ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರ ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ನಿರ್ಧರಿಸಿದಂತಿದೆ. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಕಾಯಿದೆಗಳ ರದ್ದು ಎಷ್ಟು ಸರಿ? – ಡಾ.ಚಂದ್ರಪೂಜಾರಿ
ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಬೇಕು. ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ನಡುವೆ ಉತ್ತರ ಪ್ರದೇಶ ಸರ್ಕಾರವು ಹಲವು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದು ಕೆಲಸದ ಅವಧಿಯನ್ನು 8 ಗಂಟೆಯಿಂದ 12 ಗಂಟೆಗಳಿಗೆ ಹೆಚ್ಚಿಸಿತ್ತು. ಕಾರ್ಮಿಕರು ಮತ್ತು ವಿರೋಧ ಪಕ್ಷಗಳಿಂದ ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ಆ ಆದೇಶವನ್ನು ಯುಪಿ ಸರ್ಕಾರ ವಾಪಸ್ ಪಡೆದುಕೊಂಡಿದೆ.
ಇದನ್ನೂ ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್. ಬಾಲನ್


