Homeಮುಖಪುಟಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

ಅನುಷ್ಕ ಶರ್ಮಾಗೆ ವಿರಾಟ್‌ ಕೊಹ್ಲಿ ವಿಚ್ಛೇದನ ನೀಡಬೇಕೆಂದು ಪಟ್ಟು ಹಿಡಿದ BJP ಶಾಸಕ: ಕಾರಣವೇನು ಗೊತ್ತ?

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್, ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆಗ್ರಹಿಸಿದ್ದಾರೆ. ಆ ಮೂಲಕ ಅವರು ನಟಿ ಮತ್ತು ನಿರ್ಮಾಪಕಿಯಾಗಿರುವ  ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ವಿರಾಟ್‌ ಕೊಹ್ಲಿ ರಾಷ್ಟ್ರೀಯವಾದಿ ಕ್ರಿಕೆಟ್‌ ಆಟಗಾರರಾಗಿದ್ದಾರೆ. ಅವರು ಅಪ್ರತಿಮ ದೇಶಭಕ್ತರಾಗಿದ್ದು, ದೇಶಕ್ಕಾಗಿ ಆಡುತ್ತಾರೆ. ಹಾಗಾಗಿ ಕೂಡಲೇ ಅವರು ಅನುಷ್ಕ ಶರ್ಮಾಗೆ ವಿಚ್ಛೇದನ ನೀಡಬೇಕೆಂದು ಆ ಶಾಸಕ ತನ್ನ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾನೆ. ಆಂಟಿ ಹಿಂದೂ ಅನುಷ್ಕಾ ಶರ್ಮಾ ಎಂಬ ಹ್ಯಾಸ್‌ಟ್ಯಾಗ್‌ ಅನ್ನು ಸಹ ಬಳಸಿದ್ದಾನೆ.

ಅಷ್ಟು ಮಾತ್ರವಲ್ಲದೇ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವ್ಡೇಕರ್‌ ರವರಿಗೆ ಪತ್ರ ಬರೆದು, ಸ್ಥಳೀಯ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರಣವೇನು?

ಒಟಿಟಿ ಫ್ಲಾಟ್‌ಫಾರಂ ಅಮೆಜಾನ್ ಪ್ರೈಮ್‌ನಲ್ಲಿ ಪ್ರಸಾರವಾಗುತ್ತಿರುವ ‘ಪಾತಾಳ್ ಲೋಕ್’ ವೆಬ್ ಸೀರೀಸ್ ಸಾಕಷ್ಟು ಜನರ ಮೆಚ್ಚುಗೆ ಪಡೆದಿದೆ. ಇದರ ನಿರ್ಮಾಪಕ ಅನುಷ್ಕ ಶರ್ಮಾ. ಇದರಲ್ಲಿ ಸನಾತನ ಧರ್ಮ ನಿಂದನೆಯಾಗಿದೆ, ಪಕ್ಷ ನಿಂದನೆಯಾಗಿದೆ, ಕೋಮು ಕೋಲಾಹಲವೆಬ್ಬಿಸಿದೆ. ಇದರಲ್ಲಿ ನನ್ನ ಫೋಟೊ ಸಹ ಬಳಕೆಯಾಗಿದೆ. ಹಾಗಾಗಿ ಇದರ ನಿರ್ಮಾಪಕಿಯ ಮೆಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೇಶದ್ರೋಹದ ಕೇಸು ದಾಖಲಿಸಿಬೇಕೆಂಬುದು ಬಿಜೆಪಿ ಶಾಸಕನ ಒತ್ತಾಯವಾಗಿದೆ.

ಯಾರು ಈ ನಂದಕಿಶೋರ್‌ ಗುರ್ಜರ್‌?

ನಂದಕಿಶೋರ್ ಗುರ್ಜರ್ ಉತ್ತರಪ್ರದೇಶದ ಗಾಜಿಯಾಬಾದ್‌ನ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಈತನ ಮೇಲೆ ಈಗಾಗಲೇ IPC 147, 148, 149 ಸೆಕ್ಷನ್ ಸೇರಿದಂತೆ ಹಲವಾರು ಕ್ರಿಮಿನಲ್‌ ಪ್ರಕರಣಗಳಿವೆ. ಈತನ ಅಪ್ರಾಪ್ತ ವಯಸ್ಸಿನ ಮಗನೂ ಸಹ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿ ಕೇಸು ಎದುರಿಸುತ್ತಿದ್ದಾನೆ. ನಂದಕಿಶೋರ್ ಗುರ್ಜರ್ ಈ ಹಿಂದೆ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ಸುದ್ದಿಯಾಗಿದ್ದರು.

ಪಾತಾಳ್‌ ಲೋಕ್‌ ಬಗ್ಗೆ

ಸುದೀಪ್‌ ಶರ್ಮಾ, ಸಾಗರ್‌ ಹಾವೆಲಿ, ಹಾರ್ದಿಕ್‌ ಮೆಹ್ತಾ ಮತ್ತು ಗುಂಜಿತ್‌ ಚೋಪ್ರಾ ರಚನೆಯ ಈ ವೆಬ್‌ ಧಾರವಾಹಿಯನ್ನು ಅವಿನಾಶ್‌ ಅರುಣ್ ಮತ್ತು ಪ್ರೊಸಿತ್‌ ರಾಯ್‌ ನಿರ್ದೇಶಿಸಿದ್ದಾರೆ. ದೆಹಲಿಯ ಹೆಸರಾಂತ ಪತ್ರಕರ್ತನೊಬ್ಬನ ಕೊಲೆ ಪ್ರಯತ್ನದ ಪ್ರಕರಣದ ಜಾಡುಹಿಡಿದ ಹೊರಟ ದೆಹಲಿ ಪೊಲೀಸ್‌ ಕಣ್ಣಿಗೆ ಕಾಣುವ ಅಪರಾಧ ಲೋಕದ ಅನಾವರಣ ಇಲ್ಲಿದೆ. ಪೊಲೀಸರ ಭ್ರಷ್ಟಾಚಾರ ಮತ್ತು ಅಪರಾಧಿಗಳಿಗೆ ರಕ್ಷಣೆ, ಅಮಾಯಕರ ಬಲಿಪಶು, ಎಲ್ಲಕ್ಕೂ ಭಯೋತ್ಪಾದನೆಯ ನಂಟು ಹೊರಿಸಿ ನಿಜವಾದ ಅಪರಾಧಿಗಳು ತಪ್ಪಿಸಿಕೊಳ್ಳುವುದನ್ನು ಈ ಧಾರಾವಾಹಿ ಸಮರ್ಥವಾಗಿ ಕಟ್ಟಿಕೊಟ್ಟಿದೆ. ಜೈದೀಪ್‌ ಅಹ್ಲವಾತ್‌, ಗುಲ್‌ ಪನಾಗ್‌, ನೀರಜ್‌ ಕಬಿ, ಅಭಿಷೇಕ್‌ ಬ್ಯಾನರ್ಜಿ ಮುಂತಾದವರು ಇದರಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...