Homeಮುಖಪುಟಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

ಎಂಎಸ್ಎಂಇಗಳಿಗೆ ಸಾಲ ನೀಡುವವರು ಮತ್ತು ಸಾಲಗಾರರು ಯಾರು: ಪಿ. ಚಿದಂಬರಂ ವ್ಯಂಗ್ಯ

- Advertisement -
- Advertisement -

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಯ (ಎಂಎಸ್ಎಂಇಗಳಿಗೆ) ಕುರಿತು ಇಬ್ಬರು ಕೇಂದ್ರ ಸಚಿವರ ವಿರೋಧಾಭಾಸದ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಪೋಸ್ಟ್ ಮಾಡಿದ ಎರಡು ಟ್ವೀಟ್‌ಗಳಲ್ಲಿ ಮೊದಲನೆಯದಾಗಿ, ಎಂಎಸ್‌ಎಂಇ ಸಚಿವ ನಿತಿನ್ ಗಡ್ಕರಿ ಸುದ್ದಿ ಚಾನೆಲ್ ಸಿಎನ್‌ಬಿಸಿ-ಟಿವಿ 18 ಗೆ ನೀಡಿದ ಸಂದರ್ಶನದಲ್ಲಿ ಎಂಎಸ್‌ಎಂಇಗಳಿಗೆ 5 ಲಕ್ಷ ಕೋಟಿ ರೂಗಳನ್ನು ಸರ್ಕಾರ ನೀಡುತ್ತಿರುವುದಾಗಿ ಹೇಳಿದ್ದಾರೆ. ನಂತರ, 45 ಲಕ್ಷ ಎಂಎಸ್‌ಎಂಇಗಳಿಗೆ ಮೇಲಾಧಾರ ರಹಿತ ಸಾಲದಲ್ಲಿ 3 ಲಕ್ಷ ಕೋಟಿ ರೂ ನೀಡುತ್ತಿರುವದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇವರಿಬ್ಬರಲ್ಲಿ ಯಾರನ್ನು ನಂಬೋಣ ಎಂಬುದು ಚಿದಂಬರಂರವರ ಪ್ರಶ್ನೆಯಾಗಿದೆ.

“ಸರ್ಕಾರಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳು ಎಂಎಸ್ಎಂಇಗಳಿಗೆ ಪಾವತಿಸದ ಬಾಕಿ 5 ಲಕ್ಷ ಕೋಟಿ ರೂ. ಬಾಕಿ ಇದೆ ಎಂದು ಸಚಿವ ಗಡ್ಕರಿ ಹೇಳುತ್ತಾರೆ. 45 ಲಕ್ಷ ಎಂಎಸ್ಎಂಇಗಳಿಗೆ ಮೇಲಾಧಾರ ಉಚಿತ ಸಾಲವನ್ನು 3 ಲಕ್ಷ ಕೋಟಿ ರೂ. ನೀಡುವುದಾಗಿ ಸಚಿವ ಸೀತಾರಾಮನ್ ಹೇಳುತ್ತಾರೆ. ಆದ್ದರಿಂದ, ಸಾಲ ನೀಡುವವರು ಯಾರು ಮತ್ತು ಸಾಲಗಾರ ಯಾರು?!” ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.

“ಇಬ್ಬರು ಮಂತ್ರಿಗಳು ಮೊದಲು ತಮ್ಮ ಲೆಕ್ಕಗಳನ್ನು ಇತ್ಯರ್ಥಪಡಿಸಿಕೊಳ್ಳಲಿ ನಂತರ ಸರ್ಕಾರದ ‘ಸಹಾಯ’ ಇಲ್ಲದೆ ಎಂಎಸ್‌ಎಂಇಗಳು ತಮ್ಮನ್ನು ಉಳಿಸಿಕೊಳ್ಳುತ್ತಾರೆ” ಎಂದು ಮಾಜಿ ಹಣಕಾಸು ಸಚಿವರು ವ್ಯಂಗ್ಯವಾಡಿದ್ದಾರೆ.

ಕಳೆದ ವಾರ ಸಚಿವ ಗಡ್ಕರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಇತರ ಕೈಗಾರಿಕೆಗಳಿಂದ ಎಂಎಸ್‌ಎಂಇಗಳಿಗೆ ನೀಡಬೇಕಿದ್ದ ಬಾಕಿ “ತುಂಬಾ ಹೆಚ್ಚಾಗಿದೆ” ಎಂದಿದ್ದರಲ್ಲದೆ, ಇಂತಹ ಬಾಕಿ ಮೊತ್ತದ ಪರಿಣಾಮವಾಗಿ ಎಂಎಸ್‌ಎಂಇಗಳು ತನ್ನನ್ನು ಉಳಿಸುಕೊಳ್ಳುವುದಕ್ಕೆ ಹೆಣಗಾಡುತ್ತಿವೆ ಎಂದು ಹೇಳಿದ್ದರು.

ಚಿದಂಬರಂ ಅವರ ಟ್ವೀಟ್‌ಗಳು ಎರಡು ಸಚಿವರ ಹೇಳಿಕೆಗಳಲ್ಲಿನ ವಿರೋಧಾಭಾಸವನ್ನು ಸೂಚಿಸುತ್ತಿದೆ.

ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್‌ನ ವಿತರಣೆಯನ್ನು ವಿವರಿಸುತ್ತಾ ನಿರ್ಮಲಾ ಸೀತಾರಾಮನ್ ಹಲವಾರು ಪ್ರಕಟಣೆಗಳನ್ನು ಮಾಡಿದ್ದಾರೆ.


ಓದಿ: ಮೋದಿಯವರ 20 ಲಕ್ಷ ಕೋಟಿ ರೂ ಪ್ಯಾಕೇಜ್‌ನಲ್ಲಿ 65% ಈ ಮೊದಲೇ ಘೋಷಿಸಿದ್ದು ಸೇರಿದೆ!


ವಿಡಿಯೋ ನೋಡಿ: ಬಿಜೆಪಿಯೇನೋ ದ್ರೋಹ ಮಾಡಿತು; ಆದರೆ ಕಾಂಗ್ರೆಸ್ಸೇಕೆ ಕೈ ಬಿಟ್ಟಿತು? ಸದ್ದು…. ಈ ಸುದ್ದಿಗಳೇನಾದವು? – 09 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...