Homeಚಳವಳಿಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ಕಾರ್ಮಿಕರು, ರೈತರ ಬದುಕಿನೊಂದಿಗೆ ಚೆಲ್ಲಾಟವಾಡದಿರಿ: ಕಾರ್ಮಿಕ ಮುಖಂಡರ ಒತ್ತಾಯ

ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

- Advertisement -
- Advertisement -

ಮುಖ್ಯಮಂತ್ರಿಗಳೇ ಕೇಂದ್ರದ ಒತ್ತಡಕ್ಕೆ ಮಣಿದು ಕಾರ್ಮಿಕರು ಹಾಗೂ ರೈತರ ಬದುಕಿನ ಜೊತೆ ಚೆಲ್ಲಾಟವಾಡದಿರಿ ಎಂದು ರೈತ ಹಾಗೂ ಕಾರ್ಮಿಕ ಮುಖಂಡರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಸಂಘಟನೆ, ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, ರೈತ ಹಾಗೂ ದುಡಿಯುವ ಜನರ ಬದುಕನ್ನು ಅತಂತ್ರಗೊಳಿಸುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯಂತಹ ಕೇಂದ್ರದ ಪ್ರಸ್ತಾಪಗಳಿಗೆ ಒಪ್ಪದೆ, ಅವುಗಳನ್ನು ಕೈ ಬಿಡಬೇಕು ಎಂದು ಹತ್ತಾರು ಸಂಘಟನೆಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸಿವೆ.

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಜೊತೆಗೂಡಿ ಕೇಂದ್ರ ಸರ್ಕಾರದ ವಿರುದ್ದ ಮೇ 20 ರಿಂದ 27ರ ತನಕ “ಶ್ರಮಿಕ ಹಕ್ಕು ಅಭಿಯಾನ”ವನ್ನು ಹಮ್ಮಿಕೊಂಡಿದ್ದು, ಮೇ 22 ರಂದು ಅಖಿಲ ಭಾರತ ಕಾರ್ಮಿಕರ ಹೋರಾಟ ಮತ್ತು ಮೇ 27ರಂದು ಅಖಿಲ ಭಾರತ ರೈತರ ಹೋರಾಟಗಳು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಓದಿ: ಕಾರ್ಮಿಕ ಕಾಯ್ದೆ ತಿದ್ದುಪಡಿಗಿದೆ ಹುನ್ನಾರದ ಇತಿಹಾಸ : ಎಸ್‌. ಬಾಲನ್


ಪತ್ರಿಕಾ ಹೇಳಿಕೆಯಲ್ಲಿ, “ಕೊರೋನಾ ಪಿಡುಗಿನ ಸಂಕಷ್ಟಗಳಿಂದ ಈಗಾಗಲೇ ದುಡಿಯುವ ಜನರು ತತ್ತರಿಸಿಹೋಗಿದ್ದರೆ. ವಲಸೆ ಕಾರ್ಮಿಕರ ಕಣ್ಣೀರು ನಿಮ್ಮ ಕಣ್ಣಿಗೆ ಬಿದ್ದಿದೆಯೋ ಇಲ್ಲವೋ ಗೊತ್ತಿಲ್ಲ. ಸರಿಯಾದ ಊಟವಿಲ್ಲದ ಮಕ್ಕಳ ಆಕ್ರಂದನವಾದರೂ ಕೇಳಿಸಿರಬೇಕು. ಕೋಟ್ಯಾಂತರ ಕೈಗಳು ಕೆಲಸವಿಲ್ಲದೆ ಕೂತಿವೆ. ಮನೆಮಂದಿಗೆ ಸಾಕಾಗುವಷ್ಟು ಆಹಾರ ಬಹುಪಾಲು ದುಡಿಯುವ ಜನರ ಮನೆಗಳಲ್ಲಿ ಇಲ್ಲ. ಸಮಗ್ರ ಆಹಾರ ಸಾಮಗ್ರಿ ಕಿಟ್ ಕೊಡಿಯೆಂದರೆ, ಸರ್ಕಾರ ಮದ್ಯದ ಅಂಗಡಿಗಳನ್ನು ತೆರೆದು ಜನರ ಇದ್ದಬದ್ದ ಹಣವನ್ನೂ ಬಾಚಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹಾ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಕಾರ್ಮಿಕರ ಹಾಗೂ ರೈತರ ಹಿತಕಾಯಲು ಇದ್ದ ಕಾನೂನುಗಳನ್ನು ಕಿತ್ತು ಕಾರ್ಪೊರೇಟ್ ಶಕ್ತಿಗಳ ದರೋಡೆಗೆ ಅವಕಾಶ ಮಾಡಿಕೊಡುವ ನೀತಿಗಳನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸುತ್ತಿದೆ. ಕಾರ್ಮಿಕರ ದುಡಿಮೆಯ ಅವಧಿಯನ್ನು ಹೆಚ್ಚಿಸಿ, ಕಾರ್ಮಿಕರ ಹಿತ ರಕ್ಷಿಸಲು ಇದ್ದ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ದೇಶದಾದ್ಯಂತ ಈಗಾಗಲೇ ಪ್ರಾರಂಭವಾಗಿದೆ. ಇದಲ್ಲದೆ ಕೃಷಿ ಯೋಗ್ಯ ಭೂಮಿಯನ್ನು ಕಾರ್ಪೊರೇಟ್ ಶಕ್ತಿಗಳಿಗೆ ಪರಭಾರೆ ಮಾಡಲು ಗೇಣಿ ನೀತಿಯಲ್ಲಿ, ಕೃಷಿ ಭೂಮಿಯ ಖರೀದಿಯ ನಿಯಮಗಳಲ್ಲಿ ಬದಲಾವಣೆ ತರುತ್ತಿರುವುದಲ್ಲದೆ, ರೈತರ ಬೆಳೆಗೆ ಒಂದಷ್ಟಾದರೂ ಬೆಲೆ ಸುರಕ್ಷತೆಯನ್ನು ಕೊಡುತ್ತಿದ್ದ ಎಪಿಎಂಸಿಯನ್ನು ದುರ್ಬಲಗೊಳಿಸುವ ನೀತಿಯೂ ನಿಮ್ಮ ಮುಂದಿದೆ.” ಎಂದು ಕಿಡಿಕಾರಿದ್ದಾರೆ.


ಓದಿ: ಕಾರ್ಮಿಕ ಕಾಯ್ದೆಗಳಿಗೆ ಅವಸರದ ತಿದ್ದುಪಡಿ ಹಿಂದೆ ದುರುದ್ದೇಶದ ವಾಸನೆಯಿದೆ : ಸಿದ್ದರಾಮಯ್ಯ


ಇಂತಹ ನೀತಿಗಳನ್ನು ತಿರುಚುವ ಕೆಲಸವನ್ನು ಕೂಡಲೇ ಕೈಬಿಡಬೇಕು. ಕಾರ್ಪೊರೇಟ್ ಒತ್ತಡಕ್ಕೆ ಮಣಿಯಬಾರದು, ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಬಾರದು. ಕಾರ್ಮಿಕರನ್ನು ಮತ್ತು ರೈತರನ್ನು ಬಲಿಕೊಡುವ ಪ್ರಯತ್ನ ಮಾಡಿದಲ್ಲಿ ಇಡೀ ರಾಜ್ಯದ ತೀವ್ರ ವಿರೋಧವನ್ನು ಖಂಡಿತ ಎದುರಿಸಬೇಕಾಗುತ್ತದೆ ಎಂದು ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿವೆ.

ಪತ್ರಿಕಾ ಹೇಳಿಕೆಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ಮಾನಸಯ್ಯ, ಭಾರತೀಯ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದ ಬಾಲನ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಬಸವರಾಜು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಆಹಾರ ಹಕ್ಕು ಸಮಿತಿಯ ಶಾರದಾ ಗೋಪಾಲ್, ಕರ್ನಾಟಕ ರೈತ ಸಂಘಟನೆಯ ಡಿ. ಹೆಚ್. ಪೂಜಾರ್, ಕರ್ನಾಟಕ ಶ್ರಮಿಕ ಶಕ್ತಿಯ ವರದ ರಾಜೇಂದ್ರ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಮುಂತಾದವರು ಸಹಿ ಮಾಡಿದ್ದಾರೆ.

ಬಿಬಿಎಂಪಿ ಗುತ್ತಿಗೆ ನೌಕರರ ಯುನಿಯನ್, ರೇಸ್ ಕೋರ್ಸ್ ಯುನಿಯನ್ ಬೆಂಗಳೂರು ಮತ್ತು ಮೈಸೂರು, ಬಿಡಬ್ಲೂಎಸ್‌ಎಸ್‌ಬಿ ಗುತ್ತಿಗೆ ನೌಕರರ ಸಂಘ, ಹೆಚ್‌ಎಎಲ್, ಬಿಇಎಮ್‌ಎಲ್ , ಬಿಹೆಚ್‌ಇಎಲ್ ಗುತ್ತಿಗೆ ನೌಕರರ ಸಂಘ, ಗಣಿ ಮತ್ತು ನಿರ್ಮಾಣ ಕಾರ್ಮಿಕರ ಸಂಘ, ಬಿಎಂಟಿಸಿ ಹಾಗೂ ಕೆಎಸ್ಸಾರ್ಟಿಸಿ ನೌಕರರ ಸಂಘ, ಮೈಕೋ ಬಾಸ್ ಗುತ್ತಿಗೆ ನೌಕರರ ಸಂಘಗಳು ಪ್ರತಭಟನೆಗೆ ಬೆಂಬಲ ಸೂಚಿಸಿವೆ.


ಓದಿ: ವಲಸೆ ಕಾರ್ಮಿಕರ ಸ್ಥಿತಿ ಕರುಣಾಜನಕವಾಗಿದೆ; ಅವರ ಕಷ್ಟ ನಿವಾರಣಗೆ ಕೇಂದ್ರ, ರಾಜ್ಯ ಸರ್ಕಾರಗಳು ಮಾಡಿದ್ದೇನು?: ಮದ್ರಾಸ್ ಹೈಕೋರ್ಟ್ ಪ್ರಶ್ನೆ


ವಿಡಿಯೊ ನೋಡಿ: ಉತ್ತರಪ್ರದೇಶದಿಂದ ಬಿಹಾರಕ್ಕೆ ತೆರಳಲು ರೈಲು ನೋಂದಣಿ ಮಾಡಿಸಲು ಮುಗಿಬಿದ್ದಿರುವ ವಲಸೆ ಕಾರ್ಮಿಕರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...