Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...