ್ಡ್ ಯೋಜನೆಯನ್ನು ಮತ್ತೆ ತರಬೇಕು. ಇದು ಸ್ವಾವಲಂಭಿ ರೈತರಿಗೆ ಒಳ್ಳೆಯ ಮಾರ್ಗವಾಗಿದೆ.

ಈಗಾಗಲೇ 10.45% ಇರುವ ಬಡ್ಡಿದರವನ್ನು ದಯಮಾಡಿ ರದ್ದುಗೊಳಿಸಿ ಹಿಂದಿನ 4% ದರದ ಬಡ್ಡಿಯಲ್ಲಿ ರೈತರಿಂದ ಬಡ್ಡಿ ವಸೂಲಿ ಮಾಡಲು ಆದೇಶ ನೀಡಿದರೆ ಲಕ್ಷಾಂತರ ರೈತರ ಕೋಟ್ಯಾಂತರ ರೂಪಾಯಿಯ ಚಿನ್ನ ಅವರ ಕನಸಿನ ಚಿನ್ನವನ್ನು ಅವರು ಬಿಡಿಸಿಕೊಳ್ಳಲು ಸಹಾಯವಾಗುತ್ತದೆ.

ಅನೇಕರು ತಮ್ಮ ಕೃಷಿ ಸಾಲಕ್ಕಾಗಿ ತಮ್ಮ ತಾಯಿಯ, ಸೋದರಿಯ, ಮಡದಿಯ ಇಲ್ಲವೇ ಮಕ್ಕಳ ತಾಳಿಸಹಿತವಾದ ಒಡವೆಗಳನ್ನು ಅಡಮಾನ ಮಾಡಿರುತ್ತಾರೆ. ಅವರ ನೆರೆವಿಗೆ ನಿಲ್ಲಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಈಗಾಗಲೇ ಆಂದ್ರಪ್ರದೇಶ ಸರ್ಕಾರ ರೈತರ ಚಿನ್ನದ ಮೇಲಿನ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ, ರೈತರಿಗೆ ನರೇಗ ಯೋಜನೆಯಲ್ಲಿನ ಕೂಲಿಯನ್ನೂ ಹೆಚ್ಚು ಮಾಡಿದೆ, ಈಗ ರೈತರ ಹಿತಕ್ಕಾಗಿ ಕೃಷಿ ಚಟುವಟಿಕೆ ನಡೆಸುವುದಕ್ಕೂ ಲಾಕ್ ಡೌನ್ ಸಡಿಲಗೊಳಿಸಿದೆ.

ಇದೆಲ್ಲವೂ ರಾಜ್ಯ ಸರ್ಕಾರದ ರೈತಸ್ನೇಹಿ ನಡೆಗಳಾಗಿವೆ ಎಂಬುದನ್ನು ನೆನೆಯುತ್ತಲೇ ಬ್ಯಾಂಕುಗಳಲ್ಲಿ ರೈತರ ಚಿನ್ನದ ಮೇಲಿನ ಅಧಿಕ ಬಡ್ಡಿದರವನ್ನು ರದ್ದುಗೊಳಿಸಿ ಹಿಂದಿನ ಪದ್ದತಿಯಂತೆ 4% ಬಡ್ಡಿದರದಲ್ಲಿ ಅಗ್ರಿಗೋಲ್ಡ್ ಯೋಜನೆಯನ್ನು ಮುಂದುವರೆಸಲು ಮನವಿ ಮಾಡುತ್ತೇವೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ: 1,610 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ ಯಡಿಯೂರಪ್ಪ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...