ಲಾಕ್ಡೌನ್ ಹಂತಹಂತವಾಗಿ ಸಡಿಲವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.31ರ ನಂತರ ರಾಜ್ಯಾದ್ಯಂತ ಎಲ್ಲಾ ದೇವಾಲಯ, ಚರ್ಚ್ ಮತ್ತು ಮಸೀದಿಗಳ ಬಾಗಿಲುಗಳನ್ನು ತೆರೆಯಲು ಅವಕಾಶ ನೀಡಲಾಗುವುದು, ಆದರೆ ಸಾಮಾಜಿ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಾರಣಾಂತಿಕ ಕೊರೋನಾ ವೈರಸ್ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಮಾರ್ಚ್.25 ರಿಂದ ದೇಶದಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಪರಿಣಾಮ ಕರ್ನಾಟಕದಲ್ಲೂ ಸಹ ಎಲ್ಲಾ ದೇವಾಲಯ, ಚರ್ಚ್ ಮತ್ತು ಮಸೀದಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇದರಿಂದ ಎಲ್ಲಾ ದೇವಾಲಯಗಳೂ ಬಹುತೇಕ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು.
We are going to open temples, mosques and churches in the state after May 31st: Karnataka CM BS Yediyurappa
(file pic) pic.twitter.com/8j9otJdoTm— ANI (@ANI) May 27, 2020
ಹೀಗಾಗಿ ಕಳೆದ ಎರಡು ತಿಂಗಳಿನಿಂದ ಅನೇಕರು ದೇವಾಲಯಗಳ ಬಾಗಿಲು ತೆರೆದು ದೇವರ ದರ್ಶನಕ್ಕೆ ಅನುಮತಿ ನೀಡಬೇಕು ಎಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದರು. ಅಲ್ಲದೆ, ದೇವಾಲಯದ ಆದಾಯವನ್ನೇ ನಂಬಿ ಬದುಕಿದ್ದ ಪೌರೋಹಿತ್ಯ ವರ್ಗ ಇದರಿಂದ ನಷ್ಟ ಅನುಭವಿಸಿದ್ದು ಅವರಿಗೂ ಸರ್ಕಾರ ಸಹಾಯ ಧನ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು.
ಈ ನಡುವೆ ರಾಜ್ಯ ಮುಜರಾಯಿ ಇಲಾಖೆ ಆನ್‌ಲೈನ್‌ನಲ್ಲಿ ದೇವರ ದರ್ಶನ ಮತ್ತು ಪೂಜೆಯನ್ನು ನೆರವೇರಿಸುವ ಕುರಿತು ಚಿಂತನೆ ನಡೆಸಿತ್ತು. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಳೆದ ವಾರ ಈ ಕುರಿತು ಮಾಹಿತಿ ನೀಡಿ, ಇಂತಹ ವೆಬ್ಸೈಟ್ ಒಂದನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದರು.
ಇದರ ಬೆನ್ನಿಗೆ ಇಂದು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಲಾಕ್‌ಡೌನ್ ಹಂತಹಂತವಾಗಿ ಸಡಿಲವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.31ರ ನಂತರ ರಾಜ್ಯದಾದ್ಯಂತ ದೇವಾಲಯ, ಚರ್ಚ್ ಮತ್ತು ಮಸೀದಿಗಳ ಆಗಿಲನ್ನು ತೆರೆಯಲಾಗುವುದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ


